ಬೆಂಗಳೂರು : ರಾಜ್ಯದ ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಇನ್ನೂ ನಾಲ್ಕು ದಿನ ಮಳೆ ಮುಂದುವರೆಯಲಿದೆ ಎಂದು ಹವಾಮಾನಿಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯಾದ್ಯಂತ ಇಂದಿನಿಂದ ನಾಲ್ಕು ದಿನ ಮಳೆ ಮುಂದುವರೆಯಲಿದೆ.
ಕರಾವಳಿ, ದಕ್ಷಿಣ ಒಳನಾಡು ಮತ್ತು ಮಲೆನಾಡು ಪ್ರದೇಶಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ರಾಮನಗರ, ಮಂಡ್ಯ, ಮೈಸೂರು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ, ಕೊಡಗು, ಚಾಮರಾಜನಗರ, ಕೋಲಾರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಇಂದಿನಿಂದ ನಾಲ್ಕು ದಿನ ಮಳೆಯಾಗುವ ಸಾಧ್ಯತೆ ಇದೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada