ಬೆಂಗಳೂರು, ಮೇ 15- ಟಿಸಿಎಸ್ ಆಯೋಜಿಸಿರುವ 10ಕೆ ರನ್ ಎಲ್ಲರ ಜೀವನದಲ್ಲಿ ಹೊಸ ಚೈತನ್ಯ ತರಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟರು. ಅವರು ಇಂದು ಟಿಸಿಎಸ್ ಸಂಸ್ಥೆ ಕಂಠೀರವ ಸ್ಟುಡಿಯೋದಲ್ಲಿ ಆಯೋಜಿಸಿದ್ದ ವಲ್ಡರ್ ಪ್ರೀಮಿಯರ್ 10ಕೆ ರನ್ಗೆ ಚಾಲನೆ ನೀಡಿದ ನಂತರ ಕಾರ್ಯಕ್ರಮವನ್ನುದ್ದೇಶಿಸಿ ಅವರು ಮಾತನಾಡಿದರು.
10ಕೆ ರನ್ನಲ್ಲಿ 17 ಸಾವಿರಕ್ಕಿಂತ ಹೆಚ್ಚು ಜನ ಭಾಗವಹಿಸಿದ್ದು, ಹಿರಿಯರು, ವಿಕಲಚೇತನರು ತಮ್ಮ ಆರೋಗ್ಯ, ದೇಶಕ್ಕಾಗಿ ಹಾಗೂ ಜೀವನದ ಉತ್ಸಾಹಕ್ಕಾಗಿ ಓಡುತ್ತಿದ್ದಾರೆ. ಕಾರ್ಯಕ್ರಮ ಆಯೋಜಿಸಿ ಟಿಸಿಎಸ್ ಉತ್ತಮ ಕೆಲಸ ಮಾಡಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಅನೇಕ ಸರ್ಕಾರೇತರ ಸಂಸ್ಥೆಗಳು ಈ ವೇದಿಕೆ ಮೂಲಕ ತಮ್ಮ ಸಾಮಾಜಿಕ ಕೆಲಸಕ್ಕಾಗಿ ದೇಣಿಗೆ ಸಂಗ್ರಹಕ್ಕೆ ಅವಕಾಶ ಕಲ್ಪಿಸಿಕೊಟ್ಟು ಸಾಮಾಜಿಕ ಹೊಣೆಗಾರಿಕೆಯನ್ನು ಟಿಸಿಎಸ್ ಸಂಸ್ಥೆ ತೋರಿದೆ ಎಂದರು.
ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ್ ನಾರಾಯಣ, ಕ್ರೀಡೆ ಮತ್ತು ಯುವಜನ ಸಬಲೀಕರಣ ಸಚಿವ ಡಾ.ನಾರಾಯಣಗೌಡ ಮತ್ತಿತರರು ಉಪಸ್ಥಿತರಿದ್ದರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada