ಬೆಂಗಳೂರು, ಮೇ 23- ಜನಪ್ರತಿನಿಧಿಗಳ ವಿಶೇಷ ಕೋರ್ಟ್ನಿಂದ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಸಮನ್ಸ್ ಜಾರಿಯಾಗಿದೆ. ನಾಳೆ ನ್ಯಾಯಾಲಯಕ್ಕೆ ಖುದ್ದು ಹಾಜರಿಗೆ ಸಮನ್ಸ್ ಜಾರಿಗೊಳಿಸಿದ್ದು, ಮೇಕೆ ದಾಟು ಪಾದಯಾತ್ರೆ ವೇಳೆ ನಿಯಮ ಉಲ್ಲಂಘನೆ ಕುರಿತಂತೆ ರಾಮನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಕಲಾಗಿತ್ತು.
ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ ಸೇರಿದಂತೆ 29 ಮಂದಿ ವಿರುದ್ದ ಪ್ರಕರಣ ದಾಕಲಾಗಿದ್ದು, ನಾಳೆ ಬೆಂಗಳೂರಿನ ವಿಶೇಷ ಕೋರ್ಟ್ಗೆ ಹಾಜರಾಗುವಂತೆ ಸಮನ್ಸ್ ನೀಡಲಾಗಿದೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://plಇay.google.com/store/apps/details?id=com.speed.newskannada