ಮುಂಬೈ: ಅಮೀರ್ ಖಾನ್ ನಾಯಕರಾಗಿರುವ ಲಾಲ್ ಸಿಂಗ್ ಚಡ್ಡಾ ಸಿನಿಮಾದ ಟ್ರೈಲರ್ ನಿನ್ನೆ ಬಿಡುಗಡೆಯಾಗಿದೆ.
ಆದರೆ ಟ್ರೈಲರ್ ನೋಡಿದ ಕೆಲವರಿಗೆ ನಿರಾಸೆಯಾಗಿದೆ.
ಇದಕ್ಕೆ ಕಾರಣ ಸಿನಿಮಾದಲ್ಲಿ ತೆಲುಗು ಸ್ಟಾರ್ ನಟ ನಾಗಚೈತನ್ಯ ಕೂಡಾ ನಟಿಸಿದ್ದಾರೆ. ಆದರೆ ಟ್ರೈಲರ್ ನಲ್ಲಿ ಅವರ ದೃಶ್ಯಗಳನ್ನು ಹೆಚ್ಚಾಗಿ ತೋರಿಸಿಲ್ಲ.
ಇದು ತೆಲುಗು ಫ್ಯಾನ್ಸ್ ಆಕ್ರೋಶಕ್ಕೆ ಕಾರಣವಾಗಿದೆ. ತಮ್ಮ ನೆಚ್ಚಿನ ನಟನನ್ನು ಸೈಡ್ ಲೈನ್ ಮಾಡಿರುವುದು ಅಭಿಮಾನಿಗಳಿಗೆ ಇಷ್ಟವಾಗಲಿಲ್ಲ. ಈ ಕಾರಣಕ್ಕೆ ಕೆಲವರು ಸಿನಿಮಾ ಬಹಿಷ್ಕರಿಸಿ ಎಂದು ಆಕ್ರೋಶವನ್ನೂ ವ್ಯಕ್ತಪಡಿಸಿದ್ದಾರೆ.
Please follow and like us:
Tue May 31 , 2022
ಸೆಪ್ಟೆಂಬರ್ 9 ರಂದು ಅದ್ದೂರಿ ಬಿಡುಗಡೆ.ಡಾಲಿ ಧನಂಜಯ ನಾಯಕರಾಗಿ ನಟಿಸಿರುವ Once Upon A Time “ಜಮಾಲಿಗುಡ್ಡ” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಬೆಂಗಳೂರು, ಚಿಕ್ಕಮಗಳೂರು, ಕುದುರೆಮುಖ, ಗೋಕರ್ಣ, ಶಿವಮೊಗ್ಗದಲ್ಲಿ ಎಂಭತ್ತು ದಿನಗಳ ಚಿತ್ರೀಕರಣ ನಡೆದಿದೆ. ಮಾತಿನ ಜೋಡಣೆ ಸಹ ಅಂತಿಮ ಹಂತದಲ್ಲಿದೆ. ಸೆಪ್ಟೆಂಬರ್ 9 ರಂದು ಚಿತ್ರವನ್ನು ಬಿಡುಗಡೆ ಮಾಡುವುದಾಗಿ ನಿರ್ಮಾಪಕರು ತಿಳಿಸಿದ್ದಾರೆ. ಇದು 90ರ ದಶಕದಲ್ಲಿ ನಡೆಯುವ ಕಥೆ. ಬಾರ್ ಸಪ್ಲೇಯರ್ ಪಾತ್ರದಲ್ಲಿ ಡಾಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇತ್ತೀಚೆಗೆ ಬಿಡುಗಡೆಯಾದ […]