ಅತಿವೃಷ್ಟಿಗೊಳಗಾದ ಜಿಲ್ಲೆಗಳ ಡಿಸಿಗಳೊಂದಿಗೆ ಸಿಎಂ ಸಭೆ

ಬೆಂಗಳೂರು,ಜು.15- ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದು ಅತಿವೃಷ್ಟಿ ಯಿಂದ ಹಾನಿಗೊಳಗಾದ ಜಿಲ್ಲೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ರಾಜ್ಯದ ವಿವಿಧೆಡೆ ಅತಿಯಾಗಿ ಸುರಿಯುತ್ತಿರುವ ಮಳೆ ಮತ್ತು ಪ್ರಕೃತಿ ವಿಕೋಪ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ನ ದೇವನಹಳ್ಳಿಯಿಂದ ವಿಡಿಯೋ ಕಾನರೆನ್ಸ್ ಮೂಲಕ ಮುಖ್ಯಮಂತ್ರಿ ಸಭೆ ನಡೆಸಲಿದ್ದಾರೆ.

ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು, ಶಿವಮೊಗ್ಗ, ಚಿಕ್ಕಬಳ್ಳಾಪುರ, ಹಾಸನ, ಬೀದರ್, ಬೆಳಗಾವಿ, ಕಲಬುರಗಿ, ಮೈಸೂರು, ಹಾವೇರಿ, ಧಾರವಾಡ, ದಾವಣಗೆರೆ, ಯಾದಗಿರಿ, ಬಾಗಲಕೋಟೆ, ವಿಜಯ ಪುರ, ರಾಯಚೂರು, ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಸಭೆ ನಡೆಸಲಿದ್ದಾರೆ.

ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಸಭೆ ನಡೆಸಲಿದ್ದು, ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆ ಮತ್ತು ಹಾನಿ ಬಗ್ಗೆ ಮಾಹಿತಿ ಪಡೆಯಲಿದ್ದಾರೆ.
ಸಭೆಯಲ್ಲಿ ಸಂಬಂಧಪಟ್ಟ ಇಲಾಖೆಗಳ ಸಚಿವರು ಹಾಗೂ ಅಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

'ಕನ್ವರ್ ಯಾತ್ರೆ'ಗೆ ಮುನ್ನ ಜೈಪುರ ಪೊಲೀಸರು ಕಟ್ಟುನಿಟ್ಟಿನ ಭದ್ರತಾ ಸೂಚನೆಗಳನ್ನು ನೀಡಿದ್ದಾರೆ

Fri Jul 15 , 2022
‘ಕನ್ವರ್ ಯಾತ್ರೆ’ಗೆ ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿದೆ ಮತ್ತು ಅದರ ಮಾರ್ಗಗಳನ್ನು ಮೇಲ್ವಿಚಾರಣೆ ಮಾಡಲು ಡ್ರೋನ್‌ಗಳನ್ನು ನಿಯೋಜಿಸಲಾಗುವುದು ಎಂದು ಜೈಪುರ ಪೊಲೀಸರು ಗುರುವಾರ ಹೇಳಿದ್ದಾರೆ. ಪವಿತ್ರ ಶ್ರಾವಣ ಮಾಸದಲ್ಲಿ ಜೈಪುರದ ಗಲ್ಟಾ ತೀರ್ಥದಿಂದ ನಗರದ ವಿವಿಧ ದೇವಾಲಯಗಳಿಗೆ ಯಾತ್ರೆಯು ಪ್ರಾರಂಭವಾಗುತ್ತದೆ. ಜೂನ್ 28 ರಂದು ಉದಯಪುರದಲ್ಲಿ ಟೈಲರ್ ಕೊಲೆಯಾದ ಹಿನ್ನೆಲೆಯಲ್ಲಿ ಬಿಗಿ ಭದ್ರತೆಯನ್ನು ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. “ತಿಂಗಳಾದ್ಯಂತ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡಲು ವಿಶೇಷ ವ್ಯವಸ್ಥೆ ಇರುತ್ತದೆ. ಯಾತ್ರೆಯು […]

Advertisement

Wordpress Social Share Plugin powered by Ultimatelysocial