ಜೆಡಿಎಸ್ ನಾಯಕ ಎಚ್​ಡಿ ದೇವೇಗೌಡರಿಗೆ ಭಾರತ್ ಜೋಡೋ ಸಮಾರೋಪಕ್ಕೆ ಆಹ್ವಾನ.

ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ ಜೋಡೊ ಯಾತ್ರೆ ಕಾಶ್ಮೀರ ತಲುಪಿದ್ದು, ಶ್ರೀನಗರದಲ್ಲಿ ನಡೆಯುವ ಯಾತ್ರೆಯ ಸಮಾರೋಪ ಸಮಾರಂಭಕ್ಕೆ ಮಾಜಿ ಪ್ರಧಾನಿ ಹೆಚ್​ ಡಿ ದೇವೇಗೌಡ ಅವರಿಗೆ ಆಹ್ವಾನಿಸಲಾಗಿದೆ.ಬೆಂಗಳೂರು:ಕಾಂಗ್ರೆಸ್ ​ ನಾಯಕ, ಸಂಸದ ರಾಹುಲ್​ ಗಾಂಧಿ  ನೇತೃತ್ವದಲ್ಲಿ ನಡೆಯುತ್ತಿರುವ ಭಾರತ ಜೋಡೊ ಯಾತ್ರೆ  ಕಾಶ್ಮೀರ  ತಲುಪಿದೆ.

ಶ್ರೀನಗರದಲ್ಲಿ  ಯಾತ್ರೆಯ ಸಮಾರೋಪ ಸಮಾರಂಭ ನಡೆಯಲಿದೆ. ಯಾತ್ರೆಯ ಸಮಾರೋಪ ಸಮಾರಂಭಕ್ಕೆ ಮಾಜಿ ಪ್ರಧಾನಿ, ಜೆಡಿಎಸ್​ ನಾಯಕ ಹೆಚ್​ ಡಿ ದೇವೇಗೌಡ  ಅವರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ  ಆಹ್ವಾನಿಸಿದ್ದಾರೆ.

ಆದರೆ ಹೆಚ್. ಡಿ ದೇವೇಗೌಡರು ಕಾರ್ಯಕ್ರಮಕ್ಕೆ ಗೈರಾಗಲಿದ್ದಾರೆ. ಈ ಸಂಬಂಧ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪತ್ರ ಬರೆದಿರುವ ದೇವೇಗೌಡ, ನಾನು ಈ ಕಾರ್ಯಕ್ರಮಕ್ಕೆ ಹಾಜರಾಗಲು ಆಗುತ್ತಿಲ್ಲ. ರಾಹುಲ್ ಗಾಂಧಿ ಅವರಿಗೆ ಶುಭಾಷಯ ಕೋರುತ್ತೇನೆ. ದೇಶದ ಒಗ್ಗೂಡಿವಿಕೆಗೆ ರಾಹುಲ್ ಗಾಂಧಿಯವರು ಪಾದಯಾತ್ರೆ ಮಾಡಿದ್ದಾರೆ. ರಾಷ್ಟ್ರಪಿತ ಮಹಾತ್ಮ ಗಾಂಧಿ ಹುತಾತ್ಮರಾದ ದಿನದಂದು ಈ ಕಾರ್ಯಕ್ರಮ ಆಯೋಜಿಸುತ್ತಿರುವುದು ಅತ್ಯಂತ ಸೂಕ್ತವಾಗಿದೆ. 3,500 ಕಿಲೋ‌ಮೀಟರ್ ರಾಹುಲ್ ಗಾಂಧಿ ಯಾತ್ರೆ ನಡೆಸಿದ್ದಾರೆ. ನನ್ನ ಶುಭಾಶಯಗಳನ್ನು ರಾಹುಲ್ ಗಾಂಧಿ ಅವರಿಗೆ ತಿಳಿಸಿ ಎಂದು ಪತ್ರದ ಮೂಲಕ ಅಭಿನಂದನೆ ತಿಳಸಿದ್ದಾರೆ.

 

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಬಹು ನಿರೀಕ್ಷಿತ "ಕ್ರೀಮ್" ಚಿತ್ರದ ಚಿತ್ರೀಕರಣ ಮುಕ್ತಾಯ.

Tue Jan 24 , 2023
  ಖ್ಯಾತ ಲೇಖಕ ಅಗ್ನಿ ಶ್ರೀಧರ್ ಅವರು ಕಥೆ ಹಾಗೂ ಸಂಭಾಷಣೆ ಬರೆದಿರುವ, ದೇವೇಂದ್ರ ಡಿ.ಕೆ ನಿರ್ಮಿಸಿರುವ ಹಾಗೂ ಅಭಿಷೇಕ್ ಬಸಂತ್ ನಿರ್ದೇಶನದ “ಕ್ರೀಮ್” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಬೆಂಗಳೂರು ಸುತ್ತಮುತ್ತ ಚಿತ್ರೀಕರಣ ನಡೆದಿದೆ. ಬಹು ನಿರೀಕ್ಷಿತ ಈ ಚಿತ್ರದ ನಾಯಕಿಯಾಗಿ ಸಂಯುಕ್ತ ಹೆಗಡೆ ಅಭಿನಯಿಸಿದ್ದಾರೆ. ಅಚ್ಯುತ್ ಕುಮಾರ್, ಅರುಣ್ ಸಾಗರ್ ಮುಂತಾದವರು ತಾರಾಬಳಗದಲ್ಲಿದ್ದಾರೆ. ಕಳೆದವರ್ಷ ಈ ಚಿತ್ರ ಆರಂಭವಾಗಿದ್ದು, ಶೀರ್ಷಿಕೆ ಬಿಡುಗಡೆ ಸಮಾರಂಭ ಅದ್ದೂರಿಯಾಗಿ ನೆರವೇರಿತು. ಆನಂತರ ಚಿತ್ರತಂಡದಿಂದ […]

Advertisement

Wordpress Social Share Plugin powered by Ultimatelysocial