ಕಿವಿಯಲ್ಲಿ ಹೂ ಇಟ್ಟುಕೊಂಡು ಪ್ರತಿಭಟಿಸಿದ ಬಿಜೆಪಿ ಸದಸ್ಯ.

ಕೊಪ್ಪಳ:ಅನುದಾನ ಹಂಚಿಕೆಯಲ್ಲಿ ‌ತಾರತಮ್ಯ ಮಾಡಲಾಗುತ್ತಿದೆ ಎಂದು ಆರೋಪಿಸಿ ಇಲ್ಲಿನ‌ ನಗರಸಭೆಯ 16ನೇ ವಾರ್ಡ್ ‌ಬಿಜೆಪಿ ಸದಸ್ಯ ಸೋಮಣ್ಣ ಹಳ್ಳಿ ಮಂಗಳವಾರ ನಡೆದ ಸಾಮಾನ್ಯ ಸಭೆಯಲ್ಲಿ ಎರಡೂ ಕಿವಿ ಮೇಲೆ ಹೂ ಇಟ್ಟುಕೊಂಡು ಪ್ರತಿಭಟನೆ ನಡೆಸಿದರು.

ಸಭಾಂಗಣದ ಮುಂಭಾಗದಲ್ಲಿ ನೆಲದ ಮೇಲೆ ಕುಳಿತು ಮಲ್ಲಿಗೆ ಹಾಗೂ ಕನಕಾಂಬರ ಹೂ ಇಟ್ಟುಕೊಂಡು ನಗರಸಭೆ ಅಧ್ಯಕ್ಷೆ ಕಾಂಗ್ರೆಸ್‌ನ ಶಿವಗಂಗಾ ಭೂಮಕ್ಕನವರ ವಿರುದ್ಧ ಸೋಮಣ್ಣ ‌ಆಕ್ರೋಶ ವ್ಯಕ್ತಪಡಿಸಿದರು‌. ಇದು ಬಿಜೆಪಿ ಹಾಗೂ ಕಾಂಗ್ರೆಸ್ ಸದಸ್ಯರ ನಡುವೆ ಜಟಾಪಟಿಗೂ ಕಾರಣವಾಯಿತು.

ನನ್ನ ವಾರ್ಡ್‌ನಲ್ಲಿ ಸಮುದಾಯ ಭವನ ನಿರ್ಮಾಣ‌ ಮಾಡುವಂತೆ ಮೇಲಿಂದ ಮೇಲೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಕಾಂಗ್ರೆಸ್ ಸದಸ್ಯರ ವಾರ್ಡ್‌ಗಳಿಗೆ ಮಾತ್ರ ಅನುದಾನ ನೀಡಲಾಗುತ್ತಿದೆ‌ ಎಂದು ಸೋಮಣ್ಣ ಆರೋಪಿಸಿದರು.

ಈ ವೇಳೆ ಮಧ್ಯೆ ಪ್ರವೇಶಿಸಿದ‌ ನಗರಸಭೆ ಆಯುಕ್ತ ಎಚ್.ಎನ್. ಭಜಕ್ಕನವರ ‘ಕಂದಾಯ ಭೂಮಿಯಲ್ಲಿ ಸಮುದಾಯ ಭವನ‌ ನಿರ್ಮಾಣ ಮಾಡಲು ಅವಕಾಶವಿಲ್ಲ. ಕಾನೂನು‌ ಮೀರಿ ಮಾಡಲು ಸಾಧ್ಯವಿಲ್ಲ’ ಎಂದರು

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

'ಹಿಂದೂ ಧರ್ಮದ ಪರಮೋಚ್ಛ ಮಠಾಧೀಶ' ನಿತ್ಯಾನಂದಗೆ ರಕ್ಷಣೆ ನೀಡಿ:

Tue Feb 28 , 2023
ಲಾಸ್ ಏಂಜಲೀಸ್, ಫೆಬ್ರವರಿ. 28: ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಪ್ರಕರಣದ ಆರೋಪಿ ಸ್ವಯಂಘೋಷಿತ ದೇವಮಾನವ ನಿತ್ಯಾನಂದ ತಲೆಮರೆಸಿಕೊಂಡಿದ್ದು, ತಾವೇ ಒಂದು ರಾಷ್ಟ್ರವನ್ನು ಮಾಡಿಕೊಂಡಿದ್ದಾರೆ. ಅದಕ್ಕೆ ಯುನೈಟೆಡ್ ಸ್ಟೇಟ್ಸ್ ಆಫ್ ಕೈಲಾಸ ಎಂದು ಕರೆಯಲಾಗಿದ್ದು, ಅದರ ಪ್ರತಿನಿಧಿಗಳು ಇತ್ತೀಚೆಗೆ ಜಿನೀವಾದಲ್ಲಿ ನಡೆದ ವಿಶ್ವಸಂಸ್ಥೆಯ ಸಭೆಯಲ್ಲಿ ಭಾಗವಹಿಸಿದ್ದಾರೆ. ಈ ಯುನೈಟೆಡ್ ಸ್ಟೇಟ್ಸ್ ಆಫ್ ಕೈಲಾಸ ಎಂಬ ಕಾಲ್ಪನಿಕ ‘ದೇಶ’ದ ಪ್ರತಿನಿಧಿಯು ವಿಶ್ವಸಂಸ್ಥೆಯ ಸಭೆಯಲ್ಲಿ ಮಾತನಾಡುತ್ತಾ, ನಿತ್ಯಾನಂದ ಅವರಿಗೆ ಕಿರುಕುಳ ನೀಡಲಾಗುತ್ತಿದ್ದು, ‘ಹಿಂದೂ […]

Advertisement

Wordpress Social Share Plugin powered by Ultimatelysocial