ರಾಜಧಾನಿಯ ಹೋಟೆಲ್ ವೊಂದಕ್ಕೆ ವಂಚಿಸಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ.

ಹೊಸದಿಲ್ಲಿ: ಯುನೈಟೆಡ್ ಅರಬ್ ಎಮಿರೇಟ್ಸ್ ಸರ್ಕಾರದ ಅಧಿಕಾರಿಯಂತೆ ಸೋಗು ಹಾಕಿದ ರಾಷ್ಟ್ರ ರಾಜಧಾನಿಯ ಹೋಟೆಲ್ ವೊಂದಕ್ಕೆ ವಂಚಿಸಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ.

ಆರೋಪಿಯು ದೆಹಲಿಯ ಸ್ಟಾರ್ ಹೋಟೆಲ್ ಗೆ 23 ಲಕ್ಷಕ್ಕೂ ಹೆಚ್ಚು ಮೊತ್ತದ ಬಾಕಿ ಬಿಲ್ ಪಾವತಿಸದೆ ಪರಾರಿಯಾಗಿದ್ದ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

ಬಂಧಿತ ವ್ಯಕ್ತಿಯನ್ನು ಕರ್ನಾಟಕದ ದಕ್ಷಿಣ ಕನ್ನಡ ಮೂಲದ ಮಹಮದ್ ಷರೀಫ್ (41) ಎಂದು ಗುರುತಿಸಲಾಗಿದೆ. ಈತ ನಕಲಿ ವ್ಯಾಪಾರ ಕಾರ್ಡ್ ತೋರಿಸಿ ಕಳೆದ ವರ್ಷ ಸುಮಾರು ಮೂರು ತಿಂಗಳ ಕಾಲ ಲೀಲಾ ಪ್ಯಾಲೇಸ್ ಹೋಟೆಲ್‌ ನಲ್ಲಿ ತಂಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಜನವರಿ 19ರಂದು ದಕ್ಷಿಣ ಕನ್ನಡ ಜಿಲ್ಲೆಯಿಂದಲೇ ಆತನನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ.

ಅಲ್ಲದೆ ಹೊಟೇಲ್‌ ನ ಬೆಲೆಬಾಳುವ ವಸ್ತುಗಳೊಂದಿಗೆ ಪರಾರಿಯಾಗಿದ್ದು, ಬಾಕಿ ಬಿಲ್‌ ಗಳನ್ನು ಪಾವತಿಸದೆ ಹೋಟೆಲ್‌ ಗೆ 23,46,413 ರೂ. ಮೌಲ್ಯದ ನಷ್ಟ ಉಂಟಾಗಿದೆ.

ಘಟನೆಯ ನಂತರ, ಹೋಟೆಲ್‌ ನ ಜನರಲ್ ಮ್ಯಾನೇಜರ್ ಅನುಪಮ್ ದಾಸ್ ಗುಪ್ತಾ ಅವರ ದೂರಿನ ಮೇರೆಗೆ ಪೊಲೀಸರು ಈ ವರ್ಷದ ಜನವರಿ 14 ರಂದು ಸರೋಜಿನಿ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದರು.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಬ್ರಿಟನ್ ಪ್ರಧಾನಿ ಸುನಕ್‌ಗೆ ದಂಡ.

Sun Jan 22 , 2023
ಕಾರಿನಲ್ಲಿ ಪ್ರಯಾಣ ಮಾಡುವ ಸಮಯದಲ್ಲಿ ಹಿಂಬದಿಯ ಸೀಟಿನ ಬೆಲ್ಟ್ ಧರಿಸಲು ವಿಫಲರಾದ ಹಿನ್ನೆಲೆಯಲ್ಲಿ ಬ್ರಿಟನ್ ಪ್ರಧಾನಿ ರಿಷಿ ಸುನಕ್ ಅವರಿಗೆ ಪೊಲೀಸರು ದಂಡ ವಿಧಿಸಿದ್ದಾರೆ. ಬ್ರಿಟನ್‌ನಲ್ಲಿ ಒಬ್ಬ ವ್ಯಕ್ತಿ ಸೀಟ್‌ಬೆಲ್ಟ್ ಧರಿಸಲು ವಿಫಲವಾದರೆ ಕನಿಷ್ಟ ೫೦೦ ಪೌಂಡ್‌ಗಳ (೬೨೦ ಡಾಲರ್) ವರೆಗೆ ದಂಡವನ್ನು ವಿಧಿಸುವ ಕಾನೂನು ಇದೆ. ಇದೇ ಕಾನೂನನ್ನು ಪೊಲೀಸರು ಪ್ರಧಾನಿಗೂ ಅನ್ವಯಿಸಿ ದಂಡ ವಿಧಿಸಿದ್ದಾರೆ. ಸೀಟು ಬೆಲ್ಟ್ ಧರಿಸದೆ ಕಾರಿನಲ್ಲಿ ಪ್ರಯಾಣಿಸಿದ ಮತ್ತು ಪೊಲೀಸರು ದಂಡ ವಿಧಿಸಿದ […]

Advertisement

Wordpress Social Share Plugin powered by Ultimatelysocial