ಭಾರತದ ಗಡಿ ನುಸುಳುತ್ತಿದ್ದಾಗ ಸಿಕ್ಕಿಬಿದ್ದ ಪಾಕ್ ಪ್ರಜೆ!

ವದೆಹಲಿ,ಮಾ.10- ಗಡಿ ನುಸುಳಿ ದೇಶ ಪ್ರವೇಶಿಸಲು ಯತ್ನಿಸುತ್ತಿದ್ದ ಪಾಕ್ ನುಸುಳುಕೋರನೊಬ್ಬನನ್ನು ಗಡಿ ಭದ್ರತಾ ಪಡೆಗಳು ಬಂಧಿಸುವಲ್ಲಿ ಯಶಸ್ವಿಯಾಗಿವೆ. ಪಂಜಾಬ್‍ನ ಭಾರತ-ಪಾಕಿಸ್ತಾನ ಅಂತರಾಷ್ಟ್ರೀಯ ಗಡಿ ಸಮೀಪ ಅಕ್ರಮವಾಗಿ ಗಡಿ ನುಸುಳಲು ಯತ್ನಿಸುತ್ತಿದ್ದ ವ್ಯಕ್ತಿಯನ್ನು ಗಡಿ ಭದ್ರತಾ ಪಡೆ (ಬಿಎಸ್‍ಎಫ್‍) ಇಂದು ಬಂಧಿಸಿದೆ ಎಂದು ಗಡಿ ಪಡೆ ವಕ್ತಾರರು ತಿಳಿಸಿದ್ದಾರೆ.

ಪಂಜಾಬ್‍ನ ಫಿರೋಜ್‍ಪುರ್ ಸೆಕ್ಟರ್‍ನಲ್ಲಿರುವ ಗಡಿ ಪೋಸ್ಟ್ ತಿರಾತ್ ಪ್ರದೇಶದಲ್ಲಿ ಮಧ್ಯರಾತ್ರಿ ಗಡಿ ನುಸುಳಲು ಯತ್ನಿಸುತ್ತಿದ್ದ ಆತನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದಾಗ ವ್ಯಕ್ತಿ ತಾನು ಪಾಕಿಸ್ತಾನದ ಖೈಬರ್ ಜಿಲ್ಲೆಯ ನಿವಾಸಿ ಎಂದು ಹೇಳಿಕೊಂಡಿದ್ದಾನೆ.

ಭದ್ರತಾ ಮತ್ತು ಗುಪ್ತಚರ ಅಧಿಕಾರಿಗಳ ಜಂಟಿ ತಂಡವು ಪ್ರಸ್ತುತ ಅವರನ್ನು ವಿಚಾರಣೆ ನಡೆಸುತ್ತಿದ್ದು, ನಂತರ ಸ್ಥಳೀಯ ಪೊಲೀಸರಿಗೆ ಹಸ್ತಾಂತರಿಸಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪಂಜಾಬ್‍ನ ಇದೇ ಗಡಿಯಲ್ಲಿ ಬಾಂಗ್ಲಾದೇಶಿ ಮತ್ತು ಪಾಕಿಸ್ತಾನಿ ಪ್ರಜೆಯನ್ನು ಗಡಿ ಪಡೆ ಬಂಧಿಸಿದ ಒಂದು ದಿನದ ನಂತರ ಈ ಘಟನೆ ನಡೆದಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ದೆಹಲಿಯಲ್ಲಿ ಮಹಿಳಾ ಮೀಸಲಾತಿ ಉಪವಾಸ ಸತ್ಯಾಗ್ರಹ!

Fri Mar 10 , 2023
ವಿರೋಧ ಪಕ್ಷಗಳ ಧರಣಿಗಳಿಂದ ರಾಷ್ಟ್ರ ರಾಜಧಾನಿಯಲ್ಲಿ ರಾಜಕೀಯ ತಾಪಮಾನ ಇದ್ದಕ್ಕಿದ್ದಂತೆ ಹೆಚ್ಚಾಗಿದೆ. ವಿಶೇಷವಾಗಿ ಬಿಆರ್‌ಎಸ್ ಮಹಿಳಾ ನಾಯಕಿ, ಎಂಎಲ್‌ಸಿ ಕವಿತಾ ಭಾರತ ಜಾಗೃತಿ ನೇತೃತ್ವದಲ್ಲಿ ಮಹಿಳಾ ಮೀಸಲಾತಿ ಕುರಿತು ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದಾರೆ. ಬೆಳಗ್ಗೆಯಿಂದಲೇ ಹಲವು ಮಹಿಳಾ ಕಾರ್ಯಕರ್ತರು ಕವಿತಾ ಅವರನ್ನು ಬೆಂಬಲಿಸಲು ಆಗಮಿಸುತ್ತಿದ್ದಾರೆ. ಮಹಿಳಾ ಮೀಸಲಾತಿಗಾಗಿ ಎಂಎಲ್ ಸಿ ಕವಿತಾ ನಡೆಸುತ್ತಿರುವ ಒಂದು ದಿನದ ಉಪವಾಸ ಸತ್ಯಾಗ್ರಹಕ್ಕೆ ಸಿದ್ಧತೆಗಳು ಪೂರ್ಣಗೊಂಡಿವೆ. ಬೆಳಗ್ಗೆ 11 ಗಂಟೆಗೆ ಜಂತರ್ […]

Advertisement

Wordpress Social Share Plugin powered by Ultimatelysocial