ರೋಚಕ ಸೆಣೆಸಾಟದಲ್ಲಿ ದಕ್ಷಿಣ ಆಫ್ರಿಕಾಗೆ ಭರ್ಜರಿ ಗೆಲುವು,

ಕ್ಷಿಣ ಆಫ್ರಿಕಾ ಪ್ರವಾಸ ಕೈಗೊಂಡಿರುವ ವೆಸ್ಟ್ ಇಂಡೀಸ್ ಮೊದಲ ಪಂದ್ಯದಲ್ಲಿ ಸೋಲಿನ ರುಚಿ ಕಂಡಿದೆ. ಬೌಲಿಂಗ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿದರೂ ವೆಸ್ಟ್ ಇಂಡೀಸ್ ಬ್ಯಾಟಿಂಗ್‌ನಲ್ಲಿ ಎರಡೂ ಇನ್ನಿಂಗ್ಸ್‌ನಲ್ಲಿ ವೈಫಲ್ಯ ಅನುಭವಿಸಿದ ಕಾರಣ 87 ರನ್‌ಗಳ ಅಂತರದಿಂದ ಸೋಲು ಅನುಭವಿಸಿದೆ.ಈ ಮೂಲಕ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಆತಿಥೇಯ ದಕ್ಷಿಣ ಆಫ್ರಿಕಾ ಮೇಲುಗೈ ಸಾಧಿಸಿದಂತಾಗಿದೆ.

ಈ ಪಂದ್ಯದಲ್ಲಿ ಮೊದಲಿಗೆ ಟಾಸ್ ಗೆದ್ದು ಬ್ಯಾಟಿಂಗ್ ನಡೆಸಿದ್ದ ದಕ್ಷಿಣ ಆಫ್ರಿಕಾ ತಂಡಕ್ಕೆ ಅದ್ಭುತ ಆರಂಭ ದೊರೆಯಿತು. ಟೀನ್ ಎಲ್ಗರ್ ಹಾಗೂ ಐಡೆನ್ ಮಾರ್ಕ್ರಮ್ ಮೊದಲ ವಿಕೆಟ್‌ಗೆ ಬರೊಬ್ಬರಿ 141 ರನ್‌ಗಳ ಜೊತೆಯಾಟವನ್ನು ನೀಡಿದರು. ಈ ಜೊತೆಯಾಟ ಈ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡದ ಮೇಲುಗೈ ಕಾರಣವಾಯಿತು. ಡೀನ್ ಎಲ್ಗರ್ 71 ರನ್‌ಗಳಿಸಿದರೆ ಮಾರ್ಕ್ರಮ್ 115 ರನ್‌ಗಳ ಕೊಡುಗೆ ನೀಡಿದರು. ಉಳಿದಂತೆ ಯಾವ ಆಟಗಾರನಿಂದಲೂ ಹೇಳಿಕೊಳ್ಳುವ ಪ್ರದರ್ಶನ ಬಾರಲಿಲ್ಲ. ಹಾಗಾಗಿ ಮೊದಲ ಇನ್ನಿಂಗ್ಸ್‌ನಲ್ಲಿ ದಕ್ಷಿಣ ಆಫ್ರಿಕಾ ತಂಡ 342 ರನ್‌ಗಳನ್ನು ಗಳಿಸಿತು.ಇದಕ್ಕೆ ಪ್ರತಿಯಾಗಿ ಬ್ಯಾಟಿಂಗ್ ನಡೆಸಿದ ವೆಸ್ಟ್ ಇಂಡೀಸ್ ತಂಡ 212 ರನ್‌ಗಳನ್ನ‍ಷ್ಟೇ ಗಳಿಸಿತು. ವೆಸ್ಟ್ ಇಂಡೀಸ್ ಪರವಾಗಿ ಆರ್ ರೈಫರ್ ಮಾತ್ರವೇ ಅರ್ಧ ಶತಕ ಸಿಡಿಸಿ ನೆರವಾದರು. ಹೀಗಾಗಿ ಹರಿಣಗಳ ಪಡೆ 130 ರನ್‌ಗಳ ಭರ್ಜರಿ ಮುನ್ನಡೆ ಪಡೆಯುವಲ್ಲಿ ಯಶಸ್ವಿಯಾಗಿತ್ತು.

ಆದರೆ ಎರಡನೇ ಇನ್ನಿಂಗ್ಸ್‌ನಲ್ಲಿ ವಿಂಡೀಸ್ ಬೌಲರ್‌ಗಳು ಆಫ್ರಿಕಾ ತಂಡಕ್ಕೆ ಭಾರೀ ಆಘಾತ ನೀಡಿತು. ಭರ್ಜರಿ ಬೌಲಿಂಗ್ ದಾಳಿ ನಡೆಸಿದ ವೆಸ್ಟ್ ಇಂಡೀಸ್ ಬೌಲರ್‌ಗಳು ಕೇವಲ 116 ರನ್‌ಗಳಿಗೆ ಆತಿಥೆಯನ್ನು ಆಲೌಟ್ ಮಾಡುವಲ್ಲಿ ಯಶಸ್ವಿಯಾಯಿತು. ಹೀಗಾಗಿ ಅಂತಿಮ ಇನ್ನಿಂಗ್ಸ್‌ನಲ್ಲಿ ವೆಸ್ಟ್ ಇಂಡೀಸ್ ತಂಡಕ್ಕೆ ಗೆಲ್ಲಲು 247 ರನ್‌ಗಳ ಗುರಿ ನಿಗದಿಪಡಿಸಿತು ದಕ್ಷಿಣ ಆಫ್ರಿಕಾ. ಹೀಗಾಗಿ ಈ ಪಂದ್ಯ ಸಾಕಷ್ಟು ಪೈಪೋಟಿಯಿಂದ ಕೂಡಿರುವ ನಿರೀಕ್ಷೆ ಮೂಡಿಸಿತ್ತು.

ಆದರೆ ವೆಸ್ಟ್ ಇಂಡೀಸ್ ದಾಂಡಿಗರು ಅಂತಿಮ ಇನ್ನಿಂಗ್ಸ್‌ನಲ್ಲಿಯೂ ಹೀನಾಯ ಪ್ರದರ್ಶನ ನೀಡಿದ್ದಾರೆ. ಎರಡನೇ ಇನ್ನಿಂಗ್ಸ್‌ನಲ್ಲಿ ವಿಂಡೀಸ್ ಪರವಾಗಿ ಜರ್ಮನ್ ಬ್ಲ್ಯಾಕ್‌ವುಡ್ ಮಾತ್ರವೇ ಅದ್ಭುತ ಪ್ರದರ್ಶನ ನೀಡಿದ್ದು 79 ರನ್‌ಗಳ ಕೊಡುಗೆ ನೀಡಿದರು. ಕೇವಲ 159 ರನ್‌ಗಳಿಗೆ ಆಲೌಟ್ ಆದ ವೆಸ್ಟ್ ಇಂಡೀಸ್ ತಂಡ 87 ರನ್‌ಗಳ ಅಂತರದ ಸೋಲು ಅನುಭವಿಸಿದೆ.

ದಕ್ಷಿಣ ಆಫ್ರಿಕಾ ಆಡುವ ಬಳಗ: ಡೀನ್ ಎಲ್ಗರ್, ಐಡೆನ್ ಮಾರ್ಕ್ರಾಮ್, ಟೋನಿ ಡಿ ಜೋರ್ಜಿ, ಟೆಂಬಾ ಬವುಮಾ (ನಾಯಕ), ಕೀಗನ್ ಪೀಟರ್ಸನ್, ಹೆನ್ರಿಚ್ ಕ್ಲಾಸೆನ್ (ವಾಕ್), ಸೆನುರಾನ್ ಮುತುಸ್ಯಾಮಿ, ಮಾರ್ಕೊ ಜಾನ್ಸೆನ್, ಅನ್ರಿಚ್ ನಾರ್ಟ್ಜೆ, ಕಗಿಸೊ ರಬಾಡ, ಜೆರಾಲ್ಡ್ ಕೋಟ್ಜಿ

ಬೆಂಚ್: ಕೇಶವ್ ಮಹಾರಾಜ್, ಸೈಮನ್ ಹಾರ್ಮರ್, ವಿಯಾನ್ ಮುಲ್ಡರ್, ರಯಾನ್ ರಿಕೆಲ್ಟನ್ವೆಸ್ಟ್ ಇಂಡೀಸ್ ತಂಡ: ಕ್ರೈಗ್ ಬ್ರಾಥ್‌ವೈಟ್ (ನಾಯಕ), ಟಾಗೆನರೈನ್ ಚಂದ್ರಪಾಲ್, ರೇಮನ್ ರೈಫರ್, ಜೆರ್ಮೈನ್ ಬ್ಲಾಕ್‌ವುಡ್, ಕೈಲ್ ಮೇಯರ್ಸ್, ರೋಸ್ಟನ್ ಚೇಸ್, ಜೋಶುವಾ ಡಾ ಸಿಲ್ವಾ (ವಿಕೆಟ್ ಕೀಪರ್), ಜೇಸನ್ ಹೋಲ್ಡರ್, ಅಲ್ಜಾರಿ ಜೋಸೆಫ್, ಕೆಮರ್ ರೋಚ್, ಶಾನನ್ ಗೇಬ್ರಿಯಲ್

ಬೆಂಚ್: ಗುಡಕೇಶ್ ಮೋಟಿ, ಡೆವೊನ್ ಥಾಮಸ್, ಅಲಿಕ್ ಅಥಾನಾಜೆ, ಅಕೀಮ್ ಜೋರ್ಡಾನ್

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

Please follow and like us:

Leave a Reply

Your email address will not be published. Required fields are marked *

Next Post

ಮೇಷ ರಾಶಿ ಭವಿಷ್ಯ.

Fri Mar 3 , 2023
  ನಿಮ್ಮ ನಗು ಖಿನ್ನತೆಯ ವಿರುದ್ಧ ಕೆಲಸ ಮಾಡುತ್ತದೆ. ಇಂದು ನೀವು ಸುಲಭವಾಗಿ ಬಂಡವಾಳ ಪಡೆಯಬಹುದು –ಬಾಕಿಯಿರುವ ಸಾಲಗಳನ್ನು ಸಂಗ್ರಹಿಸಬಹುದು ಅಥವಾ ಹೊಸ ಯೋಜನೆಗಳಿಗೆ ಕೆಲಸ ಮಾಡಲು ಹಣ ಕೇಳಬಹುದು. ಭಾವನಾತ್ಮಕ ಅಪಾಯ ನಿಮ್ಮ ಪರವಾಗಿರುತ್ತದೆ. ನಿಮ್ಮ ಪ್ರೇಮ ಜೀವನವಾಗಿ ಮದುವೆಯ ಪ್ರಸ್ತಾಪ ಜೀವನಪೂರ್ಣದ ಬಂಧದಲ್ಲಿ ಬದಲಾಗಬಹುದು. ನಿಮ್ಮ ಬಾಸ್ ಇಂದು ನಿಮ್ಮ ಕೆಲಸವನ್ನು ಪ್ರಶಂಸಿಸಬಹುದು. ಇಂದು ನೀವು ಪ್ರಮುಖ ಸಮಸ್ಯೆಗಳ ಮೇಲೆ ಗಮನ ನೀಡಬೇಕು. ಇಂದು, ನೀವು ಮತ್ತು […]

Advertisement

Wordpress Social Share Plugin powered by Ultimatelysocial