ದುಬೈನಲ್ಲಿ ಬಸ್ -ಕಂಟೇನರ್ ಮಧ್ಯೆ ಭೀಕರ ಅಪಘಾತ!

ರಾಯಚೂರು : ರಾಯಚೂರಿನಿಂದ ಉಮ್ರಾ ಯಾತ್ರೆಗೆ ತೆರಳಿದ್ದ ಇಡೀ ಕುಟುಂಬ ದುಬೈನಲ್ಲಿ ಬಸ್ ಹಾಗೂ ಕಂಟೇನರ್ ನಡುವಿನ ಭೀಕರ ರಸ್ತೆ ಅಪಘಾತಕ್ಕೆ ಒಳಗಾಗಿದ್ದು, ರಾಯಚೂರು ಮೂಲದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಓರ್ವನ ಸ್ಥಿತಿ ಗಂಭೀರವಾದ ಘಟನೆ ಬೆಳಕಿಗೆ ಬಂದಿದೆ.

 ಬ್ರವರಿ 14 ರಂದು ನಗರದಿಂದ ಮೆಕ್ಕಾ, ಮದೀನಾಕ್ಕೆ ತೆರಳಿದ್ದರು. ಫೆಬ್ರವರಿ 22 ರಂದು ಬೆಳಗಿನ ಜಾವ ಶಫಿ ಕುಟುಂಬ ಪ್ರಯಾಣಿಸುತ್ತಿದ್ದ ಬಸ್ ಕಂಟೇನರ್‌ಗೆ ಡಿಕ್ಕಿ ಹೊಡೆದಿದೆ. ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಬಸ್ ಚಾಲಕ ಸೇರಿ ಬಸ್‌ನಲ್ಲಿದ್ದ ಹಲವರು ಸಾವನ್ನಪ್ಪಿದ್ದಾರೆ. ಅದರಲ್ಲಿ ರಾಯಚೂರು ಮೂಲಕ ನಾಲ್ವರು ಸಾವನ್ನಪ್ಪಿದ್ದು ಬೆಳಕಿಗೆ ಬಂದಿದ್ದು, ಮೃತರು ನಗರದ ಆಶಾಪುರ ರಸ್ತೆಯ ದ್ವಾರಕಾನಗರದ ನಿವಾಸಿಗಳಾಗಿದ್ದಾರೆ ಎಂದೆನ್ನಲಾಗಿದೆ.

ರಾಯಚೂರು ಕೃಷಿ ವಿವಿಯಲ್ಲಿ ಕುಲಪತಿಗಳ ಆಪ್ತ ಸಹಾಯಕರಾಗಿದ್ದ ಶಫಿ ಸುಳ್ಳೇದ್ (53), ಅವರ ಪತ್ನಿ ಸಿರಾಜ್ ಬೇಗಂ (45), ಪುತ್ರಿ ಶಿಫಾ (20), ತಾಯಿ ಬೇಬಿ ಜಾನ್ (64) ಮೃತ ದುರ್ದೈವಿಗಳು. ಅಪಘಾತದಲ್ಲಿ ಪುತ್ರ ಸಮೀರ್‌ಗೆ ಗಂಭೀರವಾಗಿ ಗಾಯಗಳಾಗಿದ್ದು, ದುಬೈನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಮಾಹಿತಿ ಲಭ್ಯವಾಗಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕೇಂದ್ರ ಗೃಹ ಸಚಿವರಿಗೆ ಜಿಲ್ಲಾಡಳಿತದಿಂದ ಸ್ವಾಗತ ಡಿಸಿ, ಕಮೀಷನರ್ ವಿಶೇಷ ಗೌರವ.

Thu Feb 23 , 2023
  ವಾಣಿಜ್ಯನಗರಿ ಹುಬ್ಬಳ್ಳಿಗೆ ಆಗಮಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ವಿಶೇಷ ಗೌರವ ಸೂಚಿಸುವ ಮೂಲಕ ಅದ್ದೂರಿಯಾಗಿ ಸ್ವಾಗತಿಸಲಾಯಿತು.ಹೌದು ಬಳ್ಳಾರಿಯ ಸಂಡೂರಿನ ಕಾರ್ಯಕ್ರಮದಲ್ಲಿ ಭಾಗವಹಿಸಲು ಹುಬ್ಬಳ್ಳಿಗೆ ಆಗಮಿಸಿದ ಕೇಂದ್ರ ಸಚಿವ ಅಮಿತ್ ಶಾ ಅವರನ್ನು ಜಿಲ್ಲಾಧಿಕಾರಿ ಗುರುದತ್ತ ಹೆಗ್ಡೆ ಹಾಗೂ ಪೊಲೀಸ್ ಆಯುಕ್ತರಾದ ರಮನ್ ಗುಪ್ತಾ ಸರ್ಕಾರಿ ಗೌರವದೊಂದಿಗೆ ಸ್ವಾಗತಿಸಿದ್ದಾರೆ.ಇನ್ನೂ ವಿಶೇಷ ವಿಮಾನದ ಮೂಲಕ ಬಂದಿಳಿದ ಅಮಿತ್ ಶಾ ಮತ್ತೇ ವಿಶೇಷ ಹೆಲಿಕಾಪ್ಟರ್ ಮೂಲಕವೇ ಬಳ್ಳಾರಿಯ ಸಂಡೂರಿಗೆ […]

Advertisement

Wordpress Social Share Plugin powered by Ultimatelysocial