3 ತಿಂಗಳ ಭ್ರೂಣವನ್ನು ರಸ್ತೆಗೆ ಎಸೆದು ಪರಾರಿಯಾದ ಯುವ ಜೋಡಿ,

ಗುಜರಾತ್‌ನ ಸೂರತ್ ನಗರದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ನಗರದ ಗೊಡತಾರಾ ಪ್ರದೇಶದಲ್ಲಿ ಯುವ ಜೋಡಿಯೊಂದು ರಸ್ತೆಬದಿಯಲ್ಲಿ ಭ್ರೂಣ ಎಸೆದು ಪರಾರಿಯಾದ ಹೃದಯವಿದ್ರಾವಕ ಘಟನೆ ಜರುಗಿದೆ. 3 ತಿಂಗಳ ಭ್ರೂಣವನ್ನು ನಿರ್ದಾಕ್ಷಿಣ್ಯವಾಗಿ ರಸ್ತೆಯಲ್ಲಿ ಬಿಸಾಡಿ ಹೋಗಿರುವ ದೃಶ್ಯ ಅಲ್ಲಿ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಅದರ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಯುವ ಜೋಡಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಭ್ರೂಣವನ್ನು ಪರೀಕ್ಷೆಗಾಗಿ ಆಸ್ಪತ್ರೆಗೆ ಕಳುಹಿಸಲಾಗಿದೆ.

ಘಟನೆಯ ಕುರಿತು ರಾತ್ರಿ ಗಸ್ತಿನಲ್ಲಿದ್ದ ಪೊಲೀಸರಿಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಗೋದಾರಾ ಪ್ರದೇಶದ ಲಕ್ಷ್ಮೀನಾರಾಯಣ ಸೊಸೈಟಿಯ ಗೇಟ್ ಬಳಿ ಭ್ರೂಣ ಬಿದ್ದಿರುವ ಬಗ್ಗೆ ಜನರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಪೊಲೀಸರು ಭ್ರೂಣವನ್ನು ವಶಪಡಿಸಿಕೊಂಡು ಸಮೀಪದ ಸಮೀರ್ ಆಸ್ಪತ್ರೆಗೆ ರವಾನಿಸಿದ್ದಾರೆ.

ಸೊಸೈಟಿಯ ಗೇಟ್‌ನಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿದ್ದ ದೃಶ್ಯಾವಳಿಗಳನ್ನು ಪೊಲೀಸರು ಪರಿಶೀಲಿಸಿದಾಗ ಯುವಕ – ಯುವತಿ ಕತ್ತಲಲ್ಲಿ ಭ್ರೂಣ ಎಸೆದು ಪರಾರಿಯಾಗಿರುವುದು ಕಂಡು ಬಂದಿದೆ. ಯುವಕ ಕೈಯಲ್ಲಿ ಫೈಲ್ ಹಿಡಿದು ನಿಂತಿದ್ದರೆ, ಯುವತಿ ಭ್ರೂಣವನ್ನು ರಸ್ತೆಬದಿ ಕತ್ತಲಲ್ಲಿ ಎಸೆದಿದ್ದಾಳೆ. ಸಿಸಿಟಿವಿ ದೃಶ್ಯಾವಳಿಗಳಲ್ಲಿ ಇಬ್ಬರ ಮುಖಗಳು ಸ್ಪಷ್ಟವಾಗಿ ಗೋಚರಿಸದಿದ್ದರೂ, ಇಬ್ಬರೂ ಒಂದೇ ಪ್ರದೇಶದ ನಿವಾಸಿಗಳಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಇದರ ಆಧಾರದ ಮೇಲೆ ಅವರನ್ನು ಗುರುತಿಸಲು ಕ್ರಮಕೈಗೊಳ್ಳಲಾಗುತ್ತಿದೆ.

ಕಳೆದ ವರ್ಷ ಮಧ್ಯಪ್ರದೇಶದಲ್ಲಿ ನಡೆದಿತ್ತು ಇಂತಹದ್ದೇ ಘಟನೆ ;

ಪಿಟಿಐ ವರದಿ ಪ್ರಕಾರ, ಕಳೆದ ವರ್ಷ ಮಧ್ಯಪ್ರದೇಶದಲ್ಲಿ ಇದೇ ರೀತಿಯ ಘಟನೆ ನಡೆದಿತ್ತು. ಕಳೆದ ವರ್ಷ ಆಗಸ್ಟ್‌ನಲ್ಲಿ 40 ವರ್ಷದ ಮಹಿಳೆಯೊಬ್ಬರು ತನ್ನ 4 ತಿಂಗಳ ಭ್ರೂಣವನ್ನು ಉಜ್ಜಯಿನಿ ರೈಲು ನಿಲ್ದಾಣದಲ್ಲಿ ಬಿಟ್ಟು ಹೋಗಿದ್ದರು. ಆದರೆ, ಸಿಸಿಟಿವಿ ದೃಶ್ಯಾವಳಿಗಳ ಸಹಾಯದಿಂದ ಆಕೆಯನ್ನು ಗುರುತಿಸಿ ಬಂಧಿಸಲಾಯಿತು. ಮಗುವನ್ನು ಸಾಕಲು ತನ್ನ ಬಳಿ ಹಣವಿಲ್ಲ, ಮಗು ಬೇಡವೆಂದು ಭ್ರೂಣವನ್ನು ಬಿಟ್ಟು ಹೋಗಿರುವುದಾಗಿ ಮಹಿಳೆ ಪೊಲೀಸರಿಗೆ ತಿಳಿಸಿದ್ದರು.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕೇಂದ್ರ ಸಚಿವ ಅಮಿತ್‌ ಶಾ ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ ನೀಡಲಿದ್ದಾರೆ : ಪುತ್ತೂರಿನಲ್ಲಿ ಮದ್ಯ ಮಾರಾಟ ಬಂದ್‌

Sat Feb 11 , 2023
    ಮಂಗಳೂರು ಫೆಬ್ರವರಿ 11: ಬಿಜೆಪಿ ಪಕ್ಷದ ಚಾಣಕ್ಯ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಶನಿವಾರ ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿಗೆ ಭೇಟಿ ನೀಡಲಿದ್ದಾರೆ. ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಸಮಯದಲ್ಲೇ ಬಿಜೆಪಿ ಹೈಕಮಾಂಡ್‌ ನಾಯಕರು ಕರ್ನಾಟಕಕ್ಕೆ ಭೇಟಿ ನೀಡುತ್ತಿದ್ದಾರೆ. ಇತ್ತೀಚಿಗಷ್ಟೇ ಪ್ರಧಾನ ಮಂತ್ರಿ ನರೇಂದ್ರ ಮೋದಿ ಕಲಬುರ್ಗಿಗೆ ಭೇಟಿ ನೀಡಿದ್ದರು, ಇದರ ಬೆನ್ನಲ್ಲೇ ಕೇಂದ್ರ ಸಚಿವ ಅಮಿತ್‌ ಶಾ ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ ನೀಡಲಿದ್ದಾರೆ. […]

Advertisement

Wordpress Social Share Plugin powered by Ultimatelysocial