ನಟ ಸಾಹಸಸಿಂಹ ವಿಷ್ಣುವರ್ಧನ್ ಸ್ಮಾರಕ ಲೋಕಾರ್ಪಣೆ.

ಮೈಸೂರು: ನಟ ಸಾಹಸಸಿಂಹ ವಿಷ್ಣುವರ್ಧನ್ ಸ್ಮಾರಕ ಲೋಕಾರ್ಪಣೆ ಬೆನ್ನಲ್ಲೇ ಅಸಮಾಧಾನ ಭಗಿಲೆದ್ದಿದೆ. ಸ್ಮಾರಕದಲ್ಲಿ ಲೈಟಿಂಗ್ ವ್ಯವಸ್ಥೆ ಮಾಡಿಲ್ಲವೆಂದು ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೈಸೂರು ತಾಲೂಕಿನ ಹಾಲಾಳು ಬಳಿ ವಿಷ್ಣುವರ್ಧನ್ ಸ್ಮಾರಕ ನಿರ್ಮಾಣ ಮಾಡಲಾಗಿದ್ದು, ನಿನ್ನೆ ಬೆಳಗ್ಗೆಯಿಂದ ಸಂಜೆವರೆಗೆ ಅದ್ದೂರಿ ಉದ್ಘಾಟನೆ ಕಾರ್ಯಕ್ರಮ ನಡೆದಿತ್ತು.

ನಿನ್ನೆ ಸಂಜೆ ವಿಷ್ಣು ಸ್ಮಾರಕ ವೀಕ್ಷಣೆಗೆ ಬಂದ ಅಭಿಮಾನಿಗಳಿಗೆ ನಿರಾಸೆಯಾಗಿದೆ.

ಕತ್ತಲಿದ್ದ ಕಾರಣ ಸ್ಮಾರಕ ವೀಕ್ಷಿಸದೇ ಅಭಿಮಾನಿಗಳು ಹಿಂದಿರುಗಿದ್ದಾರೆ. ಕಾಟಾಚಾರಕ್ಕೆ ಸ್ಮಾರಕ ಉದ್ಘಾಟಿಸಲಾಗಿದೆ ಎಂದು ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದು. ಲೈಟಿಂಗ್ ವ್ಯವಸ್ಥೆ ಸೇರಿದಂತೆ ಸಕಲ ಸೌಲಭ್ಯ ಕಲ್ಪಿಸಲು ಒತ್ತಾಯಿಸಲಾಗಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

'ಏನೇ ತ್ಯಾಗ ಮಾಡಿಯಾದರೂ 2023 ಕ್ಕೆ ಮತ್ತೆ ಬಿಜೆಪಿ ಮುಖ್ಯಮಂತ್ರಿ ಮಾಡ್ತೀನಿ'

Mon Jan 30 , 2023
ಬೆಳಗಾವಿ: ಏನೇ ತ್ಯಾಗ ಮಾಡಿಯಾದರೂ 2023 ಕ್ಕೆ ಮತ್ತೆ ಬಿಜೆಪಿ ಮುಖ್ಯಮಂತ್ರಿ ಮಾಡ್ತೀನಿ ಎಂದು ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.ಅವರು ಗೋಕಾಕ್ ತಾಲೂಕಿನ ಕೊನ್ನುರಿನಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು.  “ನಾನು 6 ಬಾರಿ ಶಾಸಕನಾಗಿ ಈಗ 7 ನೆ ಬಾರಿ ಶಾಸಕನಾಗಿದ್ದೇನೆ.8 ನೆ ಬಾರಿ ಶಾಸಕನಾಗುವ ನಿರ್ಧಾರ ನಿಮ್ಮ ಮೇಲೆ ಬಿಟ್ಟಿದ್ದೇನೆ.ಮುಂದಿನ ಬಾರಿ ಶಾಸಕನಾದ ಮೇಲೆ ರಾಜಕೀಯದಿಂದ ನಿವೃತ್ತಿ ಆಗಬೇಕೆಂದಿದ್ದೇನೆ.ಆದರೆ ಇದೆ ಬಾರಿ ಚುನಾವಣೆಗೆ ನಿಲ್ಲುತ್ತಿರಲಿಲ್ಲ. […]

Advertisement

Wordpress Social Share Plugin powered by Ultimatelysocial