ಕೊನೆಗೂ ಮಗಳ ಮುದ್ದು ಮುಖ ರಿವೀಲ್ ಮಾಡಿದ ನಟಿ ಪ್ರಿಯಾಂಕಾ ಚೋಪ್ರಾ!

ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಅವರು ಇದೇ ಮೊದಲ ಬಾರಿಗೆ ತಮ್ಮ ಪುತ್ರಿ ಮಾಲ್ತಿ ಮೇರಿ ಚೋಪ್ರಾ ಜೋನಾಸ್ ಅವರ ಫೋಟೋವನ್ನು ರಿವೀಲ್ ಮಾಡಿದ್ದಾರೆ. ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಅವರು ಇದೇ ಮೊದಲ ಬಾರಿಗೆ ತಮ್ಮ ಪುತ್ರಿ ಮಾಲ್ತಿ ಮೇರಿ ಚೋಪ್ರಾ ಜೋನಾಸ್ ಅವರ ಫೋಟೋವನ್ನು ರಿವೀಲ್ ಮಾಡಿದ್ದಾರೆ.
ಹಾಲಿವುಡ್ ವಾಕ್ ಆಫ್ ಫೇಮ್ ಸ್ಟಾರ್ ಕಾರ್ಯಕ್ರಮದಲ್ಲಿ ಪತಿ ನಿಕ್ ಜೋನಾಸ್ ಮತ್ತು ಸಹೋದರರ ಜೊತೆ ಪಿಗ್ಗಿ ರೆಡ್ ಕಾರ್ಪೆಟ್ ವಾಕ್ ಮಾಡಿದ್ದರು. ಈ ಕಾರ್ಯಕ್ರಮದಲ್ಲಿ ಪ್ರಿಯಾಂಕಾ ಮೊದಲ ಸಾಲಿನಲ್ಲಿ ಕಾಣಿಸಿಕೊಂಡಿದ್ದು ಮಡಿಲಿನಲ್ಲಿ ಮಗಳಿದ್ದಳು. ಕ್ರೀಮ್ ಬಣ್ಣದ ಧಿರುಸು, ಅದಕ್ಕೆ ಮ್ಯಾಚ್ ಆಗುವ ಹೇರ್ಬ್ಯಾಂಡ್ನಲ್ಲಿ ಮಾಲ್ತಿ ಮೇರಿ ಚೋಪ್ರಾ ಜೋನಾಸ್ ಕಾಣಿಸಿಕೊಂಡಿದ್ದು, ಮಗುವಿನ ಕಿವಿಯಲ್ಲಿ ಸಣ್ಣ ಕಿವಿಯೋಲೆ ನೆಟ್ಟಿಗರ ಗಮನ ಸೆಳೆದಿದೆ. ನಟಿ ಪ್ರಿಯಾಂಕಾ ಚೋಪ್ರಾ ಹಾಗೂ ನಿಕ್ ಜೋನಸ್ ದಂಪತಿ ಬಾಡಿಗೆ ತಾಯ್ತನದ ಮೂಲಕ ಮಗಳನ್ನು ಪಡೆದಿದ್ದರು.

ಆದರೆ, ಮಗಳ ಮುಖವನ್ನು ಎಲ್ಲಿಯೂ ರಿವೀಲ್ ಮಾಡಿರಲಿಲ್ಲ. ಮಗಳಿಗೆ ಮಾಲ್ತಿ ಮೇರಿ ಚೋಪ್ರಾ ಜೋನಸ್ ಎಂದು ಪ್ರಿಯಾಂಕಾ ಹೆಸರು ಇಟ್ಟಿದ್ದಾರೆ. ಈ ಹಿಂದೆ ಮಗಳ ಫೋಟೋ ಹಂಚಿಕೊಳ್ಳುವಾಗ ಪ್ರಿಯಾಂಕಾ ಅವರು ಮುಖಕ್ಕೆ ಎಮೋಜಿ ಹಾಕುತ್ತಿದ್ದರು. ಇದೀಗ ಮಗಳ ಫೋಟೋವನ್ನು ರಿವೀಲ್ ಮಾಡಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಜೋಳ ಖರೀದಿಗೆ ವಿಧಿಸಿದ್ದ ನಿರ್ಬಂಧ ತೆರವುಗೊಳಿಸಲಾಗಿದೆ.

Tue Jan 31 , 2023
ಬೆಂಗಳೂರು: ಜೋಳ ಖರೀದಿಗೆ ವಿಧಿಸಿದ್ದ ನಿರ್ಬಂಧ ತೆರವುಗೊಳಿಸಲಾಗಿದೆ. ರೈತರು ಹೆಚ್ಚಿನ ಪ್ರಮಾಣದಲ್ಲಿ ಬೆಂಬಲ ಬೆಲೆ ಜೋಳ ಮಾರಾಟ ಮಾಡಲು ಅವಕಾಶ ನೀಡಲಾಗಿದೆ. ಎಕರೆಗೆ 10 ಕ್ವಿಂಟಲ್ ನಂತೆ ಗರಿಷ್ಠ 20 ಕ್ವಿಂಟಲ್ ವರೆಗೆ ಬೆಂಬಲ ಬೆಲೆಯಡಿ ಜೋಳ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಜೋಳ ಬೆಳೆದ ರೈತರು ಈ ಬಗ್ಗೆ ಆಸಕ್ತಿ ತೋರಿಸಲಿಲ್ಲ. ತಾವು 50 – 100 ಕ್ವಿಂಟಲ್ ಜೋಳ ಬೆಳೆದರೆ ಸರ್ಕಾರ ಕೇವಲ 20 ಕ್ವಿಂಟಲ್ ಖರೀದಿಸುವುದು ಸರಿಯಲ್ಲ ಎಂದು […]

Advertisement

Wordpress Social Share Plugin powered by Ultimatelysocial