ಎಲ್ಲಾ ಕೋವಿಡ್ ಪಾಸಿಟಿವ್ ಪ್ರಕರಣಗಳನ್ನು ಜಿನೋಮ್ ಸೀಕ್ವೆನ್ಸಿಂಗ್‌ಗೆ ಕಳುಹಿಸಲಾಗುವುದು : ಕೇಜ್ರಿವಾಲ್

ಎಲ್ಲಾ ಕೋವಿಡ್ ಪಾಸಿಟಿವ್ ಪ್ರಕರಣಗಳನ್ನು ಜಿನೋಮ್ ಸೀಕ್ವೆನ್ಸಿಂಗ್‌ಗೆ ಕಳುಹಿಸಲಾಗುವುದು: ದೆಹಲಿ ಸಿಎಂ ಕೇಜ್ರಿವಾಲ್

ನವದೆಹಲಿ: ದೇಶದಲ್ಲಿ ಓಮಿಕ್ರಾನ್ ಪ್ರಕರಣಗಳು ಹೆಚ್ಚುತ್ತಿರುವುದರ ನಡುವೆಯೇ ರಾಷ್ಟ್ರ ರಾಜಧಾನಿಯಲ್ಲಿ ವರದಿಯಾಗುವ ಎಲ್ಲಾ ಕೊರೋನಾ ವೈರಸ್ ಪಾಸಿಟಿವ್ ಪ್ರಕರಣಗಳನ್ನು ಜೀನೋಮ್ ಸೀಕ್ವೆನ್ಸಿಂಗ್‌ಗೆ ಕಳುಹಿಸಲಾಗುವುದು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಸೋಮವಾರ ಹೇಳಿದ್ದಾರೆ.

ಓಮಿಕ್ರಾನ್ ಆತಂಕದ ಹಿನ್ನೆಲೆಯಲ್ಲಿ ಆರೋಗ್ಯ ಕಾರ್ಯಕರ್ತರು ಮತ್ತು ಇತರರಿಗೆ ಕೋವಿಡ್ ಲಸಿಕೆಯ ಬೂಸ್ಟರ್ ಡೋಸ್ ನೀಡಲು ಅನುಮತಿ ನೀಡಬೇಕು ಎಂದು ದೆಹಲಿ ಸಿಎಂ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಓಮಿಕ್ರಾನ್ ರೂಪಾಂತರಿ ಪ್ರಕರಣಗಳು ಹೆಚ್ಚುತ್ತಿದ್ದರೂ ಯಾರೂ ಭಯಪಡುವ ಅಗತ್ಯವಿಲ್ಲ ಎಂದು ಅವರು ಹೇಳಿದ್ದಾರೆ.

ಕಳೆದ ಕೆಲವು ದಿನಗಳಿಂದ ನಗರದಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿವೆ. ನಿನ್ನೆ(ಭಾನುವಾರ) 100ಕ್ಕಿಂತ ಹೆಚ್ಚು ಪ್ರಕರಣಗಳು ವರದಿಯಾಗಿವೆ. ಇದು ಯಾವ ರೀತಿಯ ಕೋವಿಡ್ ಪ್ರಕರಣಗಳು, ಸಾಮಾನ್ಯ ಕೋವಿಡ್ ಪ್ರಕರಣಗಳಾ ಅಥವಾ ಓಮಿಕ್ರಾನ್ ರೂಪಾಂತರಿ ಎಂದು ನಮಗೆ ತಿಳಿದಿಲ್ಲ. ಆದ್ದರಿಂದ ಇದನ್ನು ಖಚಿತಪಡಿಸಿಕೊಳ್ಳಲು ನಾವು ಈಗ ಎಲ್ಲಾ ಪಾಸಿಟಿವ್ ಪ್ರಕರಣಗಳ ಮಾದರಿಗಳನ್ನು ಜೀನೋಮ್ ಸೀಕ್ವೆನ್ಸಿಂಗ್‌ ಕಳುಹಿಸಲು ನಿರ್ಧರಿಸಿದ್ದೇವೆ ಎಂದು ಕೇಜ್ರಿವಾಲ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ವಾರದಲ್ಲಿ 3 ದಿನ ರಜೆ.. ಸಂಬಳದಲ್ಲಿ ಬದಲಾವಣೆ.. ಯಾವಾಗಿನಿಂದ ಗೊತ್ತಾ?

Mon Dec 20 , 2021
ನವದೆಹಲಿ: ವಾರದಲ್ಲಿ ಕೇವಲ ನಾಲ್ಕು ದಿನ ಏನು ಮಾಡಬೇಕು ಎಂದು ಯೋಚಿಸುತ್ತಿದ್ದೀರಾ? ಹಾಗಾದ್ರೇ ನಿಮಗಾಗಿ ಕೇಂದ್ರ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಲು ಮುಂದಾಗಿದೆ. ಕೆಲಸದ ಅವಧಿ ಹಾಗೂ ಸ್ಯಾಲರಿಗೆ ಸಂಬಂಧಪಟ್ಟಂತೆ ಕೇಂದ್ರ ಸರ್ಕಾರ ಹಲವು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವುದಕ್ಕೆ ಮುಂದಾಗಿದ್ದು, ಇವುಗಳು ಚಾಲನೆಗೆ ಬಂದರೆ.. ಆಗ ವಾರಕ್ಕೆ ನಾಲ್ಕು ದಿನ ಕೆಲಸ ದಿನಗಳು ಮಾತ್ರ ಇರುತ್ತವೆ. ಅಂದರೆ ಮೂರು ದಿನಗಳ ರಜೆಗಳು ದೊರೆಯುತ್ತವೆ. ವೇತನಗಳು, ಸಾಮಾಜಿಕ ಭದ್ರತೆ, ಕೈಗಾರಿಕಾ ಸಂಬಂಧಗಳು, […]

Advertisement

Wordpress Social Share Plugin powered by Ultimatelysocial