ಅಹಮದಾಬಾದ್: ಪ್ರವಾಸಿ ವೆಸ್ಟ್ ಇಂಡೀಸ್ ವಿರುದ್ಧದ ಅಂತಿಮ ಏಕದಿನ ಪಂದ್ಯದಲ್ಲಿ ಭಾರತ ಸಾಧಾರಣ ಮೊತ್ತ ಪೇರಿಸಿದೆ.

ಅಹಮದಾಬಾದ್: ಪ್ರವಾಸಿ ವೆಸ್ಟ್ ಇಂಡೀಸ್ ವಿರುದ್ಧದ ಅಂತಿಮ ಏಕದಿನ ಪಂದ್ಯದಲ್ಲಿ ಭಾರತ ಸಾಧಾರಣ ಮೊತ್ತ ಪೇರಿಸಿದೆ.ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಟೀಮ್ ಇಂಡಿಯಾ ಆರಂಭಿಕ ಆಘಾತ ಎದುರಿಸಿತ್ತು. 50 ಓವರ್‌ಗಳಲ್ಲಿ 265 ರನ್ ಗಳಿಸಿ ಆಲೌಟ್ ಆಗಿದೆ.ಪ್ರಮುಖ ಆಟಗಾರರಾದ ರೋಹಿತ್ ಶರ್ಮಾ 13, ವಿರಾಟ್ ಕೊಹ್ಲಿ 00, ಶಿಖರ್ ಧವನ್ 10 ರನ್ ಗಳಿಸಿ ಬ್ಯಾಟಿಂಗ್ ವೈಫಲ್ಯ ಅನುಭವಿಸಿದರು. ಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದ ಶ್ರೇಯಸ್ ಅಯ್ಯರ್ (80), ರಿಷಭ್ ಪಂತ್ (56) ಅರ್ಧಶತಕ ಗಳಿಸಿ ಮಿಂಚಿದರು. ಇತ್ತ ದೀಪಕ್ ಚಾಹರ್ 38, ವಾಷಿಂಗ್ಟನ್ ಸುಂದರ್ 33 ರನ್‌ ಗಳಿಸಿ ತಂಡಕ್ಕೆ ಆಸರೆಯಾದರು.ವೆಸ್ಟ್‌ ಇಂಡೀಸ್ ಪರ ಜೇಸನ್ ಹೋಲ್ಡರ್‌ 4, ಅಲ್ಜಾರಿ ಜೋಸೆಫ್ 2, ಹೇಡನ್ ವಾಲ್ಶ್ 2, ಒಡಿಯನ್ ಸ್ಮಿತ್, ಫ್ಯಾಬಿಯನ್ ಅಲೆನ್ ತಲಾ ಒಂದು ವಿಕೆಟ್ ಪಡೆದರು.ಭಾರತ ತಂಡದಲ್ಲಿ ನಾಲ್ಕು ಬದಲಾವಣೆ: ಇಂದಿನ ಪಂದ್ಯದಲ್ಲಿ ಕೆ.ಎಲ್. ರಾಹುಲ್, ದೀಪಕ್ ಹೂಡಾ ಹಾಗೂ ಯಜುವೇಂದ್ರ ಚಾಹಲ್‌ ಹಾಗೂ ಶಾರ್ದೂಲ್ ಠಾಕೂರ್ ಅವರನ್ನು ಆಯ್ಕೆಗೆ ಪರಿಗಣಿಸಿಲ್ಲ. ಅವರ ಸ್ಥಾನಗಳಲ್ಲಿ ಶಿಖರ್ ಧವನ್, ಶ್ರೇಯಸ್ ಅಯ್ಯರ್, ದೀಪಕ್ ಚಾಹರ್ ಮತ್ತು ಕುಲ್‌ದೀಪ್ ಯಾದವ್ ಅವರನ್ನು ಸೇರ್ಪಡೆಗೊಳಿಸಲಾಗಿದೆ.ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಈಗಾಗಲೇ 2-0 ಅಂತರದ ಗೆಲುವು ದಾಖಲಿಸಿರುವ ಟೀಮ್ ಇಂಡಿಯಾ, ಅಂತಿಮ ಪಂದ್ಯವನ್ನು ಗೆದ್ದು ಸರಣಿ ಕ್ಲೀನ್‌ಸ್ವೀಪ್‌ ಮಾಡಿಕೊಳ್ಳುವ ಇರಾದೆಯಲ್ಲಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ರಷ್ಯಾ-ಉಕ್ರೇನ್ ಉದ್ವಿಗ್ನತೆಯು ತೈವಾನ್ ಅನ್ನು ಆಕ್ರಮಿಸುವ ಚೀನಾದ ಯೋಜನೆ;

Fri Feb 11 , 2022
ರಷ್ಯಾ-ಉಕ್ರೇನ್ ಉದ್ವಿಗ್ನತೆಯು ತೈವಾನ್ ಅನ್ನು ಆಕ್ರಮಿಸುವ ಚೀನಾದ ಯೋಜನೆಗಳನ್ನು ಬಲಪಡಿಸುತ್ತದೆ ರಷ್ಯಾ-ಉಕ್ರೇನ್ ಗಡಿಯಲ್ಲಿ ಬೆಳವಣಿಗೆಯಾಗುತ್ತಿರುವ ಪರಿಸ್ಥಿತಿಯನ್ನು ಇಡೀ ಜಗತ್ತು ಸೂಕ್ಷ್ಮವಾಗಿ ಗಮನಿಸುತ್ತಿರುವಾಗ, ತೈವಾನ್ ಮೇಲೆ ಆಕ್ರಮಣ ಮಾಡುವ ಚೀನಾದ ಯೋಜನೆಗಳು ಕಾಯುತ್ತಿರುವ ಮತ್ತೊಂದು ದುರಂತವಿದೆ ಎಂದು ಮಾಧ್ಯಮ ವರದಿ ತಿಳಿಸಿದೆ. ವಾಷಿಂಗ್ಟನ್ ಮೂಲದ ಗ್ಲೋಬಲ್ ಸ್ಟ್ರಾಟ್ ವ್ಯೂ ತನ್ನ ವರದಿಯಲ್ಲಿ, ತೈವಾನ್‌ನ ವಾಯುಪ್ರದೇಶದಲ್ಲಿ ಚೀನಾದ ಫೈಟರ್ ಜೆಟ್‌ಗಳಿಂದ ದೊಡ್ಡ ಪ್ರಮಾಣದ ಆಕ್ರಮಣಗಳ ಇತ್ತೀಚಿನ ಪ್ರಕರಣಗಳು ಮತ್ತು ಮಿಲಿಟರಿ ಸಂಘರ್ಷದ ಬಗ್ಗೆ […]

Advertisement

Wordpress Social Share Plugin powered by Ultimatelysocial