15 ದಿನಗಳಲ್ಲಿ ಅಕ್ರಮ ಕಲ್ಲು ಗಣಿಗಾರಿಕೆಗೆ ಕಡಿವಾಣ; ತಪ್ಪಿತಸ್ಥ ಅಧಿಕಾರಿಗಳ ವಿರುದ್ಧವೂ ಕ್ರಮ

 

ಚಾಮರಾಜನಗರ: ಗುಮ್ಮಕಲ್ಲು ದುರಂತ ಪ್ರಕರಣದ ಬೆನ್ನಲ್ಲೇ ಎಚ್ಚೆತ್ತ ರಾಜ್ಯ ಸರ್ಕಾರ ಅಕ್ರಮ ಗಣಿಗಾರಿಕೆಗೆ ಕಡಿವಾಣ ಹಾಕಲು ಮುಂದಾಗಿದೆ.ಚಾಮರಾಜನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ, 15 ದಿನಗಳೊಳಗೆ ಅಕ್ರಮ ಕಲ್ಲು ಗಣಿಗಾರಿಕೆ ನಿಲ್ಲಿಸುತ್ತೇವೆ. ಪ್ರಭಾವಿಗಳ ಕ್ವಾರಿಗಳ ವಿರುದ್ಧವೂ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆಒಂದು ತಿಂಗಳ ಕಾಲ ಜಿಲ್ಲೆಯಲ್ಲಿ ಕಲ್ಲು ಗಣಿಗಾರಿಕೆ ಸ್ಥಗಿತಗೊಳಿಸಲಾಗುವುದು. ನಾಳೆಯಿಂದಲೇ ಜಿಲ್ಲಾಧಿಕಾರಿಗಳ ನೇತೃತ್ವದ ಅಧಿಕಾರಿಗಳ ತಂಡ ಕ್ವಾರಿಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಅಕ್ರಮ ಕಲ್ಲು ಗಣಿಗಾರಿಕೆಗೆ ಅವಕಾಶ ನೀಡಿದ್ದರೆ ಅಂತಹ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ನಿಯಮ ಬಾಹಿರವಾಗಿ ಗಣಿಗಾರಿಕೆ ನಡೆಸುತ್ತಿರುವುದು ಕಂಡುಬಂದರೆ ಸ್ಥಳದಲ್ಲೇ ಕ್ರಮಕ್ಕೆ ಸೂಚಿಸಲಾಗಿದೆ ಎಂದು ತಿಳಿಸಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ರಾಜಕೀಯ ಟೀಕೆಗಳು ಮರ್ಯಾದೆಯ ಗೆರೆ ದಾಟಬಾರದು: ಸಿದ್ದರಾಮಯ್ಯ ಅಡ್ಡಕಸುಬಿ ಬಜೆಟ್ ಹೇಳಿಕೆಗೆ ಬಿಜೆಪಿ ಟಾಂಗ್

Sat Mar 5 , 2022
ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ದ ರಾಜ್ಯ ಬಿಜೆಪಿ ಕಿಡಿಕಾರಿದೆ. ಸಿದ್ದರಾಮಯ್ಯ ಅಡ್ಡಕಸುಬಿ ಬಜೆಟ್ ಎಂದು ಟ್ವೀಟ್ ಮೂಲಕ ಬಜೆಟ್ ಟೀಕಿಸಿದ್ದಾರೆ. ಸಿದ್ದರಾಮಯ್ಯ ಟೀಕೆಗೆ ರಾಜ್ಯ ಬಿಜೆಪಿ ಘಟಕ ಟಾಂಗ್ ಕೊಟ್ಟಿದೆ.ರಾಜಕೀಯ ಟೀಕೆಗಳು ಮರ್ಯಾದೆಯ ಗೆರೆ ದಾಟಬಾರದು.ಆದರೆ ಸಿದ್ದರಾಮಯ್ಯ ಅವರು ರಾಜ್ಯದ ಆಯವ್ಯಯವನ್ನೇ ಅಡ್ಡಕಸುಬಿ ಬಜೆಟ್‌ ಎಂದು ವ್ಯಾಖ್ಯಾನಿಸಿದ್ದಾರೆ. ಪ್ರಜಾಪ್ರಭುತ್ವದ ರೀತಿ ರಿವಾಜುಗಳಿಗೆ ವಿರುದ್ಧವಾದ ಹೇಳಿಕೆಯನ್ನು ಸಿದ್ದರಾಮಯ್ಯರಿಂದ ರಾಜ್ಯದ ಜನರು ನಿರೀಕ್ಷಿಸಿರಲಿಲ್ಲ. ಇದು ರಾಜ್ಯದ ಜನತೆಗೆ ಮಾಡಿದ ಅವಮಾನ ಎಂದು ಬಿಜೆಪಿ […]

Advertisement

Wordpress Social Share Plugin powered by Ultimatelysocial