ಆಳವಾದ ಕಮರಿಗೆ ಬಿದ್ದ ಕ್ಯಾಬ್: ಒಂದೇ ಕುಟುಂಬದ ಐವರ ದುರ್ಮರಣ

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯ ಮನ್ಸಾರ್ ರಸ್ತೆಯಲ್ಲಿ ಶನಿವಾರ ಬೆಳಿಗ್ಗೆ ಪ್ರಯಾಣಿಕರಿದ್ದ ಕ್ಯಾಬ್ ಕಮರಿಗೆ ಉರುಳಿದ ಪರಿಣಾಮ ಐವರು ಸಾವನ್ನಪ್ಪಿದ್ದಾರೆ ಮತ್ತು ಒಬ್ಬರು ಗಾಯಗೊಂಡಿದ್ದಾರೆ.ಕಾಶ್ಮೀರಕ್ಕೆ ಹೋಗುವ ಕ್ಯಾಬ್ ಮುಂಜಾನೆ ಮನ್ಸಾರ್ ನಿಂದ ಹೊರಟ ಕೆಲವೇ ಕಿಲೋಮೀಟರ್ ದೂರದಲ್ಲಿ ಅಪಘಾತಕ್ಕೀಡಾಯಿತು ಮತ್ತು ಆಳವಾದ ಕಮರಿಗೆ ಬಿದ್ದಿತು ಎಂದು ಪೊಲೀಸರು ತಿಳಿಸಿದ್ದಾರೆ.ಮಾಹಿತಿ ಪಡೆದ ತಕ್ಷಣ ರಕ್ಷಣಾ ತಂಡಗಳನ್ನು ಸ್ಥಳಕ್ಕೆ ಧಾವಿಸಿ ಗಾಯಳುಗಳನ್ನು ಆಸ್ಪತ್ರೆಗೆ ಸ್ಥಳಾಂತರಿಸಿ ಚಿಕಿತ್ಸೆ ನೀಡಲಾಯಿತು. ಆದರೂ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಒಬ್ಬರಿಗೆ ಗಂಭೀರ ಗಾಯಗಳಾಗಿವೆ ಮೃತದೇಹಗಳನ್ನು ಹೊರತೆಗೆದು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಮೃತದರೆಲ್ಲರೂ ಒಂದೇ ಕುಟುಂಬದವರು ಎಂದು ಶಂಕಿಸಲಾಗಿದೆ ಆದರೆ ಹೆಚ್ಚಿನ ವಿವರಗಳಿಗಾಗಿ ಮತ್ತು ಮುಂದಿನ ಕ್ರಮಕ್ಕಾಗಿ ಶವಗಳ ಪತ್ತೆಹಚ್ಚುವ ಕಾರ್ಯ ಮುಂದುವರೆದಿದೆ ಎಂದು ಹೇಳಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಆರ್ಮಿ ಬಗ್ಗೆ ಸುಳ್ಳುಸುದ್ದಿ ಮಾಡಿದ್ರೆ ಜೈಲು, ಹೊಸ ರೂಲ್ಸ್

Sat Mar 5 , 2022
ರಷ್ಯಾ (Russia) ಹಾಗೂ ಉಕ್ರೇನ್ (Ukraine) ಮಧ್ಯೆ ಯುದ್ಧ ನಡೆಯುತ್ತಿರುವ ಈ ಸಂದರ್ಭದಲ್ಲಿ ಯುದ್ಧ (War) ವರದಿಗಳು ಪ್ರಸಾರವಾಗುತ್ತಲೇ ಇವೆ. ರಷ್ಯಾ ಹಾಗೂ ಉಕ್ರೇನ್ ಎರಡೂ ದೇಶಗಳ ಕುರಿತು ನಿರಂತರ ಯುದ್ಧ ವರದಿಗಳು ಪ್ರಸಾರವಾಗುತ್ತಿದ್ದು ಇವೆಲ್ಲದರ ನಡುವೆ ರಷ್ಯಾ ಅಧ್ಯಕ್ಷ ಪುಟಿನ್ (Putin) ಅವರು ಹೊಸದೊಂದು ನಿಯಮಕ್ಕೆ ಸಹಿ ಮಾಡಿದ್ದಾರೆ.   ಹೌದು. ಯುದ್ಧ ಸಂದರ್ಭದಲ್ಲಿ ರಷ್ಯಾ ಸೇನೆಯ ಕುರಿತು ಯಾವುದೇ ಸುಳ್ಳು ಸುದ್ದಿಯನ್ನು ಸಹಿಸುವುದಿಲ್ಲ ಎನ್ನುವ ಖಡಕ್ ಎಚ್ಚರಿಕೆ […]

Advertisement

Wordpress Social Share Plugin powered by Ultimatelysocial