ಅಲ್ಲು ಅರ್ಜುನ್ ನಟನೆಯ ‘ಪುಷ್ಪ ದಿ ರೈಸ್’ ಅಮೇಜಾನ್​ ಪ್ರೈಮ್ ವಿಡಿಯೋ ​ನಲ್ಲಿ ರಿಲೀಸ್​;

ಅಲ್ಲು ಅರ್ಜುನ್​ ಸಿನಿಮಾ ಜರ್ನಿಗೆ ಮತ್ತೊಂದು ಭರ್ಜರಿ ಗೆಲುವು ಸಿಕ್ಕಂತಾಗಿದೆ. ಡಿ.17ರಂದು ‘ಪುಷ್ಪ’ ಸಿನಿಮಾ ವಿಶ್ವಾದ್ಯಂತ ರಿಲೀಸ್​ ಆಗಿತ್ತು. ಈಗಲೂ ಅನೇಕ ಕಡೆಗಳಲ್ಲಿ ಪ್ರದರ್ಶನ ಕಾಣುತ್ತಿದೆ. ಅದರ ಜತೆಗೆ ಒಟಿಟಿಯಲ್ಲೂ ಪ್ರಸಾರ ಆರಂಭಿಸಲಿದೆ.

ಅಮೇಜಾನ್​ ಪ್ರೈಮ್​ ವಿಡಿಯೋ ಮೂಲಕ ಜನವರಿ 7ರಂದು ‘ಪುಷ್ಪ’ ವೀಕ್ಷಣೆಗೆ ಲಭ್ಯವಾಗಲಿದೆ. ಹೀಗಾಗಿ ಮನೆಯಲ್ಲೇ ‘ಪುಷ್ಪ’ ಚಿತ್ರ ನೋಡಬಹುದು. ಈಗ ಅನೇಕ ರಾಜ್ಯಗಳಲ್ಲಿ ಚಿತ್ರಮಂದಿರಗಳ ಮೇಲೆ ಶೇ.50ರಷ್ಟು ಆಸನಮಿತಿ ನಿರ್ಬಂಧ ಹೇರಲಾಗಿದೆ. ಹಾಗಾಗಿ ಗಲ್ಲಾಪೆಟ್ಟಿಗೆ ಕಲೆಕ್ಷನ್​ ನಿಧಾನಕ್ಕೆ ಕುಸಿದಿದೆ. ಅಮೇಜಾನ್​ ಪ್ರೈಮ್​ ವಿಡಿಯೋದಲ್ಲಿ ಸಿನಿಮಾ ಪ್ರಸಾರ ಮಾಡಲು ಇದು ಸೂಕ್ತ ಸಮಯ ಎಂದು ಚಿತ್ರತಂಡ ನಿರ್ಧರಿಸಿದೆ. ಕನ್ನಡ, ಹಿಂದಿ, ತೆಲುಗು, ತಮಿಳು ಮತ್ತು ಮಲಯಾಳಂ ಸೇರಿ ಐದು ಭಾಷೆಯಲ್ಲಿ ಪುಷ್ಪ ಸಿನಿಮಾ ರಿಲೀಸ್ ಆಗಿತ್ತು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

covid: ಪ್ರಭಾಸ್ ನಟನೆಯ 'ರಾಧೆ ಶ್ಯಾಮ್' ಚಿತ್ರ ಬಿಡುಗಡೆ ದಿನಾಂಕ ಮುಂದೂಡಿಕೆ;

Wed Jan 5 , 2022
ನವದೆಹಲಿ: ದೇಶದಾದ್ಯಂತ ಕೊರೋನಾ ಉಲ್ಭಣಗೊಳ್ಳುತ್ತಿದ್ದು, ಈ ಬೆಳವಣಿಗೆ ಆತಂಕವನ್ನು ಹೆಚ್ಚಿಸಿದೆ. ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಇತ್ತೀಚೆಗಷ್ಟೇ ಆರ್’ಆರ್’ಆರ್ ಸಿನಿಮಾ ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿತ್ತು. ಇದೀಗ ಪ್ರಭಾಸ್ ನಟನೆಯ ರಾಧೆ ಶ್ಯಾಮ್ ಸಿನಿಮಾ ಬಿಡುಗಡೆ ದಿನಾಂಕವನ್ನೂ ಮುಂದೂಡಿಕೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಪ್ರಭಾಸ್​ ಹಾಗೂ ಪೂಜಾ ಹೆಗ್ಡೆ ಅಭಿನಯದ ‘ರಾಧೆ ಶ್ಯಾಮ್​’ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ದೊಡ್ಡ ಮಟ್ಟದ ನಿರೀಕ್ಷೆ ಇದೆ. ಇತ್ತೀಚೆಗೆ ಬಿಡುಗಡೆ ಆದ ಟ್ರೇಲರ್​ ಕೂಡ ಸಾಕಷ್ಟು ಮೆಚ್ಚುಗೆ […]

Advertisement

Wordpress Social Share Plugin powered by Ultimatelysocial