ಕಾಂಗ್ರೆಸ್​ ನಾಯಕ ಅಮರಿಂದರ್​​ ಸಿಂಗ್​ ಶೀಘ್ರದಲ್ಲೇ ಬಿಜೆಪಿ ಸೇರ್ಪಡೆ!

ಚಂಡಿಗಢ: ಕಳೆದ ವರ್ಷ ಕಾಂಗ್ರೆಸ್​ ತೊರೆದಿದ್ದ ಪಂಜಾಬ್​ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್​ ನಾಯಕ ಅಮರಿಂದರ್​​ ಸಿಂಗ್​ ಶೀಘ್ರದಲ್ಲೇ ಬಿಜೆಪಿ ಸೇರ್ಪಡೆಯಾಗಲಿದ್ದಾರೆ. ಈ ಮೂಲಕ ಬಿಜೆಪಿಯೊಂದಿಗೆ ತಮ್ಮ ಪಕ್ಷ ಪಂಜಾಬ್​ ಲೋಕ್​ ಕಾಂಗ್ರೆಸ್​ ವಿಲೀನಗೊಳಿಸುವ ಸಾಧ್ಯತೆ ಇದೆ.

ಸದ್ಯ ಬೆನ್ನು ನೋವು ಸಮಸ್ಯೆಯಿಂದ ಬಳಲುತ್ತಿರುವ ಅವರು ಲಂಡನ್​​ನಲ್ಲಿ ಶಸ್ತ್ರಚಿಕಿತ್ಸೆಗೊಳಗಾಗಿದ್ದಾರೆ. ಅಲ್ಲಿಂದ ಬಂದ ಕೂಡಲೇ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅವರನ್ನು ಭೇಟಿಯಾಗಿ ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಭಾನುವಾರವೇ ಶಸ್ತ್ರಚಿಕಿತ್ಸೆಗೊಳಗಾಗಿರುವ ಅಮಿರಿಂದರ್ ಸಿಂಗ್ ಅವರ ಆರೋಗ್ಯದ ಬಗ್ಗೆ ಪ್ರಧಾನಿ ಮೋದಿ ದೂರವಾಣಿ ಕರೆ ಮೂಲಕ ವಿಚಾರಿಸಿದ್ದಾರೆ. ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದ ಬಳಿಕ ಪಕ್ಷದ ನಾಯಕಿ ಸೋನಿಯಾ ಗಾಂಧಿ ಅವರಿಗೆ ಬರೆದ ಪತ್ರದಲ್ಲಿ ಸಿಂಗ್​ ಅವರು, ನಾಯಕತ್ವದಿಂದ ಮೂರು ಬಾರಿ ಅವಮಾನಕ್ಕೊಳಗಾಗಿದ್ದೇನೆ. ಇನ್ನು ಮುಂದೆ ಅದನ್ನು ಸಹಿಸಲು ಸಾಧ್ಯವಿಲ್ಲ ಎಂದು ಹೇಳಿದ್ದರು

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://plಇay.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಪಿಎಸ್‍ಎಲ್‍ವಿ ಸಿ 53 ಉಡಾವಣೆ ಯಶಸ್ವಿ : ಇಸ್ರೋ ಸಂಸ್ಥೆಯನ್ನು ಶ್ಲಾಘಿಸಿದ ಮೋದಿ

Fri Jul 1 , 2022
  ನವದೆಹಲಿ : ಭಾರತದ ಸ್ಟಾರ್ಟ್ ಅಪ್ ಸಂಸ್ಥೆಗಳ ಎರಡು ಪೇಲೋಡ್‍ಗಳನ್ನು ಒಳಗೊಂಡ ಪಿಎಸ್‍ಎಲ್‍ವಿ ಸಿ 53 ಯಶಸ್ವಿ ಉಡಾವಣೆ ಮಾಡಿದ್ದಕ್ಕಾಗಿ ಇಸ್ರೋ ಸಂಸ್ಥೆಯನ್ನು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ. ಈ ಯಶಸ್ಸು ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಭಾರತೀಯ ಕಂಪನಿಗಳು ಬಾಹ್ಯಾಕಾಶವನ್ನು ತಲುಪಲು ಸಹಾಯ ಮಾಡಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇಸ್ರೋ ಶ್ರೀಹರಿಕೋಟಾದ ಬಾಹ್ಯಾಕಾಶ ನಿಲ್ದಾಣದಿಂದ ಒಂದೇ ವಾರದಲ್ಲಿ ಎರಡನೇ ವಾಣಿಜ್ಯ ಉಪಗ್ರಹವನ್ನು ಯಶಸ್ವಿಯಾಗಿ ಉಡಾವಣೆ ಮಾಡಿದೆ. ಪಿಎಸ್‍ಎಲ್‍ವಿ ಸಿ […]

Advertisement

Wordpress Social Share Plugin powered by Ultimatelysocial