ಮಲಯಾಳಂ ಚಿತ್ರರಂಗದ ಹಿರಿಯ ನಟಿ ಅಂಬಿಕಾ ರಾವ್ ಕೊರೊನಾಗೆ ಬಲಿ

ಮಲಯಾಳಂ ಚಿತ್ರರಂಗದ ಹಿರಿಯ ನಟಿ ಅಂಬಿಕಾ ರಾವ್, ಮಾರಕ ಕೊರೊನಾಗೆ ಬಲಿಯಾಗಿದ್ದಾರೆ. ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ 58 ವರ್ಷದ ಅಂಬಿಕಾ ರಾವ್ ಕೆಲ ದಿನಗಳ ಹಿಂದಷ್ಟೇ ಕೋವಿಡ್ ಸೋಂಕಿಗೆ ತುತ್ತಾಗಿದ್ದರು. ಅದರಿಂದ ಚೇತರಿಸಿಕೊಂಡಿದ್ದರಾದರೂ ನಂತರದ ಪರಿಣಾಮಗಳಿಂದ ಅಸುನೀಗಿದ್ದಾರೆ.

ಕೊಚ್ಚಿಯ ಖಾಸಗಿ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದು, ಅಂಬಿಕಾ ರಾವ್ ಅವರ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಮಲಯಾಳಂ ಚಿತ್ರರಂಗದ ಖ್ಯಾತ ನಟರಾದ ಮೋಹನ್ ಲಾಲ್, ಮುಮ್ಮೂಟ್ಟಿ ಸೇರಿದಂತೆ ಹಲವು ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

ಸಹಾಯಕ ನಿರ್ದೇಶಕಿಯಾಗಿ ಮಲಯಾಳಂ ಚಿತ್ರರಂಗ ಪ್ರವೇಶಿಸಿದ ಅಂಬಿಕಾ ರಾವ್, ನಂತರ ನಿರ್ದೇಶಕಿಯಾಗಿ ಗುರುತಿಸಿಕೊಂಡಿದ್ದರು. ನಿರ್ದೇಶನದ ಜೊತೆಗೆ ಹಲವು ಚಿತ್ರಗಳಲ್ಲಿಯೂ ಸಹ ಅಂಬಿಕಾ ರಾವ್ ನಟಿಸಿದ್ದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://plಇay.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಬೆಂಗಳೂರಿನಲ್ಲಿ ಟಿಕೆಟ್‌ ಕೇಳಿಲ್ಲ, ಮಂಡ್ಯ ಬಿಡಲ್ಲ: ಸಂಸದೆ ಸುಮಲತಾ

Tue Jun 28 , 2022
  ಮಂಡ್ಯ: ‘ಮುಂದಿನ ಲೋಕಸಭಾ ಚುನಾವಣೆಯಲ್ಲಿ ನಾನು ಮಂಡ್ಯ ಕ್ಷೇತ್ರ ಬಿಟ್ಟು ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಸ್ಪರ್ಧಿಸುತ್ತೇನೆ ಎಂಬುದು ಶುದ್ಧ ಸುಳ್ಳು. ನನಗೆ ರಾಜಕೀಯ ಅನಿವಾರ್ಯವಲ್ಲ, ಮಂಡ್ಯ ಜನರಿಗಾಗಿ ಮಾತ್ರ ನಾನು ರಾಜಕೀಯಕ್ಕೆ ಬಂದಿದ್ದೇನೆ’ ಎಂದು ಸಂಸದೆ ಸುಮಲತಾ ಮಂಗಳವಾರ ತಿಳಿಸಿದರು. ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ನಾನು ಮಂಡ್ಯ ಬಿಟ್ಟು ಹೋಗುವುದಿಲ್ಲ, ಮಂಡ್ಯ ನನ್ನನ್ನು ಬಿಡುವುದಿಲ್ಲ. ನಾನು ಕ್ಷೇತ್ರ ಬಿಡುತ್ತೇನೆ ಎಂದು ಕೆಲವರು ಹಗಲುಗನಸು ಕಾಣುತ್ತಿದ್ದಾರೆ. ವಿಧಾನಸಭಾ ಚುನಾವಣೆ […]

Advertisement

Wordpress Social Share Plugin powered by Ultimatelysocial