ಕೇಂದ್ರ ಸರ್ಕಾರದ ಅಂಗಳಕ್ಕೆ ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ’ : ಶೀಘ್ರವೇ ಸಿಎಂಗಳ ಜೊತೆಗೆ ಅಮಿತ್ ಶಾ ಸಭೆ!

ವದೆಹಲಿ : ಕರ್ನಾಟಕ-ಮಹಾರಾಷ್ಟ್ರ ಗಡಿವಿವಾದ ಇದೀಗ ಕೇಂದ್ರ ಸರ್ಕಾರದ ಅಂಗಳ ತಲುಪಿದ್ದು, ಶೀಘ್ರವೇ ಗೃಹ ಸಚಿವ ಅಮಿತ್ ಶಾ ಅವರು ಕರ್ನಾಟಕ, ಮಹಾರಾಷ್ಟ್ರ ಸಿಎಂಗಳ ಜೊತೆಗೆ ಸಭೆ ನಡೆಸಲಿದ್ದಾರೆ.ಗಡಿ ವಿವಾದ ಸಂಬಂಧ ಕರ್ನಾಟಕದ ವಿರುದ್ಧ ಮಹಾರಾಷ್ಟ್ರ ಸಂಸದರ ನಿಯೋಗ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ದೂರು ನೀಡಿದೆ. ಕರ್ನಾಟಕದಲ್ಲಿ ಮಹಾರಾಷ್ಟ್ರದವರ ಮೇಲೆ ದಾಳಿಗಳು ನಡೆಯುತ್ತಿವೆ. ಕೂಡಲೇ ಅವರ ರಕ್ಷಣೆಗೆ ಕರ್ನಾಟಕದ ಸಿಎಂಗೆ ಸೂಚಿಸಬೇಕು ಎಂದು ಹೇಳಿದೆ.ಇನ್ನು ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ ವಿಚಾರದಲ್ಲಿ ಕೇಂದ್ರ ಸರ್ಕಾರ ಮಧ್ಯಪ್ರವೇಶ ಮಾಡಬೇಕು ಎಂದು ಎನ್‍ಸಿಪಿಯ ಸುಪ್ರಿಯಾ ಸುಳೆ ನೇತೃತ್ವದ ನಿಯೋಗ ಮನವಿ ಮಾಡಿದೆ. ಇದಕ್ಕೆ ಸ್ಪಂದಿಸಿರುವ ಗೃಹಸಚಿವ ಅಮಿತ್ ಶಾ, ಶೀಘ್ರವೇ ಸಿಎಂಗಳ ಸಭೆ ಕರೆಯುವ ಭರವಸೆ ನೀಡಿದ್ದಾರೆ ಎನ್ನಲಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಶ್ರೀ ಬಿ.ಆರ್ ಯಾವಗಲ್ ಅವರಿಗೆ ಭೇಟಿಯಾದ ಡಿಕೆಶಿ!

Sat Dec 10 , 2022
ಇಂದು ನನ್ನನ್ನು ನರಗುಂದದ ಮಾಜಿ ಶಾಸಕರಾದ ಶ್ರೀ ಬಿ.ಆರ್ ಯಾವಗಲ್ ಅವರು ಗೃಹಕಚೇರಿಯಲ್ಲಿ ಭೇಟಿ ಮಾಡಿದರು. ಈ ವೇಳೆ ಹಲವು ವಿಚಾರಗಳ ಕುರಿತು ಮಾತುಕತೆ ನಡೆಸಲಾಯಿತು. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://play.google.com/store/apps/details?id=com.speed.newskannada Please follow and like us:

Advertisement

Wordpress Social Share Plugin powered by Ultimatelysocial