ಬೆಂಗಳೂರಿನ ಆದಿಚುಂಚನಗಿರಿ ಮಠಕ್ಕೆ ಅಮಿತ್‌ ಶಾ ಭೇಟಿ

ವಿಜಯನಗರದ ಆದಿಚುಂಚನಗಿರಿ ಮಠಕ್ಕೆ ಶನಿವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭೇಟಿ ನೀಡಿ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರ ಆಶೀರ್ವಾದ ಪಡೆದು, ಸೌಹಾರ್ದ ಮಾತುಕತೆ ನಡೆಸಿದರು. ಈ ವೇಳೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ಸಚಿವರಾದ ಆರಗ ಜ್ಞಾನೇಂದ್ರ, ಎಸ್‌.ಟಿ.ಸೋಮಶೇಖರ್, ಆರ್‌.ಅಶೋಕ್, ಸಂಸದ ತೇಜಸ್ವಿ ಸೂರ್ಯ ಮತ್ತಿತರರು ಅಮಿತ್ ಶಾಗೆ ಸಾಥ್ ನೀಡಿದರು.ಮಠದಲ್ಲಿ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರನ್ನು ಅಮಿತ್‌ ಶಾ ಸನ್ಮಾನಿಸಿದರು. ನಂತರ ಸ್ವಾಮೀಜಿ, ಕೇಂದ್ರ ಸಚಿವರಿಗೆ ಗೌರವ ಸಲ್ಲಿಸಿ, ಆಶೀರ್ವಾದ ಮಾಡಿದರು. ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ಕಾರ್ಯಕ್ರಮ ಹಾಗೂ ಬಿಜೆಪಿ ಪಕ್ಷದ ಸಭೆಗಳಲ್ಲಿ ಭಾಗವಹಿಸಲು ಕೇಂದ್ರ ಗೃಹ ಸಚಿವ ಅಮಿತ್‌ ಅವರು ಎರಡು ದಿನ ರಾಜ್ಯ ಪ್ರವಾಸ ಕೈಗೊಂಡಿದ್ದಾರೆ. ಶನಿವಾರ ಸಂಜೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಹಮ್ಮಿಕೊಂಡಿದ್ದ ಬಿಜೆಪಿಯ ಬೂತ್‌ ವಿಜಯಸಂಕಲ್ಪ ಸಮಾವೇಶದಲ್ಲಿ ಪಾಲ್ಗೊಂಡ ಬಳಿಕ ವಿಜಯನಗರದ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿದ್ದರು.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕುಟುಂಬ ರಾಜಕಾರಣ ಎಂದರೇ ಭ್ರಷ್ಟಾಚಾರ

Sun Jan 1 , 2023
ಕುಟುಂಬ ರಾಜಕಾರಣ ಎಂದರೇ ಭ್ರಷ್ಟಾಚಾರ. ಈ ಭ್ರಷ್ಟಾಚಾರದಿಂದಲೇ ದೇಶದ ಅವನತಿಗಳಾಗಿವೆ. ಬಿಜೆಪಿಯಲ್ಲಿ ಕುಟುಂಬ ರಾಜಕಾರಣಕ್ಕೆ ಅವಕಾಶವಿಲ್ಲ. ಇದನ್ನು ಪ್ರಧಾನಿ ನರೇಂದ್ರ ಮೋದಿ ಅವರು ಖಂಡಿಸುತ್ತಲೇ ಬಂದಿದ್ದಾರೆ. ಮುಂದಿನ ದಿನಗಳಲ್ಲಿ ಇದು ಕರ್ನಾಟಕ ಸೇರಿದಂತೆ ಇಡೀ ದೇಶದಲ್ಲಿ ಜಾರಿಗೆ ಬರುತ್ತದೆ.ಚುನಾವಣೆ  ವೇಳೆ ಇದನ್ನು ಎಲ್ಲರೂ ಗಮನದಲ್ಲಿಟ್ಟುಕೊಳ್ಳಬೇಕು ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು.ಅರಮನೆ ಮೈದಾನದಲ್ಲಿ ಬಿಜೆಪಿಯ ಬೂತ್‌ ವಿಜಯ ಸಂಕಲ್ಪ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಬಿಜೆಪಿಯು […]

Advertisement

Wordpress Social Share Plugin powered by Ultimatelysocial