“ಭಾರತ ವಿಶ್ವದೆದುರು ನಾಯಕನ ಸ್ಥಾನದಲ್ಲಿ ನಿಂತಿದೆ”.

ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ನಡೆದ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಶನಿವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾತನಾಡಿ 2014 ದೇಶದ ಭವಿಷ್ಯದಲ್ಲಿ ಪರಿವರ್ತನೆ ಆರಂಭಗೊಂಡ ವರ್ಷ.ಕಳೆದ ಎಂಟು ವರ್ಷಗಳಲ್ಲಿ ಎಲ್ಲಾ ಕ್ಷೇತ್ರಗಳಲ್ಲಿ ನಾವು ಅಭಿವೃದ್ದಿ ಸಾಧಿಸಿದ್ದೇವೆ.

ಭಾರತ ವಿಶ್ವದೆದುರು ನಾಯಕನ ಸ್ಥಾನದಲ್ಲಿ ನಿಂತಿದೆ. ನಮ್ಮ ಶಕ್ತಿಯನ್ನು ಇಡೀ ವಿಶ್ವಕ್ಕೆ ತೋರಿಸಬೇಕಿದೆ. ಅದಕ್ಕಾಗಿ ತಾಂತ್ರಿಕತೆಯಲ್ಲಿ ದೇಶ ನಂ1 ಆಗಬೇಕು ಎಂದರು. ತಾಂತ್ರಿಕ ಕ್ಷೇತ್ರದ ಅಭಿವೃದ್ದಿ ವಿದ್ಯಾರ್ಥಿಗಳ ಕೈಯಲ್ಲಿದೆ. ಸ್ವಾತಂತ್ರ ಹೋರಾಟಗಾರರ ಕನಸು ನನಸಾಗಬೇಕಾದರೆ ವಿದ್ಯಾರ್ಥಿಗಳು ಶಕ್ತಿ ಮೀರಿ ಶ್ರಮಿಸಬೇಕು. ಹೀಗಾಗಿ ವಿಶ್ವದ ಮುಂದೆ ಭಾರತ ತಾಂತ್ರಿಕತೆಯಲ್ಲೂ ನಂ1 ಆಗುವ ನಿಟ್ಟಿನಲ್ಲಿ ಈಗಿಂದಲೇ ಸಂಕಲ್ಪ ಮಾಡೋಣ ಎಂದು ಹೇಳಿಕೆ ನೀಡಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ, ಜಗದೀಶ್ ಶೆಟ್ಟರ್‍, ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಮತ್ತಿತರರು ಭಾಗವಹಿಸಿದ್ದರು.

 

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಭಾರತೀಯ ವಾಯುಪಡೆಯ ಎರಡು ಯುದ್ಧ ವಿಮಾನಗಳು ಅಪಘಾತಕ್ಕೀಡಾಗಿವೆ.

Sat Jan 28 , 2023
ಭೋಪಾಲ್, ಜ.28. ಮಧ್ಯಪ್ರದೇಶದ ಮೊರೆನಾದಲ್ಲಿ ಭಾರತೀಯ ವಾಯುಪಡೆಯ ಎರಡು ಯುದ್ಧ ವಿಮಾನಗಳು ಅಪಘಾತಕ್ಕೀಡಾಗಿವೆ. ಈ ಭೀಕರ ದುರಂತದಲ್ಲಿ ವಿಮಾನಗಳು ಪುಡಿಪುಡಿಯಾಗಿವೆ. ಆದರೆ ಸುಖೋಯ್ ವಿಮಾನದಲ್ಲಿದ್ದ ಇಬ್ಬರೂ ಪೈಲಟ್‌ಗಳು ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ. ಗಾಯಗೊಂಡಿರುವ ಇಬ್ಬರನ್ನೂ ಸುರಕ್ಷಿತವಾಗಿ ಹೊರಗೆ ಕರೆತರಲಾಗಿದೆ ಎಂದು ಮೂಲಗಳು ತಿಳಿಸಿವೆ. ಮತ್ತೊಂದು ಫೈಟರ್ ಜೆಟ್‌ನ ಪೈಲಟ್‌ಗೆ ಮೃತಪಟ್ಟಿದ್ದಾರೆ. “ಸುಖೋಯ್- 30 ಮತ್ತು ಮಿರಾಜ್ 2000 ಯುದ್ಧ ವಿಮಾನಗಳು ಮಧ್ಯಪ್ರದೇಶದ ಮೊರೆನಾ ಸಮೀಪ ಪತನಗೊಂಡಿವೆ. ಪತ್ತೆ ಮತ್ತು ರಕ್ಷಣಾ ಕಾರ್ಯಾಚರಣೆಗಳನ್ನು […]

Advertisement

Wordpress Social Share Plugin powered by Ultimatelysocial