ಅಮಿತಾಭ್ ಬಚ್ಚನ್ ಮನೆ ಮಾರಾಟ ಮಾಡಿದ ̤ಸಿಕ್ಕ ಹಣದ ಮೊತ್ತ ಕೇಳಿದ್ರೆ ಶಾಕ್ ಆಗ್ತೀರಾ..?

ಮುಂಬೈ : ಅಮಿತಾಬ್ ಬಚ್ಚನ್ ಅವರು ಮುಂಬೈನಲ್ಲಿ ಅನೇಕ ಬೆಲೆಬಾಳುವ ಆಸ್ತಿಗಳನ್ನು ಹೊಂದಿದ್ದಾರೆ. ಆದರೆ ಇತ್ತೀಚೆಗೆ ಅವರು ಗುಲ್ಮೊಹರ್ ಪಾರ್ಕ್‍ನಲ್ಲಿರುವ ತಮ್ಮ ದಕ್ಷಿಣ ದೆಹಲಿಯಲ್ಲಿರುವ ‘ಸೋಪಾನ್’ ಹೆಸರಿನ ಮನೆಯನ್ನು 23 ಕೋಟಿ ರೂಪಾಯಿಗೆ ಮಾರಾಟ ಮಾಡಿದ್ದಾರೆ.ನೆಜೋನ್ ಗ್ರೂಪ್ ಆಫ್ ಕಂಪನಿಗಳ  ಸಿಇಒ  ಅವ್ನಿ ಬೇಡರ್ ಅವರಿಗೆ ಬಚ್ಚನ್ ಮನೆಯನ್ನು ಮಾರಾಟ ಮಾಡಿದ್ದಾರೆ. ಬಚ್ಚನ್ ಅವರು ಈ ಮನೆಯುನ್ನು ಕಟ್ಟಿಸಿ ತುಂಬಾ ವರ್ಷಗಳಾಗಿದ್ದು, ಇದು ಹಳೆಯ ನಿರ್ಮಾಣವಾಗಿದೆ. ಆದ್ದರಿಂದ ನಾವು ಸೋಪಾನ್ ಮನೆಯನ್ನು ಕೆಡವುತ್ತೇವೆ.ನಮ್ಮ ಅವಶ್ಯಕತೆಗಳಿಗೆ ಅನುಗುಣವಾಗಿ ಆ ಮನೆಯನ್ನು ಹೊಸದಾಗಿ ನಿರ್ಮಿಸುತ್ತೇವೆ. ನಾವು ಹಲವು ವರ್ಷಗಳಿಂದ ಈ ಪ್ರದೇಶದಲ್ಲಿ ವಾಸಿಸುತ್ತಿದ್ದು, ನಾನು ಹೆಚ್ಚುವರಿ ಆಸ್ತಿಗಾಗಿ ದೆಹಲಿಯಲ್ಲಿ ಒಂದು ಮನೆಯನ್ನು ಹುಡುಕುತ್ತಿದ್ದೆ. ಆಗ ಅಮಿತಾಬ್ ಅವರ ಮನೆ ಮಾರಾಟಕ್ಕಿರುವುದು ತಿಳಿದುಬಂದಿದ್ದು, ತಕ್ಷಣ ಆ ಮನೆಯನ್ನು ಖರೀದಿಸಿದ್ದೇವೆ ಎಂದು ಅವ್ನಿ ಅವರು ಮಾಧ್ಯಮದ ಮೂಲಕ ತಿಳಿಸಿದರು. ಈ ಹಿಂದೆ ಸೋಪಾನ್ ಮನೆಯಲ್ಲಿ ಅಮಿತಾಭ್ ಬಚ್ಚನ್ ಅವರ ತಂದೆ ಪ್ರಸಿದ್ಧ ಕವಿ ಹರಿವಂಶ್ ರಾಯ್ ಬಚ್ಚನ್ ಮತ್ತು ಅವರ ತಾಯಿ ದಿವಂಗತ ತೇಜಿ ಬಚ್ಚನ್‍ರವರು ವಾಸಿಸುತ್ತಿದ್ದರು. ಈಮನೆಯು 418.5 ಚದರ ಮೀಟರ್ ಜಾಗದಲ್ಲಿದ್ದು, ಡಿಸೆಂಬರ್ 7 ರಂದು ಇದರ ನೊಂದಣಿಯನ್ನು ಪೂರ್ಣಗೊಳಿಸಲಾಗಿತ್ತು. ಹರಿವಂಶ್ ರಾಯ್ ಬಚ್ಚನ್ ಅವರು ಈ ಮನೆಯಲ್ಲಿ ವಾಸವಾಗಿದ್ದಾಗ ಕವಿಗೋಷ್ಠಿಯನ್ನು ಆಯೋಜಿಸಿದ್ದರು. ಬಚ್ಚನ್‍ರವರ ಅನೇಕ ನೆನಪುಗಳನ್ನು ಮನೆ ಹೊಂದಿದೆ. ಅಲ್ಲದೆ, ಎರಡು ಅಂತಸ್ತಿನ ಸೋಪಾನ್ ಅನ್ನು ತಾಯಿ ತೇಜಿ ಬಚ್ಚನ್ ಹೆಸರಿನಲ್ಲಿ ನೋಂದಾಯಿಸಲಾಗಿತ್ತು. ಈ ಬಗ್ಗೆ ಬಾಲಿವುಡ್ ಮೆಗಾಸ್ಟಾರ್ ಅಮಿತಾಬ್ ಬಚ್ಚನ್ ಇನ್ನೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ ̤

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ವಿಜಯ್ ದೇವರಕೊಂಡ ಲಿಗರ್ ಚಿತ್ರೀಕರಣದ ಕೊನೆಯ ಹಂತವನ್ನು ಪುನರಾರಂಭಿಸಿದ್ದಾರೆ, ಚಿತ್ರ ಆಗಸ್ಟ್ 25 ರಂದು ಬಿಡುಗಡೆ;

Fri Feb 4 , 2022
ಪುರಿ ಜಗನ್ನಾಥ್ ನಿರ್ದೇಶನದ ತಮ್ಮ ಮುಂಬರುವ ಚಿತ್ರ ಲಿಗರ್ ಬಿಡುಗಡೆಗಾಗಿ ವಿಜಯ್ ದೇವರಕೊಂಡ ಕಾಯುತ್ತಿದ್ದಾರೆ. ಚಿತ್ರದ ಶೂಟಿಂಗ್ ಮುಕ್ತಾಯದ ಹಂತದಲ್ಲಿದೆ. ಫೆಬ್ರವರಿ 4 ರಂದು, ನಿರ್ಮಾಪಕಿ ಚಾರ್ಮ್ ಕೌರ್ ಸಾಮಾಜಿಕ ಮಾಧ್ಯಮದಲ್ಲಿ ಚಿತ್ರೀಕರಣದ ಕೊನೆಯ ಹಂತವನ್ನು ಪ್ರಾರಂಭಿಸಿದ್ದಾರೆ ಎಂದು ಬಹಿರಂಗಪಡಿಸಿದರು. ಲಿಗರ್ ಬಾಕ್ಸಿಂಗ್ ಆಧಾರಿತ ಚಿತ್ರವಾಗಿದ್ದು, ವಿಜಯ್ ದೇವರಕೊಂಡ ಬಾಕ್ಸರ್ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ಚಿತ್ರವು ಆಗಸ್ಟ್ 25 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಲೈಗರ್ ಚಿತ್ರೀಕರಣದ ಕೊನೆಯ ಹಂತ ಪುನರಾರಂಭ ವಿಜಯ್ […]

Advertisement

Wordpress Social Share Plugin powered by Ultimatelysocial