2024ರಲ್ಲಿ ಮೋದಿ ಮುಂದುವರಿಕೆ ಅಮಿತ್ ಶಾ.

 

ದೇಶದಲ್ಲಿ ಪ್ರಧಾನಿ ಹುದ್ದೆಯ ಮೇಲೆ ಹಲವರು ಕಣ್ಣಿಟ್ಟಿದ್ದಾರೆ. ಇನ್ನೂ ಕೆಲವು ಪ್ರಯತ್ನ ಮಾಡುತ್ತಿದ್ದಾರೆ. ಆದರೆ ಪ್ರಧಾನಿ ಹುದ್ದೆ ಖಾಲಿ ಇಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.2024 ರ ಲೋಕಸಭೆ ಚುನಾವಣೆಯಲ್ಲಿಯೂ ಬಿಜೆಪಿ ನೇತೃತ್ವದ ಸರ್ಕಾರ ಕೇಂದ್ರದಲ್ಲಿ ಅಧಿಕಾರಕ್ಕೆ ಬರಲಿದೆ. ಪ್ರಧಾನಿ ನರೇಂದ್ರ ಮೋದಿ ಅವರೇ ಮುಂದುವರಿಯಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.ಬಿಹಾರದ ಪಶ್ಚಿಮ ಚಂಪಾರಣ್ ನಲ್ಲಿಂದು ಸಾರ್ವಜನಿಕ ಸಮಾವೇಶ ಉದ್ದೇಶಿಸಿ ಮಾತನಾಡಿ ಅವರು, ವಿರೋದ ಪಕ್ಷಗಳ ಪ್ರಧಾನಿ ಕನಸು ನನಸಾಗುವುದಿಲ್ಲ ಎಂದು ಹೇಳಿದ್ದಾರೆ.ತಮ್ಮ ಜೀವಿತಾವಧಿಯಲ್ಲಿ ಕಾಂಗ್ರೆಸ್ ಪಕ್ಷವನ್ನು ಟೀಕೆ ಮಾಡಿಕೊಂಡು ಬಂದು ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ , ಮುಂದಿನ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ಹುದ್ದೆ ಸಿಗಬಹುದು ಎಂದು ಕಾಂಗ್ರೆಸ್, ಆರೆಜೆಡಿ ಮೈತ್ರಿ ಮಾಡಿಕೊಂಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.ಪ್ರತಿ ಮೂರು ವರ್ಷಕ್ಕೊಮ್ಮೆ ಮೈತ್ರಿ ಬದಲು ಮಾಡುವ ನಿತೀಶ್ ಕುಮಾರ್ ಅವರಿಗೆ ಈ ಬಾರಿ ಬಿಜೆಪಿ ಶಾಶ್ವತವಾಗಿ ಬಾಗಿಲು ಬಂದ್ ಮಾಡಿದೆ. ಮತ್ತೆಂದೂ ಅವರನ್ನು ಬಿಜೆಪಿಯ ಮೈತ್ರಿಯ ಭಾಗವಾಗಿಸಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.ಮುಖ್ಯಮಂತ್ರಿಯ ಕುರಿತು ಮುಖ್ಯಮಂತ್ರಿ‌ ನಿತೀಶ್ ಕುಮಾರ್ ಮತ್ತು ಆರ್ ಜೆಡಿ ನಾಯಕ ತೇಜಸ್ವಿ ಯಾದವ್ ಅವರೊಂದಿಗೆ ರಹಸ್ಯ ಒಪ್ಪಂದ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದರು.ಒಂದು ವೇಳೆ ಬಿಹಾರ ತೇಜಸ್ವಿ ಯಾದವ್ ಅವರಿಗೆ ಮುಖ್ಯಮಂತ್ರಿ ಹುದ್ದೆ ಸಿಕ್ಕರೆ ರಾಜ್ಯ ಗೂಂಡಾ ರಾಜ್ಯವಾಗುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಅವರು ತಿಳಿಸಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕೇಂದ್ರ ಸಚಿವರ ಬೆಂಗಾಲು ವಾಹನದ ಮೇಲೆ ತೂರಾಟ

Sun Feb 26 , 2023
ಪಶ್ಚಿಮ ಬಂಗಾಳದ ಕೂಚ್ ಬೆಹಾರ್‌ಗೆ ತೆರಳಿದ್ದ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿಸಿತ್ ಪ್ರಮಾಣಿಕ್ ಅವರ ಬೆಂಗಾವಲು ವಾಹನದ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆ ನಡೆದಿದೆ.ಆಡಳಿತರೂಢ ತೃಣಮೂಲ ಕಾಂಗ್ರೆಸ್ ಪಕ್ಷದ ಬೆಂಬಲಿಗರು ದಾಳಿಯ ನೇತೃತ್ವ ವಹಿಸಿದ್ದರು ಎಂದು ಸಚಿವ ಪ್ರಮಾಣಿಕ್ ಆರೋಪಿಸಿದ್ದಾರೆ. ಇದಕ್ಕೆ ಪ್ರತಿಯಾಗಿ ತೃಣಮೂಲ ಕಾಂಗ್ರೆಸ್ ಆರೋಪಿಸಿದೆ.ಕೇಂದ್ರ ಸಚಿವರ ಎಸ್‌ಯುವಿ ಕಾರಿಗೆ ಹಾನಿಯಾಗಿದೆ.ಜನಸಂದಣಿಯನ್ನು ನಿಯಂತ್ರಿಸಲು ಪೊಲೀಸರು ಅಶ್ರುವಾಯು ಶೆಲ್‌ಗಳನ್ನು ಹಾರಿಸಬೇಕಾಯಿತು ಎಂದು ತಿಳಿಸಿದ್ದಾರೆ.ನಿಶ್ಚಿತ್ ಪ್ರಮಾಣಿಕ್ ಕೂಚ್ […]

Advertisement

Wordpress Social Share Plugin powered by Ultimatelysocial