ಕೋಲ್ಕತ್ತದಲ್ಲಿ ಬಿಜೆಪಿ ಕಾರ್ಯಕರ್ತ ಸಾವು:

ಕೋಲ್ಕತ್ತ: ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ಅರ್ಜುನ್ ಚೌರಾಸಿಯಾ ಅನುಮಾನಾಸ್ಪದ ಸಾವಿನ ಬಗ್ಗೆ ಸಿಬಿಐ ತನಿಖೆಯಾಗಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗ್ರಹಿಸಿದ್ದಾರೆ.

ಉತ್ತರ ಕೋಲ್ಕತ್ತದ ಕಾಶಿಪುರ ಪ್ರದೇಶದಲ್ಲಿ ಶುಕ್ರವಾರ ಬೆಳಿಗ್ಗೆ ಚೌರಾಸಿಯಾ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು.

ಇದೊಂದು ಕೊಲೆ ಪ್ರಕರಣ, ಟಿಎಂಸಿಯೇ ಹತ್ಯೆ ಮಾಡಿದೆ ಎಂದು ಬಿಜೆಪಿ ದೂರಿದೆ. ಆದರೆ ಈ ಆರೋಪವನ್ನು ಟಿಎಂಸಿ ನಿರಾಕರಿಸಿದೆ.

ಅಮಿತ್ ಶಾ ಎರಡು ದಿನಗಳ ಪಶ್ಚಿಮ ಬಂಗಾಳ ಪ್ರವಾಸದಲ್ಲಿದ್ದು, ಶುಕ್ರವಾರ ಮಧ್ಯಾಹ್ನ ಚೌರಾಸಿಯಾ ಮನೆಗೆ ಭೇಟಿ ನೀಡಿದರು.

ಬಳಿಕ ಪತ್ರಕರ್ತರ ಜತೆ ಮಾತನಾಡಿದ ಅವರು, ‘ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಬಿಜೆಪಿ ಬಯಸುತ್ತದೆ. ಮೂರನೇ ಬಾರಿ ಅಧಿಕಾರ ವಹಿಸಿಕೊಂಡ ವರ್ಷಾಚರಣೆಯನ್ನು ಟಿಎಂಸಿ ನಿನ್ನೆಯಷ್ಟೇ ಸಂಭ್ರಮಿಸಿತ್ತು. ಇದೀಗ ಚೌರಾಸಿಯಾ ಅವರ ಹತ್ಯೆಯಾಗಿದೆ’ ಎಂದು ಹೇಳಿದ್ದಾರೆ.

‘ಚೌರಾಸಿಯಾ ಸಾವನ್ನು ಕೇಂದ್ರ ಗೃಹ ಸಚಿವಾಲಯ ಗಂಭೀರವಾಗಿ ಪರಿಗಣಿಸಿದೆ. ಈ ವಿಚಾರವಾಗಿ ರಾಜ್ಯದಿಂದ ವರದಿ ಕೇಳಿದೆ’ ಎಂದೂ ಅವರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಖಾಲಿ ಹೊಟ್ಟೆಗೆ ದೇಸಿ ತುಪ್ಪ ಸೇವಿಸಿ,

Fri May 6 , 2022
ತೂಕವನ್ನು ಕಳೆದುಕೊಳ್ಳಲು ಮತ್ತು ನಿಮ್ಮನ್ನು ಆರೋಗ್ಯವಾಗಿಡಲು ಸಾಮಾನ್ಯವಾಗಿ ಎಣ್ಣೆಯುಕ್ತ ಆಹಾರಗಳಿಂದ ದೂರವಿರುವುದು ಒಳ್ಳೆಯದು, ಆದರೆ ಈ ಪ್ರಯತ್ನದಲ್ಲಿ ದೇಸಿ ತುಪ್ಪದಿಂದ ದೂರವಿರಬೇಡಿ, ಏಕೆಂದರೆ ಇದು ಆರೋಗ್ಯಕ್ಕೆ ಒಳ್ಳೆಯದು ಎಂದು ಪರಿಗಣಿಸಲಾಗಿದೆ. ತುಪ್ಪವನ್ನು ಡಯಟ್‌ಗೆ ಬಳಸಬಹುದು ಎಂದು ಕೆಲವೇ ಜನರಿಗೆ ತಿಳಿದಿದೆ. ದೇಸಿ ತುಪ್ಪದ ಪ್ರಯೋಜನ ಇಲ್ಲಿದೆ ದೇಸಿ ತುಪ್ಪ ತಿನ್ನುವುದು ಆಹಾರದ ರುಚಿಯನ್ನು ಹೆಚ್ಚಿಸುವುದಲ್ಲದೆ ಆರೋಗ್ಯಕ್ಕೂ ಪ್ರಯೋಜನವನ್ನು ನೀಡುತ್ತದೆ ಎಂದು ಖ್ಯಾತ ಪೌಷ್ಟಿಕತಜ್ಞ ಅವಂತಿ ದೇಶಪಾಂಡೆ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ […]

Advertisement

Wordpress Social Share Plugin powered by Ultimatelysocial