ಕೇಂದ್ರ ಗೃಹ ಸಚಿವ ಅಮಿತ್​ ಶಾ ದೆಹಲಿಯಲ್ಲಿ ಅಧಿಕಾರಿಗಳ ಜೊತೆಯಲ್ಲಿ ಸಭೆ!

ಕೇಂದ್ರ ಗೃಹ ಸಚಿವ ಅಮಿತ್​ ಶಾ ದೆಹಲಿಯಲ್ಲಿ ಅಧಿಕಾರಿಗಳ ಜೊತೆಯಲ್ಲಿ ಸಭೆ ನಡೆಸಿದ್ದು ಜಹಾಂಗೀರ್​ಪುರಿ ಹಿಂಸಾಚಾರದ ಕುರಿತು ಶೋಭಾಯಾತ್ರೆ ಘರ್ಷಣೆಯಲ್ಲಿ ಭಾಗಿಯಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಹಾಗೂ ಇಂತಹ ಘಟನೆಗಳು ಮತ್ತೆ ಮರುಕಳಿಸದಂತೆ ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಖಡಕ್​ ಎಚ್ಚರಿಕೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಏಪ್ರಿಲ್​ 16ರಂದು ಜಹಾಂಗೀರ್​ಪುರಿ ಪ್ರದೇಶದಲ್ಲಿ ಹನುಮ ಜಯಂತಿ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ಹಾಗೂ ಘರ್ಷಣೆ ಸಂಭವಿಸಿತ್ತು. ಈ ಘರ್ಷಣೆಯಲ್ಲಿ 8 ಪೊಲೀಸ್​ ಸಿಬ್ಬಂದಿ ಹಾಗೂ ಓರ್ವ ನಾಗರಿಕ ಗಾಯಗೊಂಡಿದ್ದರು. ಮೆರವಣಿಗೆಗೆ ಬಿಗಿ ಪೊಲೀಸ್​ ಬಂದೋಬಸ್ತ್​ ನಡುವೆಯೂ ಈ ಘರ್ಷಣೆ ಸಂಭವಿಸಿತ್ತು.

ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 147, 148, 149, 186, 307, 323, 332, 353, 427, ಮತ್ತು 436 ಮತ್ತು ಶಸ್ತ್ರಾಸ್ತ್ರ ಕಾಯ್ದೆಯ ಸೆಕ್ಷನ್ 27 ರ ಅಡಿಯಲ್ಲಿ ಜಹಾಂಗೀರ್‌ಪುರಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಪ್ರಮುಖ ಬೆಳವಣಿಗೆಯೊಂದರಲ್ಲಿ ಜಹಾಂಗೀರ್​ಪುರಿಯಲ್ಲಿ ಹನುಮಾನ್​ ಜಯಂತಿಯಂದು ಫೈರಿಂಗ್​ ನಡೆಸಿದ್ದಾನೆ ಎನ್ನಲಾದ ಸೋನು ಚಿಕ್ನಾರನ್ನು ದೆಹಲಿ ಪೊಲೀಸರು ನಿನ್ನೆ ಬಂಧಿಸಿದ್ದಾರೆ. ಸೋನು ಚಿಕ್ನಾ ಪತ್ತೆಗಾಗಿ ಬಲೆ ಬೀಸಿದ್ದ ಪೊಲೀಸರು ಜಹಾಂಗೀರ್​​ಪುರಿಗೆ ತೆರಳಿದ್ದರು. ಆದರೆ ಇಲ್ಲಿ ಪೊಲೀಸರ ಮೇಲೆಯೆ ಚಿಕ್ನಾ ಕುಟುಂಬಸ್ಥರು ಹಾಗೂ ನೆರೆಹೊರೆಯವರು ಕಲ್ಲು ತೂರಿದ್ದಾರೆ ಎನ್ನಲಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಅವಿಶ್ವಾಸ ನಿರ್ಣಯದಲ್ಲಿ ಸೋಲು ಕಂಡು ಪ್ರಧಾನಿ ಪಟ್ಟ ಕಳೆದುಕೊಂಡಿರುವ ಪಾಕಿಸ್ತಾನದ ಮಾಜಿ ಪ್ರಧಾನಿಇಮ್ರಾನ್ ಖಾನ್

Tue Apr 19 , 2022
  ಇಸ್ಲಾಮಾಬಾದ್, ಏಪ್ರಿಲ್ 19; ಅವಿಶ್ವಾಸ ನಿರ್ಣಯದಲ್ಲಿ ಸೋಲು ಕಂಡು ಪ್ರಧಾನಿ ಪಟ್ಟ ಕಳೆದುಕೊಂಡಿರುವ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ತಮ್ಮ ಹೇಳಿಕೆಯಲ್ಲಿ ಯೂ-ಟರ್ನ್ ತೆಗೆದುಕೊಂಡಿದ್ದಾರೆ. “ನಾನು ಯಾವುದೇ ದೇಶದ ವಿರುದ್ಧವಾಗಿಲ್ಲ. ಭಾರತ, ಯುರೋಪ್ ಮತ್ತು ಅಮೆರಿಕದ ವಿರೋಧಿಯಲ್ಲ”ಎಂದು ಇಮ್ರಾನ್ ಖಾನ್ ಯೂ-ಟರ್ನ್ ತೆಗೆದುಕೊಂಡಿದ್ದಾರೆ. ಇಮ್ರಾನ್ ಖಾನ್ ಈ ನಡೆ ಕುತೂಹಲಕ್ಕೆ ಕಾರಣವಾಗಿದೆ. ಪಾಕಿಸ್ತಾನದ ಪ್ರಧಾನಿ ಪಟ್ಟ ಕಳೆದುಕೊಂಡಿದ್ದ ಇಮ್ರಾನ್ ಖಾನ್ ವಿದೇಶಗಳ ವಿರುದ್ಧ ಆರೋಪ ಮಾಡಿದ್ದರು. ಅದರಲ್ಲೂ […]

Advertisement

Wordpress Social Share Plugin powered by Ultimatelysocial