ಕಳೆದ ಒಂದು ದಶಕದಲ್ಲಿ ದೇಶದಲ್ಲಿ ನಕ್ಸಲ್‌ ಹಿಂಸಾಚಾರವು ಕಡಿಮೆಯಾಗಿದೆ!

ರಾಯ್‌ಪುರ (ಪಿಟಿಐ):ಕಳೆದ ಒಂದು ದಶಕದಲ್ಲಿ ದೇಶದಲ್ಲಿ ನಕ್ಸಲ್‌ ಹಿಂಸಾಚಾರವು ಕಡಿಮೆಯಾಗಿದೆ. 2024ರ ಲೋಕಸಭಾ ಚುನಾವಣೆಗೂ ಮೊದಲು ದೇಶವನ್ನು ನಕ್ಸಲ್‌ವಾದದಿಂದ ಮುಕ್ತಗೊಳಿಸುವ ನಿಟ್ಟಿನಲ್ಲಿ ಪ್ರಯತ್ನಗಳು ನಡೆದಿವೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಶನಿವಾರ ಹೇಳಿದರು.

ಛತ್ತೀಸಗಢದ ಕೊರ್ಬಾ ಜಿಲ್ಲೆಯಲ್ಲಿ ನಡೆದ ರ‍್ಯಾಲಿಯೊಂದರಲ್ಲಿ ಮಾತನಾಡಿದ ಅವರು, 2009ರಲ್ಲಿ 2,258 ನಕ್ಸಲ್‌ ಹಿಂಸಾಚಾರ ಪ್ರಕರಣಗಳು ವರದಿಯಾಗಿದ್ದವು. ಆದರೆ, 2021ರಲ್ಲಿ 509 ಪ್ರಕರಣಗಳು ವರದಿಯಾಗಿವೆ ಎಂದರು.

ರಾಜ್ಯದಲ್ಲಿಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಅಪರಾಧ ಮತ್ತು ಭ್ರಷ್ಟಾಚಾರ ಹೆಚ್ಚಾಗಿರುವುದೇ ಕಾಂಗ್ರೆಸ್‌ ಆಡಳಿತಾವಧಿಯ ಪ್ರಮುಖ ಸಾಧನೆ. 2024ರಲ್ಲೂ ನರೇಂದ್ರ ಮೋದಿಯವರೇ ಪ್ರಧಾನಿ ಆಗಬೇಕಾದರೆ ಮುಂಬರುವ ಛತ್ತೀಸಗಢ ವಿಧಾನಸಭೆ ಚುನಾವಣೆಯಲ್ಲಿ ಭೂಪೇಶ್‌ ಬಘೆಲ್‌ ನೇತೃತ್ವದ ಕಾಂಗ್ರೆಸ್‌ ಸರ್ಕಾರವನ್ನು ಸೋಲಿಸಿ ಬಿಜೆಪಿಯನ್ನು ಗೆಲ್ಲಿಸುವಂತೆ ಕರೆ ನೀಡಿದರು.

ಜಿಲ್ಲಾ ಖನಿಜ ಪ್ರತಿಷ್ಠಾನದ (ಡಿಎಂಎಪ್‌) ನಿರ್ವಹಣೆಯಲ್ಲಿಯೂ ಬಘೆಲ್‌ ಸರ್ಕಾರ ಭ್ರಷ್ಟಾಚಾರ ನಡೆಸಿದೆ ಎಂದು ಅಮಿತ್‌ ಶಾ ಆರೋಪಿಸಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕನ್ಯಾ ರಾಶಿ ಭವಿಷ್ಯ (Sunday, January 8, 2023)

Sun Jan 8 , 2023
  ಹೆಚ್ಚಿನ ಕ್ಯಾಲೊರಿ ಆಹಾರವನ್ನು ತಪ್ಪಿಸಿ ಮತ್ತು ನಿಮ್ಮ ವ್ಯಾಯಾಮವನ್ನು ಕೈಬಿಡಬೇಡಿ. ಜೀವನದ ವಾಹನವನ್ನು ಚೆನ್ನಾಗಿ ಚಲಾಯಿಸಲು ಬಯಸುತ್ತಿದ್ದರೆ, ಇಂದು ನೀವು ಹಣದ ಬಗ್ಗೆ ವಿಶೇಷ ಗಮನ ಹರಿಸಬೇಕು. ಕೆಲವರಿಗೆ ಕುಟುಂಬದಲ್ಲಿ ಒಂದು ಹೊಸ ಆಗಮನ ಸಂಭ್ರಮಾಚರಣೆ ಮತ್ತು ಆನಂದದ ಕ್ಷಣಗಳನ್ನು ತೆರೆದಿಡುತ್ತದೆ. ಇತರರ ಹಸ್ತಕ್ಷೇಪ ವ್ಯಾಜ್ಯವುಂಟುಮಾಡುತ್ತದೆ. ನಿಮ್ಮ ಸಂವಹನ ತಂತ್ರಗಳು ಮತ್ತು ಕೆಲಸದ ಕೌಶಲಗಳು ಪರಿಣಾಮಕಾರಿಯಾಗಿರುತ್ತವೆ. ನಿಮ್ಮ ಸಂಗಾತಿ ಇಂದು ನಿಮ್ಮ ಖ್ಯಾತಿಯ ಮೇಲೆ ಸ್ವಲ್ಪ ಪ್ರತಿಕೂಲ ಪರಿಣಾಮ […]

Advertisement

Wordpress Social Share Plugin powered by Ultimatelysocial