ಚುನಾವಣೆ ವೇಳೆ ಅಮುಲ್​​ ವಿವಾದ.. ಕಾಂಗ್ರೆಸ್- ಜೆಡಿಎಸ್​​​ ಆಕ್ಷೇಪ ಏಕೆ?

ಡಳಿತ ಪಕ್ಷ ಬಿಜೆಪಿ ಅಮುಲ್ ಆಗಮನವನ್ನು ಸ್ವಾಗತಿಸದಿದ್ದರೂ, ವಿರೋಧಿಸುವ ಕಾರ್ಯ ಮಾಡುತ್ತಿಲ್ಲ. ಆದರೆ ಕಾಂಗ್ರೆಸ್ ಹಾಗೂ ಜೆಡಿಎಸ್​ ಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸುತ್ತಿವೆ. ಅಮುಲ್ ಆಗಮನ ರಾಜ್ಯದ ಜನಪ್ರಿಯ ಉತ್ಪನ್ನವಾದ ನಂದಿನಿಗೆ ಅಡ್ಡಿ ಎಂದೇ ಬಣ್ಣಿಸಲಾಗುತ್ತಿದೆ

ಬೆಂಗಳೂರು:ರಾಜ್ಯ ವಿಧಾನಸಭೆ ಚುನಾವಣೆ ಸಂದರ್ಭದಲ್ಲೇ ಗುಜರಾತ್ ಮೂಲದ ಹೈನು ಉತ್ಪನ್ನ ಸಂಸ್ಥೆ ‘ಅಮುಲ್’ ಕರ್ನಾಟಕ ಪ್ರವೇಶ ಮಾಡುತ್ತಿರುವುದು ವಿವಾದಕ್ಕೆ ಕಾರಣವಾಗಿದೆ. ಆಡಳಿತ ಪಕ್ಷ ಬಿಜೆಪಿ ಅಮುಲ್ ಆಗಮನವನ್ನು ಸ್ವಾಗತಿಸದಿದ್ದರೂ, ವಿರೋಧಿಸುವ ಕಾರ್ಯ ಮಾಡುತ್ತಿಲ್ಲ. ಆದರೆ ಕಾಂಗ್ರೆಸ್ ಹಾಗೂ ಜೆಡಿಎಸ್​ ಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದು, ಅಮುಲ್ ಆಗಮನ ರಾಜ್ಯದ ಜನಪ್ರಿಯ ಉತ್ಪನ್ನವಾದ ನಂದಿನಿಗೆ ಅಡ್ಡಿ ಮಾಡಲು ಎಂದೇ ಬಣ್ಣಿಸಲಾಗುತ್ತಿದೆ.

ಅಮುಲ್ ಮೂಲಕ ನಂದಿನಿಯ ಜನಪ್ರಿಯತೆ ಹತ್ತಿಕ್ಕುವ ಕಾರ್ಯ ಮಾಡಲಾಗುತ್ತಿದೆ ಎಂದು ರಾಜಕೀಯ ಪಕ್ಷಗಳು ಆರೋಪಿಸುತ್ತಿವೆ. ಈ ಮಧ್ಯೆ ಬಿಜೆಪಿ ತಟಸ್ಥ ನಿಲುವು ತಾಳಿದೆ. ಇದು ಡಬಲ್​ ಎಂಜಿನ್ ಸರ್ಕಾರವನ್ನ ಇಕ್ಕಟ್ಟಿಗೆ ಸಿಲುಕಿಸುವಂತೆ ಮಾಡಿದೆ. ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಎದುರಾಗಿರುವ ಸಂದರ್ಭದಲ್ಲಿ ನಂದಿನಿ ಉತ್ಪನ್ನಗಳಿಗೆ ನಿಜವಾದ ಸ್ಪರ್ಧಿಯಾಗಬಲ್ಲ, ದೇಶದ ಅತ್ಯಂತ ಜನಪ್ರಿಯ ಹಾಗೂ ಶ್ರೀಮಂತ ಹೈನು ಉತ್ಪನ್ನ ಸಂಸ್ಥೆ ಅಮುಲ್ ರಾಜ್ಯ ಪ್ರವೇಶ ಮಾಡುತ್ತಿರುವುದು ದೊಡ್ಡ ಸುದ್ದಿಯಾಗುತ್ತಿದೆ. ಪರವಾಗಿ ಅಷ್ಟು ಮಾತು ಕೇಳಿಬರುತ್ತಿಲ್ಲವಾದರೂ, ಇದನ್ನು ವಿರೋಧಿಸುವ ಹಾಗೂ ಇದರ ಉತ್ಪನ್ನ ಮಾರಾಟಕ್ಕೆ ರಾಜ್ಯದಲ್ಲಿ ಅವಕಾಶ ನೀಡಬಾರದು ಎನ್ನುವ ಮಾತುಗಳೇ ಹೆಚ್ಚಾಗಿ ಕೇಳಿ ಬರುತ್ತಿದೆ.

ಪ್ರತಿಪಕ್ಷಗಳ ಆಕ್ರೋಶ: ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಜೆಡಿಎಸ್​ನ ಹಿರಿಯ ನಾಯಕ ಹಾಗೂ ಮಾಜಿ ಸಿಎಂ ಹೆಚ್​.ಡಿ ಕುಮಾರಸ್ವಾಮಿ ಸೇರಿದಂತೆ ಹಲವು ನಾಯಕರು ಅಮುಲ್ ರಾಜ್ಯ ಪ್ರವೇಶವನ್ನು ವಿರೋಧಿಸುತ್ತಿದ್ದಾರೆ. ಆದರೆ ಆಗಲೇ ಅಮುಲ್​ ರಾಜ್ಯ ಮಾರುಕಟ್ಟೆಗೆ ಪ್ರವೇಶ ಮಾಡಿದ್ದು ಇದನ್ನು ಯಾವ ರೀತಿ ಪರಿಣಾಮ ಬೀರಲಿದೆ ಎಂಬ ಚರ್ಚೆ, ಪರ ವಿರೋಧದ ಮಾತುಗಳು ದಂಡಿಯಾಗಿ ಕೇಳಿ ಬರುತ್ತಿವೆ.

ಅಮುಲ್

ಕನ್ನಡಿಗರೇ ಎಚ್ಚರ- ಸಿದ್ದರಾಮಯ್ಯ ಟ್ವೀಟ್​: ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಕರ್ನಾಟಕದಲ್ಲಿ ನಮ್ಮ ಹಿರಿಯರು ಕಟ್ಟಿ ಬೆಳೆಸಿದ್ದ ಬ್ಯಾಂಕುಗಳನ್ನು ತಿಂದು ಮುಕ್ಕಿದ್ದಾಯಿತು. ಈಗ ರೈತರ ಪಾಲಿನ ಸಂಜೀವಿನಿಯಾಗಿರುವ ನಂದಿನಿಯನ್ನು ಆಪೋಶನ ತೆಗೆದುಕೊಳ್ಳಲು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್​ ಶಾ ಸಂಚು ಹೂಡಿದ್ದಾರೆ. ಕನ್ನಡಿಗರೇ ಎಚ್ಚರ!. ಕೆಎಂಎಫ್ ಮತ್ತು ಅಮುಲ್ ಸಂಸ್ಥೆಗಳ ವಿಲೀನದ ಬಗ್ಗೆ ಕೇಂದ್ರ ಸಹಕಾರ ಸಚಿವರೂ ಆಗಿರುವ ಅಮಿತ್ ಶಾ ಪ್ರಸ್ತಾಪ ಮಾಡಿದ ದಿನದಿಂದ ರಾಜ್ಯದ ಹೈನು ಉದ್ಯಮಕ್ಕೆ ಗರ ಬಡಿದಿದೆ. ವಿಲೀನದ ಪ್ರಸ್ತಾವಕ್ಕೆ ಕನ್ನಡಿಗರ ತೀವ್ರ ವಿರೋಧದ ಹಿನ್ನೆಲೆ ಹಿಂಬಾಗಿಲಿನಿಂದ ಅಮುಲ್ ಪ್ರವೇಶಿಸುತ್ತಿದೆ. ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ನಂದಿನಿ ಹಾಲು ಮತ್ತು ಮೊಸರು ಮಾರುಕಟ್ಟೆಯಲ್ಲಿ ಮಾಯವಾಗುತ್ತಿದೆ. ಇದೇ ವೇಳೆ ಅಮುಲ್ ಉತ್ಪನ್ನಗಳ ಮಾರಾಟ ಭರದಿಂದ ಪ್ರಾರಂಭವಾಗಿದೆ. ಸಚಿವ ಅಮಿತ್ ಶಾ ನೇರ ಉಸ್ತುವಾರಿಯಲ್ಲಿಯೇ ಇವೆಲ್ಲ ನಡೆಯುತ್ತಿದೆ ಎನ್ನುವುದು ನಿಸ್ಸಂಶಯ. ಗುಜರಾತ್ ಮೂಲದ ಅಮುಲ್ ಹಾಲು ಮತ್ತು ಮೊಸರು ಮಾರಾಟದ ಮೂಲಕ ಕರ್ನಾಟಕದ ಮಾರುಕಟ್ಟೆ ಪ್ರವೇಶಿಸಲು ಹಿಂದೆಯೂ ಪ್ರಯತ್ನಿಸಿತ್ತು. ಅದಕ್ಕೆ ನಾವು ಅವಕಾಶ ಕೊಡಲಿಲ್ಲ. ಈಗ ರಾಜ್ಯದ ಬಿಜೆಪಿ ಸರ್ಕಾರ ಕೆಂಪುಕಂಬಳಿ ಹಾಸಿ ಸ್ವಾಗತಿಸಿದೆ” ಎಂದು ವಿರೋಧಿಸಿದ್ದಾರೆ.

ಕೆಎಂಎಫ್ ಕತ್ತು ಹಿಚುಕುತ್ತಿದೆ – ಹೆಚ್​ಡಿಕೆ ಗರಂ:ಮಾಜಿ ಸಿಎಂ ಹೆಚ್​ಡಿಕೆ ಸಹ ಟ್ವೀಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ”ಕನ್ನಡಿಗರ ಜೀವನಾಡಿ ನಂದಿನಿಯನ್ನು ಮುಗಿಸಲು ಈಗ ನಡೆದಿದೆ 3ನೇ ಸಂಚು. ತನ್ನ ಏಕೈಕ ಪ್ರತಿಸ್ಪರ್ಧಿ ನಂದಿನಿಗೆ ಕರ್ನಾಟಕದಲ್ಲೇ ಅಡ್ಡಿ ಮಾಡಬೇಕೆನ್ನುವುದು ಅಮುಲ್ ದುರಾಲೋಚನೆ. ‘ಒಂದು ದೇಶ, ಒಂದು ಅಮುಲ್, ಒಂದೇ ಹಾಲು, ಒಂದೇ ಗುಜರಾತ್ʼ ಎನ್ನುವುದು ಕೇಂದ್ರ ಸರ್ಕಾರದ ಅಧಿಕೃತ ನೀತಿಯಂತಿದೆ. ಅದಕ್ಕೆ ಅಮುಲ್​​​ಗೆ ಒತ್ತಾಸೆಯಾಗಿ ನಿಂತು ಕೆಎಂಎಫ್ ಕತ್ತು ಹಿಚುಕುತ್ತಿದೆ. ಈಗ ಅಮುಲ್ ಹಿಂಬಾಗಿಲ ಮೂಲಕ ಒಳನುಗ್ಗುತ್ತಿದೆ. ಹೈನುಗಾರಿಕೆಯ ಮೂಲ ಉತ್ಪನ್ನ ಹಾಲನ್ನು ತನ್ನ ಬ್ರ್ಯಾಂಡ್ʼನಲ್ಲಿಯೇ ಕರ್ನಾಟಕದಲ್ಲಿಯೇ ಮಾರಲು ಹೊರಟಿರುವ ಅಮುಲ್, ನಂದಿನಿಯನ್ನು ಆಪೋಶನ ತೆಗೆದುಕೊಳ್ಳುವುದು ಖಚಿತ. ವಿಲೀನಕ್ಕೆ, ಹಿಂದಿ ಹೇರಿಕೆಗೆ ಪ್ರಬಲ ಪ್ರತಿರೋಧ ಒಡ್ಡುತ್ತಿರುವ ಕನ್ನಡಿಗರು ಮತ್ತು ಕೆಎಂಎಫ್ʼನ ಕಥೆ ಮುಗಿಸಲೇಬೇಕು ಎಂದು ಅಮುಲ್ ಪಣ ತೊಟ್ಟಂತಿದೆ” ಎಂದು ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

Totally free BBB Web cam

Sun Apr 9 , 2023
If you’re into sexy bbw women, free of charge bbw cam is the place for you. You could find plenty of plus-sized hotties here that are prepared to suck your pussy and take the ass for any ride. These thick-breasted beauties aren’t scared showing off all their chubby body, and […]

Advertisement

Wordpress Social Share Plugin powered by Ultimatelysocial