ಬೀದಿ ನಾಯಿ ದತ್ತುಗೆ ಆನ್‌ಲೈನ್‌ ಪೋರ್ಟಲ್‌ ಘೋಷಿಸಿದ ಶ್ವಾನ ಪ್ರಿಯ ಸಿಎಂ

ಬೆಂಗಳೂರು: ಪ್ರಾಣಿಗಳ ಸಾಕಣೆ ಹಾಗೂ ಅಭಿವೃದ್ಧಿಯಲ್ಲಿ ನಿರ್ದಿಷ್ಟವಾಗಿ ಶ್ವಾನದ ಕುರಿತು ಸಿಎಂ ಬಸವರಾಜ ಬೊಮ್ಮಾಯಿ ವಿಶೇಷ ಆಸಕ್ತಿ ತೋರಿದ್ದಾರೆ. ಕರ್ನಾಟಕದ ಪ್ರಮುಖ ತಳಿಯಲ್ಲೊಂದಾದ ಮುಧೋಳ್‌ ಹೌಂಡ್‌ ಅಭಿವೃದ್ಧಿಗೆ 5 ಕೋಟಿ ರೂ. ನೀಡಲು ಬೊಮ್ಮಾಯಿ ಪ್ರಸ್ತಾವಿಸಿದ್ದಾರೆ.

ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆಯಡಿ 20,000 ಫಲಾನುಭವಿಗಳಿಗೆ 355 ಕೋಟಿ ರೂ. ಗಳ ವೆಚ್ಚದಲ್ಲಿ ಕುರಿ ಮತ್ತು ಮೇಕೆ ಘಟಕಗಳನ್ನು ಸ್ಥಾಪಿಸುವ ಯೋಜನೆ ಜಾರಿಗೊಳಿಸಲಾಗುತ್ತಿದೆ ಎಂದು ಬೊಮ್ಮಾಯಿ ಹೇಳಿದರು.

ರೈತ ಮಹಿಳೆಯರಲ್ಲಿ ಕೋಳಿ ಸಾಕಾಣಿಕೆಯನ್ನು ಪ್ರೋತ್ಸಾಹಿಸಲು 2022-23ನೇ ಸಾಲಿನಲ್ಲಿ 16,642 ಫಲಾನುಭವಿಗಳಿಗೆ 3.33 ಲಕ್ಷ ಕೋಳಿಮರಿಗಳನ್ನು ವಿತರಿಸಲಾಗಿದೆ. ಈ ಕಾರ್ಯಕ್ರಮಕ್ಕೆ ಈ ಸಾಲಿನಲ್ಲಿ ಇನ್ನೂ ಹೆಚ್ಚಿನ ಆದ್ಯತೆ ನೀಡಲಾಗುವುದು.

ಪ್ರಾಣಿಗಳ ಮೇಲಿನ ಹಿಂಸೆ ತಡೆಯಲು ಮತ್ತು ಪ್ರಾಣಿ ಕಲ್ಯಾಣಕ್ಕಾಗಿ ಪ್ರಾಣಿ ಕಲ್ಯಾಣ ಮಂಡಳಿಗೆ 5 ಕೋಟಿ ರೂ. ಅನುದಾನ ನೀಡಲಾಗುವುದು. ಮಂಡಳಿಯ ವತಿಯಿಂದ ಬೆಂಗಳೂರಿನಲ್ಲಿ ನಿರ್ಲಕ್ಷಿತ ಪ್ರಾಣಿಗಳ ಸೂಕ್ತ ಚಿಕಿತ್ಸೆಗಾಗಿ ಸಂಚಾರಿ ಚಿಕಿತ್ಸಾಲಯಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುವುದು.

ರಾಷ್ಟ್ರೀಯ ಪ್ರಾಣಿ ತಳಿ ಸಂಪನ್ಮೂಲ ಬ್ಯೂರೋದಿಂದ ಭಾರತೀಯ ದೇಶಿ ಶ್ವಾನ ತಳಿ ಎಂದು ಮಾನ್ಯತೆ ಪಡೆದ ಮುಧೋಳ್ ಹೌಂಡ್ ಶ್ವಾನ ತಳಿಯ ಅಭಿವೃದ್ಧಿಗಾಗಿ 5 ಕೋಟಿ ರೂ. ಅನುದಾನ ನೀಡಲಾಗುವುದು.

ಬೀದಿನಾಯಿಗಳ ಆರೈಕೆ ಮತ್ತು ಪೋಷಣೆಗಾಗಿ ಸಾರ್ವಜನಿಕರು ದತ್ತು ತೆಗೆದುಕೊಳ್ಳಲು ಒಂದು ಆನ್-ಲೈನ್ ತಂತ್ರಾಂಶವನ್ನು ಅಭಿವೃದ್ಧಿಪಡಿಸಲಾಗುವುದು. ಇದರಿಂದ ಆಸಕ್ತ ಶ್ವಾನ ಪ್ರೇಮಿಗಳು ತಮ್ಮ ಹೆಸರು ನೋಂದಾಯಿಸಿಕೊಂಡು ದತ್ತು ಪಡೆಯಲು ಅವಕಾಶ ಕಲ್ಪಿಸಿದಂತಾಗುತ್ತದೆ ಎಂದರು.

2022ರಲ್ಲಿ ಬಿಡುಗಡೆಯಾಗಿದ್ದ 777 ಚಾರ್ಲಿ ಸಿನಿಮಾವನ್ನು ಸಿಎಂ ಬಸವರಾಜ ಬೊಮ್ಮಾಯಿ ವೀಕ್ಷಿಸಿದ್ದರು. ಸ್ವತಃ ಶ್ವಾನಪ್ರಿಯರಾದ ಬೊಮ್ಮಾಯಿ, ಸಿನಿಮಾದಲ್ಲಿ ನಾಯಿಯ ಸಂಕಷ್ಟವನ್ನು ನೆನೆದು ಕಣ್ಣೀರು ಹಾಕಿದ್ದರು.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಬಿಜೆಪಿ ಸರ್ಕಾರ ಭರ್ಜರಿ ಕೊಡುಗೆಗಳನ್ನೇ ಘೋಷಣೆ ಮಾಡಿದೆ.

Fri Feb 17 , 2023
    ವಿಧಾನಸಭಾ ಚುನಾವಣೆಯ ಹೊಸ್ತಿಲಲ್ಲಿ ಸಿಎಂ ಬಸವರಾಜ ಬೊಮ್ಮಾಯಿ 3 ಲಕ್ಷದ 9 ಸಾವಿರದ 182 ಕೋಟಿ ರೂಪಾಯಿ ಗಾತ್ರದ ಬೃಹತ್ ಬಜೆಟ್ ಮಂಡಿಸಿದ್ದಾರೆ. ಅಭಿವೃದ್ಧಿ ಮಂತ್ರವನ್ನೇ ಜಪಿಸಿರುವ ಬಿಜೆಪಿ ಸರ್ಕಾರ ಭರ್ಜರಿ ಕೊಡುಗೆಗಳನ್ನೇ ಘೋಷಣೆ ಮಾಡಿದೆ. ಈ ಬಾರಿಯ ರಾಜ್ಯ ಬಜೆಟ್‌ನಲ್ಲಿ ಸಿಎಂ ಬೊಮ್ಮಾಯಿ ಯಾವ್ಯಾವ ಇಲಾಖೆಗೆ ಎಷ್ಟು ಕೋಟಿ ಕೊಟ್ಟಿದ್ದಾರೆ ಅನ್ನೋ ವಿವರ ಇಂತಿದೆ.   ಶಿಕ್ಷಣ ಇಲಾಖೆಗೆ 37,960 ಕೋಟಿ ಹಂಚಿಕೆ ಜಲ ಸಂಪನ್ಮೂಲ […]

Advertisement

Wordpress Social Share Plugin powered by Ultimatelysocial