Anantnag Encounter: ಇಬ್ಬರು ಎಲ್‌ಇಟಿ ಉಗ್ರರನ್ನು ಸುತ್ತುವರಿದ ಭದ್ರತಾ ಪಡೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅನಂತ್‌ನಾಗ್ ಜಿಲ್ಲೆಯಲ್ಲಿ ಭದ್ರತಾ ಪಡೆ ಹಾಗೂ ಉಗ್ರರ ನಡುವೆ ಗುಂಡಿನ ಕಾಳಗ ಮುಂದುವರಿದಿದೆ.

ಭದ್ರತಾ ಪಡೆ ನಡೆಸುತ್ತಿರುವ ಕಾರ್ಯಾಚರಣೆಯಲ್ಲಿ ಲಷ್ಕರ್‌-ಇ-ತೊಯ್ಬಾ ಉಗ್ರ ಸಂಘಟನೆಯ ಇಬ್ಬರು ಉಗ್ರರನ್ನು ಸುತ್ತುವರಿಯಲಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಗುರುವಾರ ಮಾಹಿತಿ ನೀಡಿದೆ.

 

ಅನಂತ್‌ನಾಗ್‌ ಜಿಲ್ಲೆಯ ಗಡೋಲೆ ಅರಣ್ಯ ಪ್ರದೇಶದಲ್ಲಿ ಗುರುವಾರ ಆರಂಭವಾದ ಕಾರ್ಯಾಚರಣೆ ಈಗಲೂ ಮುಂದುವರಿದಿದೆ.

ಈ ಎನ್‌ಕೌಂಟರ್‌ನಲ್ಲಿ ಭಾರತೀಯ ಸೇನೆಯ ಕರ್ನಲ್‌ ಮನ್‌ಪ್ರೀತ್‌ ಸಿಂಗ್‌, ಮೇಜರ್‌ ಆಶಿಶ್‌ ದೋನಕ್ ಮತ್ತು ಡಿವೈಎಸ್‌ಪಿ ಹುಮಾಯುನ್‌ ಭಟ್‌ ವೀರ ಮರಣವನ್ನಪ್ಪಿದ್ದಾರೆ.

ಸೇನೆಯಿಂದ ಸುತ್ತುವರಿಯಲ್ಪಟ್ಟಿರುವ ಇಬ್ಬರು ಎಲ್‌ಇಟಿ ಭಯೋತ್ಪಾದಕರಲ್ಲಿ ಉಗ್ರ ಉಜೈರ್ ಖಾನ್ ಸೇರಿದ್ದಾನೆ ಎಂದು ಕಾಶ್ಮೀರ ವಲಯ ಪೊಲೀಸರು ತಿಳಿಸಿದ್ದಾರೆ.

Please follow and like us:

tmadmin

Leave a Reply

Your email address will not be published. Required fields are marked *

Next Post

ಇಂದು ಮಧ್ಯಪ್ರದೇಶದಲ್ಲಿ 49,000 ಕೋಟಿ ರೂ. ವೆಚ್ಚದ ಯೋಜನೆಗಳಿಗೆ ಪ್ರಧಾನಿ ಮೋದಿ ಶಂಕುಸ್ಥಾಪನೆ

Thu Sep 14 , 2023
ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಮಧ್ಯಪ್ರದೇಶದಲ್ಲಿ ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್‌ನ (ಬಿಪಿಸಿಎಲ್) ಬಿನಾ ರಿಫೈನರಿಯ 49,000 ಕೋಟಿ ರೂಪಾಯಿಗಳ ಪೆಟ್ರೋಕೆಮಿಕಲ್ಸ್ ಸಂಕೀರ್ಣ ಮತ್ತು ರಿಫೈನರಿ ವಿಸ್ತರಣೆ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.   ಈ ಯೋಜನೆಯು “ಬುಂದೇಲ್‌ಖಂಡ್‌ನ ಸಂಪೂರ್ಣ ಪ್ರದೇಶದಲ್ಲಿ ಸಮೃದ್ಧಿ ಮತ್ತು ಸಂತೋಷವನ್ನು ತರುತ್ತದೆ” ಎಂದು ಅಧಿಕೃತ ಹೇಳಿಕೆ ತಿಳಿಸಿದೆ. BPCL ಬಿನಾ ರಿಫೈನರಿ ಸಾಮರ್ಥ್ಯವನ್ನು ವಾರ್ಷಿಕ 7.8 ಮಿಲಿಯನ್ ಟನ್‌ಗಳಿಂದ 11 ಮಿಲಿಯನ್ ಟನ್‌ಗಳಿಗೆ […]

Advertisement

Wordpress Social Share Plugin powered by Ultimatelysocial