ಆಂಧ್ರಕ್ಕೆ ಅಬ್ದುಲ್ ನಜೀರ್ ನೂತನ ರಾಜ್ಯಪಾಲ.

ಸುಪ್ರೀಂಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ, ಕನ್ನಡಿಗ ಎಸ್. ಅಬ್ದುಲ್ ನಜೀರ್ ಅವರನ್ನು ಆಂಧ್ರಪ್ರದೇಶದ ನೂತನ ರಾಜ್ಯಪಾಲರನ್ನಾಗಿ ನೇಮಕ ಮಾಡಲಾಗಿದೆ.
ನಿವೃತ್ತ ನ್ಯಾಯಮೂರ್ತಿ ಅಬ್ದುಲ್ ನಜೀರ್ ಆಂಧ್ರಪ್ರದೇಶದ ನೂತನ ರಾಜ್ಯಪಾಲರನ್ನಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ನೇಮಕ ಮಾಡಿದ್ದು, ಇದರ ಜತೆಗೆ ಮಹಾರಾಷ್ಟ್ರ, ಅರುಣಾಚಲ ಪ್ರದೇಶ, ಸಿಕ್ಕಿಂ, ಜಾರ್ಖಂಡ್, ಹಿಮಾಚಲ ಪ್ರದೇಶ ಮತ್ತು ಅಸ್ಸಾಂ ರಾಜ್ಯ ಸೇರಿದಂತೆ ೧೨ ರಾಜ್ಯಗಳಿಗೆ ಬಿಜೆಪಿಯ ಹಿರಿಯ ನಾಯಕರುಗಳನ್ನು ನೂತನ ರಾಜ್ಯಪಾಲರನ್ನಾಗಿ ನೇಮಕ ಮಾಡಲಾಗಿದೆ.
ಮಹಾರಾಷ್ಟ್ರ ರಾಜ್ಯಪಾಲರಾಗಿದ್ದ ಭಗತ್‌ಸಿಂಗ್ ಕೋಶ್ಯಾರಿ ಮತ್ತು ಲಡಾಕ್ ಕೇಂದ್ರಾಡಳಿತ ಪ್ರದೇಶದ ಲೆಫ್ಟಿನೆಂಟ್ ಗೌರ್‍ನರ್ ರಾಧಾಕೃಷ ಮಾಥೂರ್ ಇಂದು ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದು, ಈ ರಾಜೀನಾಮೆಗಳನ್ನು ಅಂಗೀಕರಿಸಿದ ಬೆನ್ನಲ್ಲೇ ರಾಷ್ಟ್ರಪತಿಗಳು ನೂತನ ರಾಜ್ಯಪಾಲರ ನೇಮಕಾತಿ ಆದೇಶವನ್ನು ಹೊರಡಿಸಿದ್ದರು.ಮಹಾರಾಷ್ಟ್ರ ರಾಜ್ಯಪಾಲರಾಗಿ ರಮೇಶ್ ಬೈಸ್ ಅವರನ್ನು, ಬಿಹಾರದ ರಾಜ್ಯಪಾಲರಾಗಿ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರನ್ನು, ಮೇಘಾಲಯ ರಾಜ್ಯಪಾಲರಾಗಿ ಫಾಗೂ ಚೌಹಾಣ್ ಅವರನ್ನು, ನಾಗಾಲ್ಯಾಂಡ್ ರಾಜ್ಯಪಾಲರಾಗಿ ಲಾ. ಗಣೇಶನ್ ಅವರನ್ನು, ಮಣಿಪುರ ರಾಜ್ಯಪಾಲರನ್ನಾಗಿ ಅನುಸೂಯ ಊಕಾಯ್ ಅವರನ್ನು, ಛತ್ತೀಸ್‌ಘಡ ರಾಜ್ಯಪಾಲರಾಗಿ ಬಿಸ್ವಭೂಸನ್ ಹರಿಚಂದನ್ ಅವರನ್ನು, ಅಸ್ಸಾಂ ರಾಜ್ಯಪಾಲರಾಗಿ ಗುಲಾಬ್‌ಚಂದ್ ಕಟಾರಿಯಾ ಅವರನ್ನು, ಹಿಮಾಚಲ ಪ್ರದೇಶ ರಾಜ್ಯಪಾಲರಾಗಿ ಶಿವಪ್ರತಾಪ್ ಶುಕ್ಲಾ ಅವರನ್ನು, ಜಾರ್ಖಂಡ್ ರಾಜ್ಯಪಾಲರಾಗಿ ಸಿ.ಪಿ. ರಾಧಾಕೃಷ್ಣನ್ ಅವರನ್ನು, ಸಿಕ್ಕಿಂರಾಜ್ಯಪಾಲರಾಗಿ ಲಕ್ಷ್ಮಣ್‌ಪ್ರಸಾದ್ ಆಚಾರ್ಯ ಅವರನ್ನು, ಅರುಣಾಚಲ ಪ್ರದೇಶ ರಾಜ್ಯಪಾಲರಾಗಿ ಲೆಫ್ಟಿನೆಂಟ್ ಜನರಲ್ ಕೈವಲ್ಯ ತ್ರಿವಿಕ್ರಮ್ ಪರ್ಸನಾಯಕ ಅವರನ್ನು, ಲಡಾಕ್‌ನ ಲೆಫ್ಟಿನೆಂಟ್ ಜನರಲ್ ಆಗಿ ಬಿ.ಡಿ. ಮಿಶ್ರಾ ಅವರನ್ನು ನೇಮಕ ಮಾಡಿ ರಾಷ್ಟ್ರಪತಿಗಳು ಆದೇಶ ಹೊರಡಿಸಿದ್ದಾರೆ,ಆಂಶ್ರಪ್ರದೇಶದ ರಾಜ್ಯಪಾಲರಾಗಿ ನೇಮಕಗೊಂಡಿರುವ ನಿವೃತ್ತ ನ್ಯಾಯಮೂರ್ತಿ ಅಬ್ದುಲ್ ನಜೀರ್ ಅವರು ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆ ತಾಲ್ಲೂಕಿನ ಬೆಳುವಾಯಿ ಗ್ರಾಮದವರು. ಕಾನೂನು ಪದವಿ ನಂತರ ಅವರು ಕರ್ನಾಟಕ ಹೈಕೋರ್ಟ್ ವಕೀಲರಾಗಿ ಸೇವೆ ಸಲ್ಲಿಸುತ್ತಿದ್ದು, ೨೦೦೩ರಲ್ಲಿ ರಾಜ್ಯ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಾಧೀಶರಾಗಿ ನೇಮಕಗೊಂಡು ನಂತರ ಖಾಯಂ ನ್ಯಾಯಾಧೀಶರಾಗಿ ನೇಮಕವಾದರು. ೨೦೧೭ ಫೆಬ್ರವರಿಯಲ್ಲಿ ಹೈಕೋರ್ಟ್ ನ್ಯಾಯಾಧೀಶರಾಗಿದ್ದ ಸಂದರ್ಭದಲ್ಲೇ ಸುಪ್ರೀಂಕೋರ್ಟ್ ನ್ಯಾಯಾಧೀಶರಾಗಿ ಬಡ್ತಿ ಪಡೆದರು. ತ್ರಿವಳಿ ತಲಾಖ್ ಮತ್ತು ಅಯೋಧ್ಯೆ ರಾಮಮಂದಿರ ಭೂಮಿ ತೀರ್ಪಿನ ನ್ಯಾಯಪೀಠದಲ್ಲಿ ನ್ಯಾಯಮೂರ್ತಿ ಅಬ್ದುಲ್ ನಜೀರ್ ಇದ್ದರು.ಆಂಧ್ರಪ್ರದೇಶದ ರಾಜ್ಯಪಾಲರಾಗಿ ಆಯ್ಕೆಯಾಗಿರುವ ನಿವೃತ್ತ ನ್ಯಾಯಮೂರ್ತಿ ಅಬ್ದುಲ್ ನಜೀರ್ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿನಂದಿಸಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಟರ್ಕಿ ಭೂಕಂಪ: ಸಾವಿನ ಸಂಖ್ಯೆ ೫೦ ಸಾವಿರ ದಾಟುವ ಸಾಧ್ಯತೆ.

Sun Feb 12 , 2023
ಭೂಕಂಪನದಿಂದ ತತ್ತರಿಸಿರುವ ಟರ್ಕಿ ಮತ್ತು ಸಿರಿಯಾದಲ್ಲಿ ಸಾವಿನ ಸಂಖ್ಯೆ ದಿನೇ ದಿನೇ ಏರುತ್ತಿದ್ದು, ಇದುವರೆಗೂ ೨೮ ಸಾವಿರ ಮಂದಿ ಭೂಕಂಪನದಿಂದ ಪ್ರಾಣ ಕಳೆದುಕೊಂಡಿದ್ದು, ಸಾವಿನ ಸಂಖ್ಯೆ ೫೦ ಸಾವಿರ ದಾಟಲಿದೆ ಎಂದು ಅಂದಾಜಿಸಲಾಗಿದೆ.ಭೂಕಂಪನದಿಂದ ಇದುವರೆಗೂ ಟರ್ಕಿಯಲ್ಲಿ ೨೪,೬೧೭ ಮಂದಿ ಮೃತಪಟ್ಟಿದ್ದರೆ, ಸಿರಿಯಾದಲ್ಲಿ ೩,೫೭೪ ಮಂದಿ ಮೃತಪಟ್ಟಿದ್ದು, ಟರ್ಕಿ ಮತ್ತು ಸಿರಿಯಾದಲ್ಲಿ ೫.೩ ಮಿಲಿಯನ್ ಜನ ಮನೆ ಕಳೆದುಕೊಂಡು ನಿರಾಶ್ರಿತರಾಗಿದ್ದಾರೆ. ಭೂಕಂಪ ಪೀಡಿತ ಪ್ರದೇಶಗಳಿಂದ ಲಕ್ಷಾಂತರ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದ್ದು, […]

Advertisement

Wordpress Social Share Plugin powered by Ultimatelysocial