ಅಂಗನವಾಡಿಕಾರ್ಯಕರ್ತೆಯರಿಗೆ ಪಿಯುಸಿ, ಸಹಾಯಕಿಯರಿಗೆ ಎಸ್‌ಎಸ್‌ಎಲ್ಸಿ ಕಡ್ಡಾಯ

ರಾಜ್ಯ ಸರ್ಕಾರ ರಾಷ್ಟ್ರೀಯ ಶಿಕ್ಷಣ ನೀತಿಗೆ ಅನುಗುಣವಾಗಿ ಅಂಗನವಾಡಿ ನೇಮಕಾತಿಗೆ ಮಾನದಂಡ ಬದಲಿಸುತ್ತಿದೆ.ಅಂಗನವಾಡಿ ಕಾರ್ಯಕರ್ತೆಯರಿಗೆ ಪಿಯುಸಿ ಮತ್ತು ಸಹಾಯಕರ ಹುದ್ದೆಗಳಿಗೆ ಎಸ್‌ಎಸ್‌ಎಲ್ಸಿ ಕಡ್ಡಾಯಗೊಳಿಸಲಾಗುವುದು.ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ ಸಿಬ್ಬಂದಿಗಳಿಗೆ ಬಡ್ತಿಗೆ ನಿಯಮ ಬದಲಾವಣೆ ಮಾಡಲಾಗುವುದು. ಹೊಸ ಕಾರ್ಯಕರ್ತೆಯರ ಆಯ್ಕೆ ಮಾಡುವ ಸಂದರ್ಭದಲ್ಲಿ ಅಂಗನವಾಡಿ ಚಟುವಟಿಕೆಗಳಿಗೆ ಸಂಬಂಧಿಸಿದ ಶೈಕ್ಷಣಿಕ ಕೋರ್ಸ್ ಪೂರ್ಣಗೊಳಿಸಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.ಈ ಹಿಂದೆ ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗಳಿಗೆ ಎಸ್‌ಎಸ್‌ಎಲ್ಸಿ ಮತ್ತು ಸಹಾಯಕಿಯರ ಹುದ್ದೆಗಳಿಗೆ ಏಳನೇ ತರಗತಿ ಮಾನದಂಡ ಇತ್ತು. ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಾಗುತ್ತಿರುವದರಿಂದ ಹೆಚ್ಚಿನ ಶೈಕ್ಷಣಿಕ ಅರ್ಹತೆ ನಿಗದಿಪಡಿಸಲಾಗಿದ್ದು, ಅಂಗನವಾಡಿ ಚಟುವಟಿಕೆಗಳಿಗೆ ಸಂಬಂಧಿಸಿದ ಕೋರ್ಸ್ ಗಳನ್ನು ಪೂರ್ಣಗೊಳಿಸಿದವರಿಗೆ ಆದ್ಯತೆ ನೀಡಲಾಗುವುದು ಎಂದು ಹೇಳಲಾಗಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

 

Please follow and like us:

Leave a Reply

Your email address will not be published. Required fields are marked *

Next Post

ಧನು ರಾಶಿ ಭವಿಷ್ಯ (Saturday, December 31, 2022)

Sat Dec 31 , 2022
ಚಾಲನೆ ಮಾಡುವಾಗ ಎಚ್ಚರ ವಹಿಸಿ. ಇಂದಿನವರೆಗೂ ಅಗತ್ಯವಿಲ್ಲದೆ ಹಣವನ್ನು ಖರ್ಚು ಮಾಡುತ್ತಿದ್ದ ಜನರು, ಇಂದು ಅವರು ತನ್ನನ್ನು ನಿಯಂತ್ರಿಸಬೇಕು ಮತ್ತು ಹಣವನ್ನು ಉಳಿಸಬೇಕು. ನಿಮ್ಮ ಸಹೋದರನಿಗೆ ವಿಷಯಗಳನ್ನು ನಿಯಂತ್ರಣದಲ್ಲಿರಿಸಿಕೊಳ್ಳಲು ಸಹಾಯ ಮಾಡಿ. ವ್ಯಾಜ್ಯಗಳನ್ನು ಅನಗತ್ಯವಾಗಿ ಹೆಚ್ಚಿಸದೇ ಅವುಗಳನ್ನು ಸೌಹಾರ್ದತೆಯಿಂದ ಪರಿಹರಿಸಲು ಪ್ರಯತ್ನಿಸಿ. ಇದನ್ನು ಒಂದು ವಿಶೇಷ ದಿನವಾಗಿಸಲು ದಯೆ ಮತ್ತು ಪ್ರೀತಿಯ ಸಣ್ಣ ತುಣುಕುಗಳನ್ನು ನೀಡಿ. ಇಂದು ನಿಮ್ಮ ಬಿಡುವಿನ ವೇಳೆಯಲ್ಲಿ ನೀವು ಆಗಾಗ್ಗೆ ಯೋಚಿಸುವ ಕೆಲಸಗಳನ್ನು ಮಾಡುತ್ತೀರಿ. ಆದರೆ […]

Advertisement

Wordpress Social Share Plugin powered by Ultimatelysocial