ವಿದ್ಯಾರ್ಥಿನಿ ಜತೆ ಪ್ರೇಮ : ಮುಖ್ಯ ಶಿಕ್ಷಕ ಸೆರೆ

 

ಎಚ್‌.ಡಿ.ಕೋಟೆ: ಶಾಲಾ ಕೊಠಡಿಯಲ್ಲಿ ವಿದ್ಯಾರ್ಥಿನಿ ಜೊತೆ ರೊಮ್ಯಾನ್ಸ್‌ ಮಾಡಿದ್ದ ಆಪಾದನೆ ಮೇರೆಗೆ ಮುಖ್ಯಶಿಕ್ಷಕನನ್ನು ಎಚ್‌ .ಡಿ.ಕೋಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ.ಬಂಧತ ಆರೋಪಿ ಅನಿಲ್‌ ಕುಮಾರ್‌ ತಾಲೂಕಿನ ಖಾಸಗಿ ಪ್ರತಿಷ್ಠಿತಶಾಲೆಯೊಂದರಲ್ಲಿ ಮುಖ್ಯಶಿಕ್ಷಕನಾಗಿಕರ್ತವ್ಯ ನಿರ್ವಹಿಸುತ್ತಿದ್ದರು.ಶಾಲಾ ಅವಧಿಯಲ್ಲಿ ವಿದ್ಯಾರ್ಥಿನಿಯೊಂದಿಗೆ ರೊಮ್ಯಾನ್ಸ್‌ನಲ್ಲಿ ತೊಡಗಿದ್ದಾಗ, ಈ ದೃಶ್ಯವನ್ನು ಅದೇ ಶಾಲೆಯ ವಿದ್ಯಾರ್ಥಿ ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದರು ಎನ್ನಲಾಗಿದೆ.ಬಳಿಕ ಈ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ನಂತರ ಕ್ಷೇತ್ರ ಶಿಕ್ಷಣಾಧಿಕಾರಿ ಗಳು ಶಾಲೆಗೆ ಭೇಟಿ ನೀಡಿ ಘಟನೆ ಸಂಬಂಧ ಡಿಡಿಪಿಐಗೆ ವರದಿ ಸಲ್ಲಿಸಿದ್ದರು. ತದನಂತರುಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಕೂಡ ಈ ಮುಖ್ಯ ಶಿಕ್ಷಕನನ್ನು ಕರ್ತವ್ಯದಿಂದವಜಾಗೊಳಿಸುವುದಾಗಿಯೂ ತಿಳಿಸಿತ್ತು.ಘಟನೆ ಬಳಿಕ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳ ಆದೇಶದಂತೆ ಡಿವೈಎಸ್ಪಿ ಮಾರ್ಗದರ್ಶನದಲ್ಲಿ ಸರ್ಕಲ್‌ ಇನ್ಸ್‌ಪೆಕ್ಟರ್‌ ಬಸವರಾಜು ಎಚ್‌.ಡಿ.ಕೋಟೆ ಪೊಲೀಸ್‌ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

Please follow and like us:

Leave a Reply

Your email address will not be published. Required fields are marked *

Next Post

ಈ ಹಣ್ಣು, ತರಕಾರಿ ಸೇವನೆ ಮಾಡಿದ್ರೆ ಸೋಂಕಿನಿಂದ ದೂರವಿರಬಹುದು;

Tue Feb 1 , 2022
ಹವಾಮಾನ ಬದಲಾದಂತೆ ಅನೇಕ ಜನರು ಅಲರ್ಜಿ, ಜ್ವರ ಮತ್ತು ಶೀತ, ಕೆಮ್ಮಿನಂತಹ ಸಮಸ್ಯೆಗಳನ್ನು ಎದುರಿಸುತ್ತಾರೆ. ಫೆಬ್ರವರಿ ಮತ್ತು ಮಾರ್ಚ್ ತಿಂಗಳಲ್ಲಿ ಚಳಿಗಾಲ ಮುಗಿದು ಬೇಸಿಗೆ ಪ್ರಾರಂಭವಾಗುತ್ತಿರುವ ಕಾರಣ ತಾಪಮಾನದಲ್ಲಿ ಬದಲಾವಣೆಯಾಗುತ್ತದೆ. ಈ ಬದಲಾವಣೆ ಅನೇಕ ಸೋಂಕು ಹರಡಲು ಕಾರಣವಾಗುತ್ತದೆ. ಈ ಸಮಯದಲ್ಲಿ ಹೆಚ್ಚಿನ ಜನರು ಜ್ವರ, ಅಲರ್ಜಿ, ಶೀತ ಮತ್ತು ಕೆಮ್ಮಿನಿಂದ ಬಳಲುತ್ತಿದ್ದಾರೆ. ಆರೋಗ್ಯಕರ ಆಹಾರದ ಸೇವನೆ ಮಾಡಿದ್ರೆ ಈ ಸೋಂಕಿನಿಂದ ದೂರವಿರಬಹುದು. ಫೆಬ್ರವರಿ-ಮಾರ್ಚ್ ತಿಂಗಳಿನಲ್ಲಿ ವಿಟಮಿನ್ ಸಿ ಇರುವ […]

Advertisement

Wordpress Social Share Plugin powered by Ultimatelysocial