‘ಅನ್ನಭಾಗ್ಯ ಯೋಜನೆ’

ಧಾರವಾಡ : ದಿನನಿತ್ಯದ ಆಹಾರದಲ್ಲಿ ಸಂಪೂರ್ಣ ಪೋಷಕಾಂಶಗಳು ಲಭ್ಯವಾಗದೇ ಇರುವ ಕಾರಣದಿಂದಾಗಿ, ಅಶಕ್ತತೆ (ಅನೀಮಿಯ), ಇರುಳು ಕುರುಡುತನ ಅಂತಹ ರೋಗಗಳು ಬರಬಹುದಾಗಿದೆ. ಅಲ್ಲದೇ ಹೆಚ್ಚಾಗಿ ಮಹಿಳೆಯರು ಹಾಗೂ ಮಕ್ಕಳು ಅಪೌಷ್ಠಿಕತೆಗೆ ಬಲಿಯಾಗುತ್ತಾರೆ.ಇದನ್ನು ತಪ್ಪಿಸಲು ಹೆಚ್ಚಿನ ಪೋಷಕಾಂಶದ ಅಗತ್ಯತೆ ಇರುತ್ತದೆ.ಈ ನಿಟ್ಟಿನಲ್ಲಿ ಜನಸಾಮಾನ್ಯರಲ್ಲಿನ ಅಪೌಷ್ಠಿಕತೆ ಹೋಗಲಾಡಿಸಿ, ಆರೋಗ್ಯ ವೃದ್ಧಿಸುವ ಉದ್ದೇಶದಿಂದ ಸಾರ್ವಜನಿಕ ವಿತರಣಾ ಪದ್ಧತಿಯ ಅನ್ನಭಾಗ್ಯ ಯೋಜನೆಯಡಿ ವಿತರಣೆ ಮಾಡಲಾಗುವ ಪ್ರತಿ 50 ಕೆ.ಜಿ. ಅಕ್ಕಿಯ ಚೀಲದಲ್ಲಿ ಅರ್ಧ ಕೆ.ಜಿ.ಯಷ್ಟು ಪೋಷಕಾಂಶ (ವಿಟಾಮಿನ್ ಎ ಮತ್ತು ಡಿ, ಐರನ್, ಫೋಲಿಕ್ ಆಸಿಡ್, ಬಿಕಾಂಪ್ಲೇಕ್ಸ, ಜಿಂಕ್ ಹಾಗೂ ಐಯೋಡಿನ್) ಭರಿತ ಸಾರವರ್ಧಿತ ಅಕ್ಕಿಯನ್ನು ಬೆರೆಸಿ ನ್ಯಾಯಬೆಲೆ ಅಂಗಡಿಯಲ್ಲಿ ಅಕ್ಕಿಯನ್ನು ವಿತರಣೆ ಮಾಡಲಾಗುತ್ತಿದೆ.ಸಾರವರ್ಧಿತಗೊಳಿಸಿರುವ (ಪೋರ್ಟಿಫೈಡ್) ಅಕ್ಕಿಯಲ್ಲಿ ಕೆಲವೊಂದು ಅಕ್ಕಿಯ ಕಾಳುಗಳು ಹೊಳಪಿನಿಂದ ನೋಡಲು ಪ್ಲಾಸ್ಟಿಕ್ ರೀತಿಯಲ್ಲಿ ಕಾಣಿಸುತ್ತಿದ್ದು, ಸಾರ್ವಜನಿಕರು ಆತಂಕಗೊಳ್ಳಬಾರದು. ವಿತರಣೆ ಮಾಡಲಾಗುತ್ತಿರುವ ಸಾರವರ್ಧಿತ ಅಕ್ಕಿಯನ್ನು ಉಪಯೋಗಿಸಿ, ಆರೋಗ್ಯವಂತರಾಗಲು ಕೋರಿದೆ.ಸಾರ್ವಜನಿಕ ವಿತರಣಾ ಪದ್ಧತಿಯಡಿ ಬಿಡುಗಡೆ ಮಾಡುವ ಅಕ್ಕಿಯನ್ನು ಸ್ವಂತಕ್ಕೆ ಉಪಯೋಗಿಸತಕ್ಕದ್ದು, ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿರುವುದು ಕಂಡುಬಂದಲ್ಲಿ ಅಂತಹ ಕುಟುಂಬಕ್ಕೆ ನೀಡಿದ ಬಿಪಿಎಲ್ ಪಡಿತರ ಚೀಟಿಯನ್ನು ರದ್ದುಪಡಿಸಲಾಗುವುದೆಂದು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕ ವಿನೋದಕುಮಾರ ಹೆಗ್ಗಳಗಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಹಳೆಯ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವಂತೆ ಸರ್ಕಾರಿ ನೌಕರರ ಒತ್ತಾಯ.

Thu Feb 23 , 2023
ಗುಂಡ್ಲುಪೇಟೆ ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ನಮ್ಮ ನ್ಯಾಯಯುತ ಬೇಡಿಕೆಗಳು ಈಡೇರದಿದ್ದಲ್ಲಿ ಮಾರ್ಚ್ 01 ರಿಂದ ಕರ್ತವ್ಯಕ್ಕೆ ಗೈರು ಹಾಜರಾಗಿ ಅನಿರ್ದಿಷ್ಟವಧಿ ಮುಷ್ಕರ ನಡೆಸಿ ಸರ್ಕಾರಕ್ಕೆ ಮುಟ್ಟಿಸುವ ಕೆಲಸ ಮಾಡುತ್ತೇವೇ ಎಂದು ತಿಳಿಸಿದರು.ವೇತನ ಭತ್ಯೆ ಪರಿಷ್ಕರಣೆ ಹಳೆ ಪಿಂಚಣಿ ಯೋಜನೆಯನ್ನ ಜಾರಿಗೊಳಿಸಬೇಕು, ಸರ್ಕಾರ 7 ನೇ ವೇತನ ಆಯೋಗದ ಮಧ್ಯಂತರ ವರದಿಯನ್ನು ತ್ವರಿತವಾಗಿ ಪಡೆಯುವ ಮೂಲಕ ಜಾರಿಗೆ ಬರುವಂತೆಯೂ ಶೇ.40% ವೇತನ ಹೆಚ್ಚಳ ಸೌಲಭ್ಯ ಕುರಿತಂತೆ […]

Advertisement

Wordpress Social Share Plugin powered by Ultimatelysocial