ಚೆನ್ನೈ: ಬಿಜೆಪಿ ಕಚೇರಿ ಮೇಲೆ ಅಪರಿಚಿತ ವ್ಯಕ್ತಿಯೊಬ್ಬ ಪೆಟ್ರೋಲ್ ಬಾಂಬ್ ಎಸೆದಿರುವ ಘಟನೆ ನಡೆದಿದೆ.

ಚೆನ್ನೈತಮಿಳುನಾಡು ಬಿಜೆಪಿ ಕಚೇರಿ ಮೇಲೆ ಅಪರಿಚಿತ ವ್ಯಕ್ತಿಯೊಬ್ಬ ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಪೆಟ್ರೋಲ್ ಬಾಂಬ್ ಎಸೆದಿರುವ ಘಟನೆ ನಡೆದಿದೆ.ಈ ಘಟನೆ ಬಗ್ಗೆ ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದ ತಮಿಳುನಾಡು ಬಿಜೆಪಿ ಮುಖ್ಯಸ್ಥ ಕೆ ಅಣ್ಣಾಮಲೈ, ಈ ಪೆಟ್ರೋಲ್ ಬಾಂಬ್ ಎಸೆದಿರುವ ಘಟನೆಯ ಹಿಂದೆಯೇ ದೊಡ್ಡ ಪಿತೂರಿಯೇ ಇದೆ.ಹಾಗಾಗಿ ಈ ಘಟನೆಯ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ)ಗೆ ಒಪ್ಪಿಸುತ್ತೇವೆ ಎಂದು ಹೇಳಿದರು.ಈ ಘಟನೆಯ ತನಿಖೆಯನ್ನು ಎನ್‌ಐಎಗೆ ಒಪ್ಪಿಸುತ್ತೇವೆ. ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸಿ ಶಿಕ್ಷೆಯಾಗುವಂತೆ ಕ್ರಮಕೈಗೊಳ್ಳುತ್ತೇವೆ. ನಮ್ಮ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿದೆ. ಈ ಘಟನೆಗೆ ಎನ್‌ಐಎ ಒಂದೇ ಪರಿಹಾರ. ಇದರಿಂದ ಸತ್ಯ ಮತ್ತು ಇದು ಯಾರ ಪಿತೂರಿ ಎಂಬುದು ಹೊರಬರುತ್ತದೆ ಎಂದು ಹೇಳಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಫಿಲ್ಟರ್ ಆಗಾಗ ಕೈಕೊಡುತ್ತಿರುವುದರಿಂದ ವರ್ಷದ 12 ತಿಂಗಳು ಇಲ್ಲಿ ಫಿಲ್ಟರ್ ನದ್ದೇ ಸಮಸ್ಯೆಯಾಗುತ್ತಿದೆ.

Thu Feb 10 , 2022
ಸಿರುಗುಪ್ಪ: ತಾಲೂಕಿನ ಕರೂರು ಗ್ರಾಮಕ್ಕೆ ನೀರು ಪೂರೈಕೆ ಮಾಡುವ ಕೆರೆಯಲ್ಲಿ ನೀರು ಶುದ್ಧೀಕರಿಸಿ ಬಿಡುವ ಫಿಲ್ಟರ್ ಆಗಾಗ ಕೈಕೊಡುತ್ತಿರುವುದರಿಂದ ವರ್ಷದ 12 ತಿಂಗಳು ಇಲ್ಲಿ ಫಿಲ್ಟರ್ ನದ್ದೇ ಸಮಸ್ಯೆಯಾಗುತ್ತಿದೆ.ಗ್ರಾಮಸ್ಥರಿಗೆ ಶುದ್ಧ ನೀರು ಒದಗಿಸುವ ಉದ್ದೇಶದಿಂದ ಕೋಟ್ಯಂತರ ರೂ.ವೆಚ್ಚದಲ್ಲಿ ನಿರ್ಮಾಣವಾಗಿರುವ ಕೆರೆ ನಿರ್ವಹಣೆಯನ್ನು ಮಾಡಲು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ವತಿಯಿಂದ ಟೆಂಡರ್‌ ಕರೆದು ಗುತ್ತಿಗೆ ನೀಡಲಾಗುತ್ತದೆ. ಸುಮಾರು 44 ಲಕ್ಷ ರೂ. ವೆಚ್ಚದಲ್ಲಿ ಜಲ್‌ಜೀವನ್‌ ಮಿಷನ್‌ ಯೋಜನೆಯಡಿ […]

Advertisement

Wordpress Social Share Plugin powered by Ultimatelysocial