ಅಭಿಮಾನಿಗಳೊಂದಿಗೆ ಹುಟ್ಟು ಹಬ್ಬ ಆಚರಿಸಿಕೊಂಡ ಅನೂಪ್ ರೇವಣ್ಣ.

ಲಕ್ಷ್ಮಣ ಚಿತ್ರದ ಮೂಲಕ ಸ್ಯಾಂಡಲ್ ವುಡ್ ಅಂಗಳದಲ್ಲಿ ಭರವಸೆ ಮೂಡಿಸಿರುವ ಯುವನಟ ಅನೂಪ್ ರೇವಣ್ಣ. ‘ಹೈಡ್ ಅಂಡ್ ಸೀಕ್’ ಸಿನಿಮಾ ಮೂಲಕ ಪ್ರೇಕ್ಷಕರೆದುರು ಬರಲು ಸಜ್ಜಾಗಿರುವ ಅನೂಪ್ ರೇವಣ್ಣ ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದಾರೆ. ಅಭಿಮಾನಿಗಳೊಂದಿಗೆ ಕೇಕ್ ಕತ್ತರಿಸಿ ಅನೂಪ್ ಹುಟ್ಟು ಹಬ್ಬ ಆಚರಿಸಿಕೊಂಡಿದ್ದಾರೆ. ಈ ಸಂತಸದ ದಿನದಂದೇ ಹೈಡ್ ಅಂಡ್ ಸೀಕ್ ಚಿತ್ರತಂಡ ಸಿನಿಮಾದ ಪೋಸ್ಟರ್ ಲಾಂಚ್ ಮಾಡಿ ಚಿತ್ರದ ನಾಯಕ ನಟನಿಗೆ ಶುಭಕೋರಿದೆ.ಪುನೀತ್ ನಾಗರಾಜು ನಿರ್ದೇಶನದಲ್ಲಿ ಮೂಡಿ ಬರ್ತಿರುವ ಚಿತ್ರ ಹೈಡ್ ಅಂಡ್ ಸೀಕ್. ಚಿತ್ರದಲ್ಲಿ ಅನೂಪ್ ರೇವಣ್ಣ ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ನಾಯಕಿಯಾಗಿ ಧನ್ಯಾ ರಾಮ್ ಕುಮಾರ್ ನಟಿಸಿದ್ದಾರೆ. ಹುಟ್ಟುಹಬ್ಬದ ದಿನವೇ ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ ಪ್ಯಾನ್ ಇಂಡಿಯಾ ಸಿನಿಮಾ ಕಬ್ಜ ಚಿತ್ರದಲ್ಲಿ ಸ್ಪೆಶಲ್ ರೋಲ್ ನಲ್ಲಿ ಕಾಣಿಸಿಕೊಂಡಿರುವ ಬಗ್ಗೆ ಸೀಕ್ರೆಟ್ ರಿವೀಲ್ ಮಾಡಿದ್ದಾರೆ ಅನೂಪ್ ರೇವಣ್ಣ. ‘ಕಬ್ಜ’ ಹಾಗೂ ‘ಹೈಡ್ ಅಂಡ್ ಸೀಕ್’ ಎರಡೂ ಚಿತ್ರಗಳು ಸ್ಪೆಶಲ್ ಸಿನಿಮಾಗಳಾಗುತ್ತವೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ ಅನೂಪ್.‘ಹೈಡ್ ಅಂಡ್ ಸೀಕ್’ ಸಿನಿಮಾ ಚಿತ್ರೀಕರಣ ಕಂಪ್ಲೀಟ್ ಆಗಿದ್ದು ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಚಿತ್ರತಂಡ ನಿರತವಾಗಿದೆ. ಪುನೀತ್ ನಾಗರಾಜು, ವಸಂತ್ ರಾವ್ ಎಂ.ಕುಲ್ಕರ್ಣಿ ನಿರ್ಮಾಣದಲ್ಲಿ ಈ ಚಿತ್ರ ಮೂಡಿ ಬರ್ತಿದ್ದು, ರಿಜೋ ಪಿ ಜಾನ್ ಛಾಯಾಗ್ರಾಹಣ, ಸ್ಯಾಂಡಿ ಅದ್ದಾನ್ಕಿ ಸಂಗೀತ ನಿರ್ದೇಶನ, ಮಧು ತುಂಬಕೆರೆ ಸಂಕಲನ ‘ಹೈಡ್ ಅಂಡ್ ಸೀಕ್’ ಚಿತ್ರಕ್ಕಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಮ್ಯೂಸಿಕಲ್ ಟ್ರೇಲರ್ ಮೂಲಕ ಗಮನ ಸೆಳೆದ ಚಿತ್ರತಂಡ.

Thu Feb 9 , 2023
ಫೀನಿಕ್ಸ್ ಪ್ರೊಡಕ್ಷನ್ ಬ್ಯಾನರ್ ನಡಿ ಅನಿಲ್ ರಾಜ್ ಸಂಕೇತ್ ಹಾಗೂ ಉಮೇಶ್ ಎಲ್ ಧರ್ಮಶಿ ನಿರ್ಮಾಣದಲ್ಲಿ ಮೂಡಿಬಂದಿರುವ ‘ಸಂಭ್ರಮ’ ಸಿನಿಮಾ ಬಿಡುಗಡೆಗೆ ರೆಡಿಯಾಗಿದೆ. ಫೆಬ್ರವರಿ 24ರಂದು ಸಿನಿಮಾ ರಾಜ್ಯಾದ್ಯಂತ ತೆರೆ ಕಾಣುತ್ತಿದೆ. ಚಿತ್ರದ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿರುವ ಸಿನಿಮಾ ತಂಡ ಚಿತ್ರದ ಪ್ರಾಮಿಸಿಂಗ್ ಟ್ರೇಲರ್ ಬಿಡುಗಡೆ ಮಾಡಿ ಎಲ್ಲರ ಗಮನ ಸೆಳೆಯುತ್ತಿದೆ. ಮ್ಯೂಸಿಕಲ್ ಟ್ರೇಲರ್ ಬಿಡುಗಡೆ ಮಾಡುವ ಮೂಲಕ ಟ್ರೇಲರ್ ಬಿಡುಗಡೆಯಲ್ಲಿ ವಿಶೇಷತೆ ಮೆರೆದಿದೆ ಚಿತ್ರತಂಡ. ‘ಸಂಭ್ರಮ’ ಮ್ಯೂಸಿಕಲ್ ರೋಮ್ಯಾಂಟಿಕ್ […]

Advertisement

Wordpress Social Share Plugin powered by Ultimatelysocial