ಆಟಿಸಂ ಸಮಸ್ಯೆ ವಿವರಿಸುವ ಕನ್ನಡದ ಮೊದಲ ಸಿನಿಮಾ..

ಆಟಿಸಂ ಸಮಸ್ಯೆ ವಿವರಿಸುವ ಕನ್ನಡದ ಮೊದಲ ಸಿನಿಮಾ.. ರಾಷ್ಟ್ರಪ್ರಶಸ್ತಿ ಪುರಸ್ಕೃತ ನಿರ್ದೇಶಕ ಚೇತನ್ ಸಾರಥ್ಯದಲ್ಲಿ ‘ವರ್ಣಪಟಲ’ರಾಷ್ಟ್ರಪ್ರಶಸ್ತಿ ಪುರಸ್ಕೃತ ನಿರ್ದೇಶಕ ಚೇತನ್ ಮುಂಡಾಡಿ ನಿರ್ದೇಶನದ ‘ವರ್ಣಪಟಲ’ ಸಿನಿಮಾ ಈಗಾಗಲೇ ಹಲವು ಪ್ರಶಸ್ತಿಗಳನ್ನು ಬಾಚಿಕೊಂಡಿದೆ. ವರ್ಲ್ಡ್ ಪ್ರೀಮಿಯರ್ ಫಿಲ್ಮ್‌ ಪ್ರಶಸ್ತಿ, ಲಂಡನ್ ಇಂಡಿಪೆಂಡೆಂಟ್‌ ಫಿಲ್ಮ್ ಅವಾರ್ಡ್‌ನಲ್ಲಿ ಬೆಸ್ಟ್ ಫಾರಿನ್ ಫೀಚರ್ ಫಿಲ್ಮ್ ಪ್ರಶಸ್ತಿ ಜೊತೆಗೆ ಹಲವು ಪ್ರಶಸ್ತಿಯನ್ನು ತನ್ನ ತೆಕ್ಕೆಗೆ ಹಾಕಿಕೊಂಡಿದೆ.

ನೈಜಘಟನೆಯಾಧಾರಿತ ವರ್ಣಪಟಲ ಸಿನಿಮಾದ ಟ್ರೇಲರ್ ರಿಲೀಸ್ ಆಗಿದ್ದು, ಸಿನಿಮಾ ಮೇಲಿನ ನಿರೀಕ್ಷೆಯನ್ನು ದುಪ್ಪಟ್ಟು ಮಾಡಿದೆ.. ಎಲ್ಲರ ಅಮ್ಮಂದಿರ ತರ ನಾನು ಅಮ್ಮ ಅಲ್ಲ.. ಎಲ್ಲರ ಮಕ್ಕಳಂತೆ ನನ್ನ ಮಗಳಲ್ಲ .. ಎಂಬ ಡೈಲಾಗ್ ನಿಂದ ಶುರುವಾಗುವ ಟ್ರೇಲರ್ ನಲ್ಲಿ ಪ್ರೀತಿ, ಮಮತೆ, ನೋವು ಎಲ್ಲವನ್ನು ಒಳಗೊಂಡಿದೆ.
ನಿತ್ಯಾ ತಾನು ಪ್ರೀತಿಸಿದ ಹುಡುಗ ಮೈಕಲ್ ನನ್ನು ಮದುವೆಯಗ್ತಾಳೆ . ಮದುವೆಯ ಬಳಿಕ ಹೆಣ್ಣು ಮಗುವಿಗೆ ನಿತ್ಯ ತಾಯಿ ಆಗ್ತಾಳೆ. ಆ ಮಗುವೇ ಮೈನಾ. ಆದ್ರೆ ಎಲ್ಲಾ ಸರಿಯಿದ್ದ ನಿತ್ಯಾಳ ಬದುಕಲ್ಲಿ ಮೈನಾ ಅನ್ನೋ ಮಗಳಿಂದ ಜೀವನವೇ ಬದಲಾಗಿ ಹೋಗುತ್ತೆ.. ಮೈನಾ ಆಟಿಸಂ ಅನ್ನೋ ಖಾಯಿಲೆಯಿಂದ ಬಳಲುತ್ತಿರುತ್ತಾಳೆ. ಇದರಿಂದ ನಿತ್ಯಾ ಸಾಕಷ್ಟು ತೊಂದರೆ ಅನುಭವಿಸುತ್ತಾಳೆ. ಆ ಖಾಯಿಲೆಯಿಂದ ಮೈನಾಳನ್ನು ನಿತ್ಯಾ ಹೇಗೆ ಹೊರ ತರುತ್ತಾರೆ ಅನ್ನೋದು ಚಿತ್ರಕಥೆ.
ವರ್ಣಪಟಲ ಸಿನಿಮಾದ ಚಿತ್ರಕಥೆ ಹಾಗೂ ನಿರ್ಮಾಣವನ್ನು ಡಾ. ಸರಸ್ವತಿ ಹೊಸದುರ್ಗ, ಕವಿತಾ ಸಂತೋಷ್ ಹೊತ್ತಿದ್ದು. ಈ ಚಿತ್ರಕ್ಕೆ ಕಾರ್ತೀಕ್ ಸರ್ಗೂರು ರವರ ಸಾಹಿತ್ಯವಿದ್ದು, ಕಿರುತೆರೆಯ ಖ್ಯಾತ ನಿರ್ದೇಶಕ ವಿನು ಬಳಂಜ ಸಂಭಾಷಣೆ ಬರೆದಿದ್ದಾರೆ. ಗಣೇಶ್ ಹೆಗ್ಡೆ ಛಾಯಾಗ್ರಾಹಕರಾಗಿ ಕೆಲಸ ಮಾಡಿದ್ದಾರೆ. ಹರ್ಷವರ್ಧನ್ ರಾಜ್ ಸಂಗೀತ ನಿರ್ದೇಶನ ಚಿತ್ರಕ್ಕಿದೆ. ದಕ್ಷಿಣ ಕನ್ನಡದ ಮಡಂತ್ಯಾರು, ಮಂಗಳೂರು, ಮಡಿಕೇರಿ, ಬೆಂಗಳೂರಿನಲ್ಲಿ ಸಿನಿಮಾದ ಚಿತ್ರೀಕರಣ ನಡೆದಿದೆ. ಕನ್ನಡದಲ್ಲಿ ಆಟಿಸಂ ಕುರಿತು ತಯಾರಾಗಿರುವ ಮೊದಲ ಸಿನಿಮಾ ವರ್ಣಪಟಲ..ಕಮರ್ಷಿಯಲ್ ಸಿನಿಮಾಗಳ ನಡುವೆ ಕಥೆಯನ್ನೇ ನಾಯಕರನ್ನಾಗಿಸಿ, ಬೇರೆ ಭಾಷೆಗಳ ಕಥೆಗಳ ಜೊತೆಗೆ ಪೈಪೋಟಿ ಕೊಂಡಂತೆ ಇರುವ, ಅಟಿಸಂ ಮಕ್ಕಳ ತಂದೆತಾಯಿಗಳಿಗೆ ಒಂದು ಬಾಹ್ಯ ಬೆಂಬಲವನ್ನು ಕೊಡುವ ಉದ್ದೇಶ ಈ ವರ್ಣಪಟಲ ಸಿನಿಮಾದ ಉದ್ದೇಶವಾಗಿದ್ದು , ಇದು ಎಲ್ಲರ ಗಮನವನ್ನು ಸೆಳೆಯುತ್ತಿದೆ, ಅನ್ನುವುದು ವಿಶೇಷ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಮಹಿಳೆಯ 'ಜೀನಿಯಸ್' ಸೂಟ್‌ಕೇಸ್ ಶಾಪಿಂಗ್ ಹ್ಯಾಕ್ ವೈರಲ್ ಆಗಿದೆ; ನೆಟಿಜನ್‌ಗಳು 'ಕಾನೂನುಬಾಹಿರ ಅನಿಸುತ್ತದೆ ಆದರೆ ಅಲ್ಲ' ಎಂದು ಹೇಳುತ್ತಾರೆ

Thu Mar 10 , 2022
  ಮಾರುಕಟ್ಟೆಗೆ ಹೋದ ನಂತರ ಮನೆಗೆ ಸಾಕಷ್ಟು ಶಾಪಿಂಗ್ ಬ್ಯಾಗ್‌ಗಳನ್ನು ಕೊಂಡೊಯ್ಯುವುದು ನಿಮಗೆ ಕಿರಿಕಿರಿಯನ್ನುಂಟುಮಾಡುತ್ತದೆಯೇ? ಅಲ್ಲದೆ, ಒಬ್ಬ ಮಹಿಳೆ ಶಾಪಿಂಗ್ ಹ್ಯಾಕ್‌ನೊಂದಿಗೆ ಬಂದಿದ್ದಾರೆ ಅದು ತೊಂದರೆಯನ್ನು ಕಡಿಮೆ ಮಾಡುತ್ತದೆ. ಶಾಪಿಂಗ್ ಹ್ಯಾಕ್‌ಗಾಗಿ ಮಹಿಳೆಯನ್ನು “ಪ್ರತಿಭೆ” ಎಂದು ಶ್ಲಾಘಿಸಲಾಗುತ್ತಿದೆ, ಅದು ಆಕೆಯನ್ನು ಪ್ಲಾಸ್ಟಿಕ್ ಚೀಲಗಳನ್ನು ಬಳಸದಂತೆ ತಡೆಯುತ್ತದೆ. ಟಿಕ್‌ಟಾಕ್‌ನಲ್ಲಿ ತನ್ನ ವಾರದ ಶಾಪಿಂಗ್ ಅನ್ನು ಪರಿಣಾಮಕಾರಿಯಾಗಿ ಮಾಡಲು ಅನುವು ಮಾಡಿಕೊಡುವ ಬುದ್ಧಿವಂತ ಹ್ಯಾಕ್ ಅನ್ನು ಲಿಡಿಯಾ ಹಂಚಿಕೊಂಡಿದ್ದಾರೆ. ಅವಳು ಈಗಾಗಲೇ ಹೊಂದಿರುವ […]

Advertisement

Wordpress Social Share Plugin powered by Ultimatelysocial