ಅನುಮೋದಿತ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಲು ಸೂಚನೆ

ಜಿಲ್ಲಾ ಪಂಚಾಯತ್‍ನಲ್ಲಿ ಈಗಾಗಲೆ ಕ್ರಿಯಾಯೋಜನೆಗೆ ಅನುಮೋದನೆ ಪಡೆದು, ಪ್ರಾರಂಭಿಸಿರುವ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು, ಇದುವರೆಗೂ ಪ್ರಾರಂಭವಾಗದ ಕಾಮಗಾರಿಗಳನ್ನು ಶೀಘ್ರ ಪ್ರಾರಂಭಿಸಬೇಕು, ಗುಣಮಟ್ಟದ ಕಾಮಗಾರಿ ಕೈಗೊಂಡು, ಅನುದಾನ ಸೋರಿಕೆಯನ್ನು ತಡೆಗಟ್ಟಬೇಕು.  ಲೋಪವೆಸಗುವ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಪ್ರವಾಸೋದ್ಯಮ ಇಲಾಖೆ ನಿರ್ದೇಶಕರು, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಡಾ.ವಿ.ರಾಮ್ ಪ್ರಸಾತ್ ಮನೋಹರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.  ಇಲ್ಲಿನ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ  ಜಿಲ್ಲಾ ಪಂಚಾಯತ್ ಡಿಸೆಂಬರ್-2022ರ ಮಾಹೆಯ ಅಂತ್ಯದವರೆಗಿನ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಮಾಸಿಕ ಕೆ.ಡಿ.ಪಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಜಿಲ್ಲೆಯಲ್ಲಿ ಅಭಿವೃದ್ಧಿ ಕಾಮಗಾರಿಗಳಲ್ಲಿ ಹೆಚ್ಚಿನ ಗುಣಮಟ್ಟಕ್ಕೆ ಆದ್ಯತೆ ನೀಡಬೇಕು, ಕಾಮಗಾರಿಗಳಲ್ಲಿ ಯಾವುದೇ ಲೋಪವಾಗದಂತೆ ಗುಣಮಟ್ಟಕ್ಕೆ ಆದ್ಯತೆ ನೀಡಬೇಕು. ಅಲ್ಲದೆ ಅನುದಾನದ ಸೋರಿಕೆಯನ್ನು ತಡೆಗಟ್ಟಬೇಕು.  ಸರ್ಕಾರಿ ಯೋಜನೆಗಳಿಗೆ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆಯು ಪಾರದರ್ಶಕವಾಗಿರಬೇಕು. ಫಲಾನುಭವಿಗಳ ಆಯ್ಕೆ ಮಾಡಿ, ಆಯಾ ಕ್ಷೇತ್ರದ ಜನಪ್ರತಿನಿಧಿಗಳ ಗಮನಕ್ಕೆ ತಂದು, ಸರ್ಕಾರದ ಸೌಲಭ್ಯಗಳನ್ನು ವಿಳಂಬ ಮಾಡದೆ ಸಮರ್ಪಕವಾಗಿ ತಲುಪಿಸಬೇಕು. ವಸತಿ ನಿಲಯ, ಆಸ್ಪತ್ರೆ, ರೈತ ಸಂಪರ್ಕ ಕೇಂದ್ರಗಳಲ್ಲಿ ಉತ್ತಮ ಸೇವೆ ನೀಡಬೇಕು. ನ್ಯಾಯಬೆಲೆ ಅಂಗಡಿಗಳಲ್ಲಿ ಸಮರ್ಪಕವಾಗಿ ಪಡಿತರ ಸಾಮಗ್ರಿಗಳು ವಿತರಣೆಯಾಗಬೇಕು, ಕ್ರಿಯಾ ಯೋಜನೆಯಂತೆ ಕಾಮಗಾರಿಗಳು ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳ್ಳಬೇಕು.  ಅಧಿಕಾರಿಗಳು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಬೇಕು. ಅಧಿಕಾರಿ ಹಾಗೂ ಸಿಬ್ಬಂದಿಗಳ ವಿರುದ್ಧ ದೂರು ಬಂದರೆ ತಕ್ಷಣ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ಎಸ್.ದಿವಾಕರ್, ಉಪಕಾರ್ಯದರ್ಶಿ ಡಾ.ರಂಗಸ್ವಾಮಿ, ಮುಖ್ಯ ಯೋಜನಾಧಿಕಾರಿ ಗಾಯತ್ರಿದೇವಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಏಕದಿನ ತಂಡಕ್ಕೆ ಚೊಚ್ಚಲ ಬಾರಿಗೆ ಎಂಟ್ರಿ ಕೊಟ್ಟ ಈ ಆಟಗಾರ.

Sat Jan 14 , 2023
        ಟೀಂ ಇಂಡಿಯಾ ಜನವರಿ 18 ರಿಂದ ನ್ಯೂಜಿಲೆಂಡ್ ವಿರುದ್ಧ 3 ODI ಮತ್ತು T20 ಸರಣಿಗಳನ್ನು ಆಡಲಿದೆ. ಏಕದಿನ ಸರಣಿಯಲ್ಲಿ ರೋಹಿತ್ ಶರ್ಮಾ ತಂಡವನ್ನು ಮುನ್ನಡೆಸಲಿದ್ದು, ಟಿ20 ಸರಣಿಗೆ ಹಾರ್ದಿಕ್ ಪಾಂಡ್ಯ ಅವರನ್ನು ನಾಯಕರನ್ನಾಗಿ ಮಾಡಲಾಗಿದೆ. ಈ ಏಕದಿನ ಸರಣಿಗಾಗಿ ಭಾರತೀಯ ಆಯ್ಕೆಗಾರರು ಆಘಾತಕಾರಿ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ಏಕದಿನ ತಂಡಕ್ಕೆ ಆಯ್ಕೆಗಾರರು ಯುವ ಆಟಗಾರನನ್ನು ಸೇರಿಸಿಕೊಂಡಿದ್ದಾರೆ. ಈ ಆಟಗಾರ ಕೆಲವು ಸಮಯದಿಂದ ನಿರಂತರವಾಗಿ ಟೆಸ್ಟ್ […]

Advertisement

Wordpress Social Share Plugin powered by Ultimatelysocial