`ಅಪ್ಪು ಅಮರ’ ಪುಸ್ತಕ ಬಿಡುಗಡೆ!

ಬೆಂಗಳೂರು: ಡಾ.ಪುನೀತ್ ರಾಜ್ ಕುಮಾರ್ ಕುರಿತಾಗಿ ಲೇಖಕ, ಪ್ರಕಾಶಕ ಭದ್ರಾವತಿ ರಾಮಾಚಾರಿಯವರು `ಅಪ್ಪು ಅಮರ’ ಎಂಬ ಪುಸ್ತಕವನ್ನು ಸಂಪಾದಿಸಿದ್ದಾರೆ. ಸುಮಾರು ಮೂನ್ನೂರೈವತ್ತು ಪುಟಗಳುಳ್ಳ ಈ ಪುಸ್ತಕ ಬಹುವರ್ಣದಲ್ಲಿ ಮುದ್ರಿತವಾಗಿದ್ದು ಮೇ ೭ರ ಶನಿವಾರ ಬೆಳಿಗ್ಗೆ ೧೦ ಗಂಟೆಗೆ ಬೆಂಗಳೂರಿನ ನಯನ ಸಭಾಂಗಣದಲ್ಲಿ ಹಿರಿಯ ನಟ ರಾಮಕೃಷ್ಣರವರು ಬಿಡುಗಡೆ ಮಾಡಲಿದ್ದಾರೆ.
ಖ್ಯಾತ ಚಿತ್ರ ನಿರ್ದೇಶಕ ಓಂ ಸಾಯಿ ಪ್ರಕಾಶ್, ನಿರ್ಮಾಪಕ ಎಸ್.ಎ.ಗೋವಿಂದ ರಾಜ್, ಸಂಗೀತ ನಿರ್ದೇಶಕರಾದ ಗುರುಕಿರಣ್, ವಿ.ಮನೋಹರ್, ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾದ ಸುನಿಲ್ ಪುರಾಣಿಕ್, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಕವಿ ಡಾ. ದೊಡ್ಡರಂಗೇಗೌಡ, ಗ್ರಂಥಾಲಯ ಇಲಾಖೆ ನಿರ್ದೇಶಕ ಡಾ.ಸತೀಶ ಕುಮಾರ ಹೊಸಮನಿ, ಡಾ.ಸಿ.ಸೋಮಶೇಖರ್, ಧೀರೆನ್ ರಾಮ್‌ಕುಮಾರ್, ಭಾ.ಮ.ಹರೀಶ್, ನಟಿ ಪ್ರೇಮಾ, ಕಿರುತೆರೆ ನಟಿ ಅಪೂರ್ವ ಡಿ. ಸಾಗರ್, ಕರ್ನಾಟಕ ರಾಜ್ಯ ವಿಶ್ವಕರ್ಮ ಮಹಾ ಮಂಡಲದ ರಾಜ್ಯಾಧ್ಯಕ್ಷ ಎಲ್.ನಾಗರಾಜಚಾರ್ ಭಾಗವಹಿಸುತ್ತಿದ್ದಾರೆ.
ಈ ಸಂದರ್ಭದಲ್ಲಿ ಅಖಿಲ ಕರ್ನಾಟಕ ಡಾ.ರಾಜ್ ಕುಮಾರ್ ಅಭಿಮಾನಿ ಸಂಘಗಳ ಒಕ್ಕೂಟದ ಉಪಾಧ್ಯಕ್ಷ ಎನ್.ಆರ್.ರಮೇಶ್‌ರವರಿಗೆ `ಡಾ.ಪುನೀತ್ ರಾಜ್ ಕುಮಾರ್ ಪ್ರಶಸ್ತಿ’ ಪ್ರದಾನ ಮಾಡಲಾಗುತ್ತದೆ. ಅಲ್ಲದೆ ಇದೆ ಸಮಾರಂಭದಲ್ಲಿ `ಅಲ್ಲಮ ಪ್ರಭು ದೇವರು’ `ಕೈವಾರ ತಾತಯ್ಯ’ ಮುಕ್ತಕ ಕಾವ್ಯ, `ರಾಮಕಥಾ ಮಿತ್ರ’ `ಊರುಗೋಲಿನ ಸುತ್ತ ಮುತ್ತ’ ಕೃತಿಗಳಿಗೆ `ಸಾಹಿತ್ಯ ಸುಮ ಪ್ರಶಸ್ತಿ’ ನೀಡಲಾಗುತ್ತದೆ ಎಂದು ಕಾವ್ಯಸ್ಪಂದನ ಪಬ್ಲಿಕೇಷನ್ ಸಂಸ್ಥೆಯ ಮಾಲೀಕರಾದ ಭದ್ರಾವತಿ ರಾಮಾಚಾರಿಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಮೇ 7-8ಕ್ಕೆ ಶುರು YPL...ಇದು ವಿಷ್ಣುದಾದಾ ಅಭಿಮಾನಿಗಳ ಯಜಮಾನ ಪ್ರೀಮಿಯರ್ ಲೀಗ್!

Thu May 5 , 2022
ಈಗ ಎಲ್ಲೆಲ್ಲೂ IPL ಫೀವರ್ ಶುರುವಾಗಿದೆ. ಈ ಐಪಿಎಲ್ ಹಂಗಾಮದ ನಡುವೆ YPL ಟೂರ್ನಿ ಶುರುವಾಗ್ತಿದೆ. ನಾವು ಕೆಪಿಎಲ್(ಕರ್ನಾಟಕ ಪ್ರೀಮಿಯರ್ ಲೀಗ್) ಸಿಸಿಎಲ್ ಸೆಲೆಬ್ರಿಟಿ ಪ್ರೀಮಿಯರ್ ಲೀಗ್) ಕೇಳಿದ್ದೇವೆ ಇದು ಯಾವುದು YPL ಅನ್ನೋ ಪ್ರಶ್ನೆಗೆ ಉತ್ತರ ಯಜಮಾನ ಪ್ರೀಮಿಯರ್ ಲೀಗ್.ವಿಷ್ಣುಸೇನಾ ಸಮಿತಿಯಿಂದ ಆಯೋಜಿಸಲಾಗಿರುವ ಈ ಟೂರ್ನಿಯ ಸಂಪೂರ್ಣ ಜವಾಬ್ದಾರಿಯನ್ನು ವಿಷ್ಣುಸೇನಾ ಸಮಿತಿ ಅಧ್ಯಕ್ಷ ವೀರಕಪುತ್ರ ಶ್ರೀನಿವಾಸ್ ವಹಿಸಿಕೊಂಡಿದ್ದಾರೆ. ಇದೇ 7 ಮತ್ತು 8ರಂದು‌ ನಡೆಯಲಿರುವ YPL ಟೂರ್ನಿಮೆಂಟ್ ಗಾಗಿ […]

Advertisement

Wordpress Social Share Plugin powered by Ultimatelysocial