ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ನಮ್ಮನ್ನೆಲ್ಲ ಬಿಟ್ಟು ದೂರ ಹೋಗಿದ್ದಾರೆ. ಅವರಿಗೆ ಅವರೇ ಸಾಟಿ. ಸಿನಿಮಾದಲ್ಲಿ ಅಷ್ಟೇ ಅಲ್ಲದೇ ಸಮಾಜಮುಖಿ ಕಾರ್ಯದಲ್ಲಿ ಪುನೀತ್ ರಾಜ್ಕುಮಾರ್ ತೊಡಗಿಸಿಕೊಂಡಿದ್ದವರು. ಸ್ಯಾಂಡಲ್ವುಡ್ ನಟ ಪವರ್ ಸ್ಟಾರ್ ಅವರು ನಡೆಸುತ್ತಿದ್ದ ಹಲವಾರು ಸಮಾಜಮುಖಿ ಕಾರ್ಯಗಳ ನಡುವೆ ಒಂದೂವರೆ ಸಾವಿರಕ್ಕೂ ಹೆಚ್ಚು ಮಕ್ಕಳಿಗೆ ವಿದ್ಯಾಭ್ಯಾಸ ಕೊಡಿಸುವ ಜವಾಬ್ದಾರಿಯನ್ನು ಕೂಡ ಹೊತ್ತುಕೊಂಡಿದ್ದರು. ಆದರೆ ಅವರ ನಿಧನದ ಬಳಿಕ ಈ ಮಕ್ಕಳ ಜವಾಬ್ದಾರಿಯನ್ನು ಯಾರು ನಿರ್ವಹಿಸುತ್ತಾರೆ ಎಂಬ ಪ್ರಶ್ನೆ ಎಲ್ಲರಲ್ಲಿಯೂ ಮೂಡಿತ್ತು. ಪುನೀತ್ ಕುಟುಂಬಸ್ಥರುಈ ಕಾರ್ಯವನ್ನು ಮುಂದುವರಿಸುತ್ತಾರೆ ಎಂದು ಹೇಳಲಾಗಿತ್ತು. ಇದೀಗ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅವರ ಆತ್ಮೀಯ ಗೆಳೆಯ ಕಾಲಿವುಡ್ ನಟ ವಿಶಾಲ್ಅಷ್ಟು ಮಕ್ಕಳ ಹೊಣೆಯನ್ನು ನಾನು ಹೊರುತ್ತೇನೆ ಎಂದು ಹೇಳುವ ಮೂಲಕ ಹೃದಯ ವೈಶಾಲ್ಯತೆ ಮೆರೆದಿದ್ದಾರೆ. ತಮಿಳು ನಟ ವಿಶಾಲ್ರ ಈ ಕಾರ್ಯ ಕನ್ನಡಿಗರ ಮನ ಗೆದ್ದಿದೆ.
ತಾಜಾ ಸುದ್ಧಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ :
https://play.google.com/store/apps/details?id=com.speed.newskannada