ಅಪ್ಪು ಓದಿಸುತ್ತಿದ್ದ 1800 ಮಕ್ಕಳ ಹೊಣೆ ಹೊತ್ತ ತಮಿಳು ನಟ ವಿಶಾಲ್..!

ಪವರ್​ ಸ್ಟಾರ್​ ಪುನೀತ್​ ರಾಜ್​ಕುಮಾರ್ನಮ್ಮನ್ನೆಲ್ಲ ಬಿಟ್ಟು ದೂರ ಹೋಗಿದ್ದಾರೆ. ಅವರಿಗೆ ಅವರೇ ಸಾಟಿ. ಸಿನಿಮಾದಲ್ಲಿ ಅಷ್ಟೇ ಅಲ್ಲದೇ ಸಮಾಜಮುಖಿ ಕಾರ್ಯದಲ್ಲಿ ಪುನೀತ್​ ರಾಜ್​ಕುಮಾರ್​ ತೊಡಗಿಸಿಕೊಂಡಿದ್ದವರು. ಸ್ಯಾಂಡಲ್‍ವುಡ್ ನಟ ಪವರ್ ಸ್ಟಾರ್ ಅವರು ನಡೆಸುತ್ತಿದ್ದ ಹಲವಾರು ಸಮಾಜಮುಖಿ ಕಾರ್ಯಗಳ ನಡುವೆ ಒಂದೂವರೆ ಸಾವಿರಕ್ಕೂ ಹೆಚ್ಚು ಮಕ್ಕಳಿಗೆ ವಿದ್ಯಾಭ್ಯಾಸ ಕೊಡಿಸುವ ಜವಾಬ್ದಾರಿಯನ್ನು ಕೂಡ ಹೊತ್ತುಕೊಂಡಿದ್ದರು. ಆದರೆ ಅವರ ನಿಧನದ ಬಳಿಕ ಈ ಮಕ್ಕಳ ಜವಾಬ್ದಾರಿಯನ್ನು ಯಾರು ನಿರ್ವಹಿಸುತ್ತಾರೆ ಎಂಬ ಪ್ರಶ್ನೆ ಎಲ್ಲರಲ್ಲಿಯೂ ಮೂಡಿತ್ತು. ಪುನೀತ್​ ಕುಟುಂಬಸ್ಥರುಈ ಕಾರ್ಯವನ್ನು ಮುಂದುವರಿಸುತ್ತಾರೆ ಎಂದು ಹೇಳಲಾಗಿತ್ತು. ಇದೀಗ ಪವರ್​ ಸ್ಟಾರ್​ ಪುನೀತ್​ ರಾಜ್​ಕುಮಾರ್​ ಅವರ ಆತ್ಮೀಯ ಗೆಳೆಯ ಕಾಲಿವುಡ್ ನಟ ವಿಶಾಲ್ಅಷ್ಟು ಮಕ್ಕಳ ಹೊಣೆಯನ್ನು ನಾನು ಹೊರುತ್ತೇನೆ ಎಂದು ಹೇಳುವ ಮೂಲಕ ಹೃದಯ ವೈಶಾಲ್ಯತೆ ಮೆರೆದಿದ್ದಾರೆ. ತಮಿಳು ನಟ ವಿಶಾಲ್​ರ ಈ ಕಾರ್ಯ ಕನ್ನಡಿಗರ ಮನ ಗೆದ್ದಿದೆ.

 

ತಾಜಾ ಸುದ್ಧಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ :

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಮನೆಗೆ ಮರಳಿದ ಸೂಪರ್​ ಸ್ಟಾರ್​ ರಜನಿಕಾಂತ್​...!

Mon Nov 1 , 2021
ಭಾರತ ಚಿತ್ರರಂಗದ ಸೂಪರ್​ ಸ್ಟಾರ್​, ತಲೈವಾ ರಜನಿಕಾಂತ್​ ಚಿಕಿತ್ಸೆ ಬಳಿಕ ಮರಳಿ ಮನೆ ಸೇರಿದ್ದಾರೆ. ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಸೂಪರ್ ಸ್ಟಾರ್ ರಜನಿಕಾಂತ್ ಅವರು ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ಆಗಿ ಮನೆಗೆ ಮರಳಿದ್ದಾರೆ. ಅಕ್ಟೋಬರ್‌ 28ರಂದು ಎದೆ ನೋವು ಹಾಗೂ ಸುಸ್ತು ಕಾಣಿಸಿಕೊಂಡ ಹಿನ್ನೆಲೆ ರಜನಿಕಾಂತ್​ ಅವರನ್ನು ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇತ್ತೀಚೆಗಷ್ಟೇ  ರಜನಿ ಸಣ್ಣ ಶಸ್ತ್ರಚಿಕಿತ್ಸೆ  ಒಂದಕ್ಕೆ ಒಳಗಾಗಿದ್ದರು.  ಬಳಿಕ ಸೂಪರ್‌ಸ್ಟಾರ್‌ ರಜನಿಕಾಂತ್‌ ಚೇತರಿಸಿಕೊಂಡಿದ್ದರು. ಆದರೆ ರೂಟಿನ್​ ಚೆಕ್​ಅಪ್​ಗೆ ಬಂದಾಗ […]

Advertisement

Wordpress Social Share Plugin powered by Ultimatelysocial