ರೈತರಿಗೆ ಅನುಕೂಲ ಆಗಲಿ ಎಂಬ ನಿಟ್ಟಿನಲ್ಲಿ ಕೆಎಂಎಫ್ನ ನಂದಿನಿ ಉತ್ಪನ್ನಗಳಿಗೆ, ನಟ ಪುನೀತ್ ರಾಜ್ಕುಮಾರ್ ಸುಮಾರು 10 ವರ್ಷಗಳಿಂದ ಪ್ರಚಾರ ರಾಯಭಾರಿಯಾಗಿದ್ದರು. ಇದಕ್ಕಾಗಿ ಅವರು ಕೆಎಂಎಫ್ನಿಂದ ಯಾವುದೇ ಸಂಭಾವನೆಯನ್ನು ಪಡೆಯುತ್ತಿರಲಿಲ್ಲ. ಇದೀಗ ಜನಪ್ರಿಯ ನಂದಿನಿ ಹಾಲಿನ ಪ್ಯಾಕೆಟ್ಗಳ ಮೇಲೆ ಪುನೀತ್ ರಾಜ್ಕುಮಾರ್ ಅವರ ಭಾವಚಿತ್ರವನ್ನು ಕೆಎಂಎಫ್ ಮುದ್ರಿಸಿದೆ ಎಂಬ ಫೋಟೊಗಳು, ಕಳೆದ ಎರಡು ದಿನದಿಂದ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಈ ಬಗ್ಗೆ ಕೆಎಂಎಫ್ ಅಧಿಕಾರಿಗಳು ಪ್ರತಿಕ್ರಿಯೆ ನೀಡಿದ್ದಾರೆ. ಪುನೀತ್ ರಾಜ್ಕುಮಾರ್ ಅವರಿಗೆ ಕರ್ನಾಟಕ ಹಾಲು ಮಹಾಮಂಡಳ ವಿಶೇಷ ಗೌರವ ಸಲ್ಲಿಸಿದೆ. ಆದರೆ, ಪುನೀತ್ ಅವರ ಭಾವಚಿತ್ರವನ್ನು ಹಾಲಿನ ಪ್ಯಾಕೆಟ್ಗಳ ಮೇಲೆ ಮುದ್ರಿಸುವ ನಿರ್ಧಾರವನ್ನು ನಾವು ತೆಗೆದುಕೊಂಡಿಲ್ಲ ಎಂದು ಖಚಿತಪಡಿಸಿದ್ದಾರೆ.
ಅಪ್ಪು ಭಾವಚಿತ್ರವಿರುವ ನಂದಿನಿ ಹಾಲಿನ ಪ್ಯಾಕೆಟ್
Please follow and like us: