ಮತ್ತೊಬ್ಬ ನಾಗರೀಕ ಸಾವು, ಮೃತರ ಸಂಖ್ಯೆ 7ಕ್ಕೆ ಏರಿಕೆ.

ಮ್ಮು ಮತ್ತು ಕಾಶ್ಮೀರದ ರಜೌರಿಯಲ್ಲಿ ಹೊಸ ವರ್ಷದ ದಿನದಂದೇ ಉಗ್ರರು ನಡೆಸಿದ ಗುಂಡಿನ ದಾಳಿ ಘಟನೆಗೆ ಸಂಬಂಧಿಸಿದಂತೆ ಮೃತರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ ಎಂದು ಭಾನುವಾರ ತಿಳಿದುಬಂದಿದೆ. ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಜೌರಿಯಲ್ಲಿ ಹೊಸ ವರ್ಷದ ದಿನದಂದೇ ಉಗ್ರರು ನಡೆಸಿದ ಗುಂಡಿನ ದಾಳಿ ಘಟನೆಗೆ ಸಂಬಂಧಿಸಿದಂತೆ ಮೃತರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ ಎಂದು ಭಾನುವಾರ ತಿಳಿದುಬಂದಿದೆ.
ರಜೌರಿಯ ಡ್ಯಾಂಗ್ರಿ ಪ್ರದೇಶದಲ್ಲಿ 3 ಮನೆಗಳ ಮೇಲೆ ದಾಳಿ ಉಗ್ರರು ಜನವರಿ 1 ರಂದು ದಾಳಿ ನಡೆಸಿದ್ದರು. ಈ ವೇಳೆ ಮೂವರು ಸ್ಥಳದಲ್ಲಿಯೇ ಸಾವ್ನಪ್ಪಿದ್ದರು. ಬಳಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಮೂವರು ಸಾವನ್ನಪ್ಪಿದ್ದರು. ಇದೀಗ ಮತ್ತೋರ್ವ ವ್ಯಕ್ತಿ ಸಾವನ್ನಪ್ಪಿದ್ದು, ಘಟನೆ ಸಂಬಂಧ 7 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ. ಉಗ್ರರು ದಾಳಿ ನಡೆಸುತ್ತಿದ್ದಂತೆಯೇ ಭದ್ರತಾ ಪಡೆಗಳು ಕಾರ್ಯಾಚರಣೆ ಆರಂಭಿಸಿದ್ದರು. ಭದ್ರತಾ ಪಡೆಗಳು ಕಾರ್ಯಾಚರಣೆ ಆರಂಭಿಸುತ್ತಿದ್ದಂತೆಯೇ ಉಗ್ರರು ಸ್ಥಳದಿಂದ ಕಾಲ್ಕಿತ್ತಿದ್ದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಅತಿಹೆಚ್ಚು ಮಾರಾಟವಾದ ಟಾಪ್ 5 ಸ್ಮಾರ್ಟ್‌ಫೋನ್‌ಗಳು ಯಾವುವು ಗೊತ್ತಾ?

Mon Jan 9 , 2023
ಭಾರತದಲ್ಲಿ ಅತಿ ಹೆಚ್ಚು ಮಾರಾಟವಾಗುವ ಎಲ್ಲಾ ಸ್ಮಾರ್ಟ್‌ಫೋನ್‌ಗಳ ಪಟ್ಟಿಯಲ್ಲಿ ಇದೇ ಮೊದಲ ಬಾರಿಗೆ ಆಪಲ್ ಕಂಪೆನಿಯ ಸ್ಮಾರ್ಟ್‌ಫೋನ್ ಒಂದು ಅಗ್ರಸ್ಥಾನಕ್ಕೇರಿದೆ. ದೇಶದಲ್ಲಿ ಮಾರಾಟವಾಗುವ ಪ್ರೀಮಿಯಂ ಸ್ಮಾರ್ಟ್‌ಫೋನ್‌ಗಳ ಪೈಕಿ ಹಲವು ವರ್ಷಗಳಿಂದ ಮೊದಲ ಸ್ಥಾನದಲ್ಲೇ ಮುಂದುವರೆದಿದೆ. ಆದರೆ, ಈ ಬಾರಿ ದೇಶದಲ್ಲಿ ಮಾರುಕಟ್ಟೆಯ ಶೇ.4 ಪಾಲನ್ನು ಪಡೆಯುವ ಮೂಲಕ ಐಫೋನ್ 13 ಸಾಧನವು 2022ರ Q4 ನಲ್ಲಿ ಅತ್ಯುತ್ತಮ ಮಾರಾಟವಾದ ಸ್ಮಾರ್ಟ್‌ಫೋನ್ ಎಂಬ ಹೆಗ್ಗಳಿಕೆ ಪಡೆದುಕೊಂಡಿದೆ. ವಿಶೇಷವೆಂದರೆ, ಆಪಲ್ ಐಫೋನ್ 13 […]

Advertisement

Wordpress Social Share Plugin powered by Ultimatelysocial