ಅರುಣ್ ಜೇಟ್ಲಿನಿರ್ಭೀತ, ನೇರ ನಡೆ ನುಡಿಯ, ಅಭಿವೃದ್ಧಿಶೀಲ ಚಿಂತಕ

 

ಅವರು ವಕೀಲರಾಗಿ, ರಾಜಕಾರಣಿಯಾಗಿ, ಅದ್ಭುತ ವಾಗ್ಮಿಯಾಗಿ, ಎದ್ದುಕಾಣುವ ವ್ಯಕ್ತಿತ್ವದವರಾಗಿದ್ದವರು. ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗಲೆಲ್ಲಾ ಸಚಿವರಾಗಿದ್ದ ಅರುಣ್ ಜೇಟ್ಲಿ, ವಿರೋಧ ಪಕ್ಷಗಳ ಟೀಕೆಗಳನ್ನು ಸಮರ್ಥವಾಗಿ ಎದುರಿಸುತ್ತಿದ್ದವರು.
ಅರುಣ್ ಜೇಟ್ಲಿ 1952ರ ಡಿಸೆಂಬರ್ 28ರಂದು ಕಿಶನ್ ಜೇಟ್ಲಿ ಹಾಗೂ ರತನ್ ಪ್ರಭಾ ಜೇಟ್ಲಿ ದಂಪತಿಗಳ ಪುತ್ರರಾಗಿ ದೆಹಲಿಯಲ್ಲಿ ಜನಿಸಿದರು. ತಂದೆ ಕಿಶನ್ ವಕೀಲರಾಗಿದ್ದರು. 1969-70ರಲ್ಲಿ ದೆಹಲಿಯ ಸೇಂಟ್ ಕ್ಸೇವಿಯರ್ಸ್ ಶಾಲೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಮುಗಿಸಿದ ಅವರು, 1973ರಲ್ಲಿ ನವದೆಹಲಿಯ ಶ್ರೀ ರಾಮ್ ಕಾಲೇಜ್ ಆಫ್ ಕಾಮರ್ಸ್ನಲ್ಲಿ ವಾಣಿಜ್ಯ ಪದವಿ ಪೂರೈಸಿದರು. 1977ರಲ್ಲಿ ದೆಹಲಿ ವಿಶ್ವವಿದ್ಯಾನಿಲಯದ ಫ್ಯಾಕಲ್ಟಿ ಆಫ್ ಲಾ ದಿಂದ ಕಾನೂನು ಪದವಿಯನ್ನು ಪಡೆದುಕೊಂಡರು.
ಅರುಣ್ ಜೇಟ್ಲಿ, ವಿದ್ಯಾರ್ಥಿ ಜೀವನದಲ್ಲೇ ಪಠ್ಯೇತರ ಚಟುವಟಿಕೆಗಳಲ್ಲೂ ತೊಡಗಿಸಿಕೊಂಡು ತಮ್ಮ ಪ್ರತಿಭೆಗಳನ್ನು ಹಲವು ರೀತಿಗಳಲ್ಲಿ ಅನಾವರಣಗೊಳಿಸಿದ್ದರು. 70ರ ದಶಕದಲ್ಲಿ ದೆಹಲಿ ವಿಶ್ವವಿದ್ಯಾನಿಲಯದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎ‌ಬಿವಿಪಿ) ನಾಯಕರಾಗಿದ್ದ ಅರುಣ್ ಜೇಟ್ಲಿ, 1974ರಲ್ಲಿ ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದರು. ದೇಶದಲ್ಲಿ ತುರ್ತುಪರಿಸ್ಥಿತಿ ಘೋಷಣೆಯಾದ ಸಂದರ್ಭದಲ್ಲಿ 19 ತಿಂಗಳುಗಳ ಕಾಲ ಸೆರೆವಾಸದಲ್ಲಿದ್ದ ಅರುಣ್ ಜೇಟ್ಲಿ, 1973ರಲ್ಲಿ ಜಯ ಪ್ರಕಾಶ್ ನಾರಾಯಣ್ ನೇತೃತ್ವದಲ್ಲಿ ಆರಂಭವಾದ ಭ್ರಷ್ಟಾಚಾರ ವಿರೋಧಿ ಆಂದೋಲನದಲ್ಲಿ ಸಕ್ರಿಯವಾಗಿ ತೊಡಗಿಕೊಂಡಿದ್ದರು.
ಜಯ ಪ್ರಕಾಶ್ ನಾರಾಯಣ್ ಅವರು ಜೇಟ್ಲಿ ಅವರನ್ನು ವಿದ್ಯಾರ್ಥಿಗಳ ರಾಷ್ಟ್ರೀಯ ಸಮಿತಿ ಹಾಗೂ ಯುವ ಸಂಘಟನೆಯ ಸಂಯೋಜಕರಾಗಿ ನೇಮಕಗೊಳಿಸಿದರು. ಸತೀಶ್ ಝಾ ಹಾಗೂ ಸ್ಮಿತು ಕೋಠಾರಿ ಅವರೊಂದಿಗೆ ನಾಗರಿಕ ಹಕ್ಕು ಚಳುವಳಿಯಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದ ಜೇಟ್ಲಿ, ಪಿಯುಸಿಎಲ್ ಬುಲೆಟಿನ್ ಹೊರತಂದು ಹಲವು ಲೇಖನಗಳನ್ನು ಬರೆದರು. ಜೈಲಿನಿಂದ ಹೊರಬಂದ ಮೇಲೆ ಅವರು ಜನಸಂಘವನ್ನು ಸೇರಿ ಪೂರ್ಣ ಪ್ರಮಾಣದ ರಾಜಕಾರಣಿಯಾದರು.
1977ರಿಂದ ದೇಶದ ಹಲವಾರು ಹೈಕೋರ್ಟ್‌ಗಳಲ್ಲಿ ಹಾಗೂ ಭಾರತದ ಸುಪ್ರೀಂ ಕೋರ್ಟ್ನಲ್ಲಿ ವಕೀಲರಾಗಿ ಕೆಲಸ ಮಾಡಿದ್ದ ಜೇಟ್ಲಿ, 1989ರ ವಿ.ಪಿ. ಸಿಂಗ್ ಸರ್ಕಾರದ ಅವಧಿಯಲ್ಲಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಆಗಿ ನೇಮಕಗೊಂಡರು. ಬೋಫೋರ್ಸ್ ಹಗರಣ ಪ್ರಕರಣದಲ್ಲಿ ಎಲ್ಲಾ ದಾಖಲೆಗಳನ್ನು ಸಂಗ್ರಹಿಸಿ, ಕಾಗದ ವ್ಯವಹಾರಗಳನ್ನು ನೋಡಿಕೊಳ್ಳುವ ಕೆಲಸವನ್ನು ಜೇಟ್ಲಿ ಸಮರ್ಥವಾಗಿ ನಿರ್ವಹಿಸಿದ್ದರು. ಅರುಣ್ ಜೇಟ್ಲಿಯವರಿಗೆ ಜನತಾದಳದ ಶರದ್ ಯಾದವ್ ಅವರಿಂದ ಹಿಡಿದು ಕಾಂಗ್ರೆಸ್‌ನ ಮಾಧವ್‌ರಾವ್ ಸಿಂಧ್ಯಾ, ಬಿಜೆಪಿಯ ಎಲ್.ಕೆ. ಅಡ್ವಾಣಿ ಸೇರಿದಂತೆ ನೂರಾರು ಪ್ರಸಿದ್ಧ ಕಕ್ಷಿದಾರರಿದ್ದರು.
ಜೂನ್ 1998ರಲ್ಲಿ ಮಾದಕ ದ್ರವ್ಯ ಹಾಗೂ ಅಕ್ರಮ ಹಣ ವರ್ಗಾವಣೆ ಹಗರಣಗಳಿಗೆ ಸಂಬಂಧಿಸಿದಂತೆ ನಡೆದ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಸಭೆಯಲ್ಲಿ ಅರುಣ್ ಜೇಟ್ಲಿ ಭಾರತ ಸರ್ಕಾರದ ಪ್ರತಿನಿಧಿಯಾಗಿ ಭಾಗವಹಿಸಿದ್ದರು. 1999ರ ಚುನಾವಣೆಯ ಸಮಯದಲ್ಲಿ ಜೇಟ್ಲಿ ಬಿಜೆಪಿ ವಕ್ತಾರರಾಗಿ ನೇಮಕಗೊಂಡರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/de…

Please follow and like us:

Leave a Reply

Your email address will not be published. Required fields are marked *

Next Post

ಪುತ್ತೂರು ನರಸಿಂಹನಾಯಕ್ ಸಂಗೀತಗಾರರು

Wed Dec 28 , 2022
‘ಪವಮಾನ ಜಗದ ಪ್ರಾಣ’, ‘ಮುನಿಸು ತರವೇ ಮುಗುದೆ’, ‘ಸಂಜೆಯ ರಂಗಕೆ ಬಾನು ಕೆಂಪಾಗಿದೆ’ ಇಂತಹ ಹಾಡುಗಳನ್ನು ಮೆಲುಕು ಹಾಕದವರಿಲ್ಲ. ಈ ಹಾಡುಗಳನ್ನು ತಮ್ಮದೇ ಧಾಟಿಯಲ್ಲಿ ಜನ ಮಾನಸದಲ್ಲಿ ನಲಿಯುವಂತೆ ಮಾಡಿರುವ ಗಾಯಕ ಪುತ್ತೂರು ನರಸಿಂಹನಾಯಕ್. ‘ಭಕ್ತಿ ಗೀತೆ’, ‘ಭಾವ ಗೀತೆ’, ‘ಜನಪದ ಗೀತೆ’, ‘ಚಲನಚಿತ್ರ ಗಾಯನ’ ಹೀಗೆ ವಿವಿಧ ಪ್ರಕಾರಗಳ ಸುಗಮ ಸಂಗೀತ ಗಾಯನದಲ್ಲಿ ತಮ್ಮ ಅಚ್ಚಳಿಯದ ಮುದ್ರೆ ಒತ್ತಿ ಪ್ರಖ್ಯಾತರಾಗಿದ್ದಾರೆ ಗಾಯಕ ಪುತ್ತೂರು ನರಸಿಂಹ ನಾಯಕ್. ನರಸಿಂಹ ನಾಯಕ್ […]

Advertisement

Wordpress Social Share Plugin powered by Ultimatelysocial