ಮನೆಗಳನ್ನು ಧ್ವಂಸ ಮಾಡುವ ಮೂಲಕ ಬಿಜೆಪಿ ಬಡವರ ವಿರುದ್ಧ ಸಮರ ಸಾರಿದೆ ಎಂದು ಎಐಎಂಐಎಂ ಅಧ್ಯಕ್ಷ

 

ಹೈದರಾಬಾದ್: ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶದಂತೆ ದೆಹಲಿಯಲ್ಲೂ ಮನೆಗಳನ್ನು ಧ್ವಂಸ ಮಾಡುವ ಮೂಲಕ ಬಿಜೆಪಿ ಬಡವರ ವಿರುದ್ಧ ಸಮರ ಸಾರಿದೆ ಎಂದು ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಬುಧವಾರ ಆರೋಪಿಸಿದ್ದಾರೆ.

ನವದೆಹಲಿಯ ಗಲಭೆ ಪೀಡಿತ ಜಹಾಂಗಿರ್‌ಪುರಿಯಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ ಆದೇಶದ ಬಗ್ಗೆ ಅವರು ಪ್ರತಿಕ್ರಿಯಿಸಿದ್ದಾರೆ.

ಬಿಜೆಪಿ ಬಡವರ ವಿರುದ್ಧ ಸಮರ ಸಾರಿದೆ. ಅತಿಕ್ರಮಣದ ಹೆಸರಿನಲ್ಲಿ ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶದ ರೀತಿ ದೆಹಲಿಯಲ್ಲೂ ಮನೆಗಳನ್ನು ಕೆಡವಲು ಹೊರಟಿದೆ. ನೋಟಿಸ್ ಇಲ್ಲ, ನ್ಯಾಯಾಲಯಕ್ಕೆ ಹೋಗಲು ಅವಕಾಶವಿಲ್ಲ, ಬದುಕಿಗಾಗಿ ಹೋರಾಡುತ್ತಿರುವ ಬಡ ಮುಸ್ಲಿಮರನ್ನು ಶಿಕ್ಷಿಸಲಾಗುತ್ತಿದೆ’ ಎಂದು ಒವೈಸಿ ಟ್ವೀಟ್ ಮಾಡಿದ್ದಾರೆ.

ಇದರಲ್ಲಿ ದೆಹಲಿ ಲೋಕೋಪಯೋಗಿ ಇಲಾಖೆಯ ಪಾತ್ರದ ಬಗ್ಗೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸ್ಪಷ್ಟಪಡಿಸಬೇಕು ಎಂದು ಅವರು ಹೇಳಿದರು.

‘ಇಂತಹ ದ್ರೋಹ ಮತ್ತು ಹೇಡಿತನಕ್ಕಾಗಿ ಜಹಾಂಗೀರ್‌ಪುರಿಯ ಜನರು ಅವರಿಗೆ ಮತ ಹಾಕಿದ್ದಾರೆಯೇ?! ‘ಪೊಲೀಸರು ನಮ್ಮ ನಿಯಂತ್ರಣದಲ್ಲಿಲ್ಲ’ಎಂಬ ಅವರು ಆಗಾಗ್ಗೆ ಹೇಳುವ ಮಾತುಗಳು ಇಲ್ಲಿ ಕೆಲಸಕ್ಕೆ ಬರುವುದಿಲ್ಲ, ಸಂಪೂರ್ಣ ಹತಾಶ ಪರಿಸ್ಥಿತಿ ನಿರ್ಮಾಣವಾಗಿದೆ’ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಉತ್ತರ ದೆಹಲಿ ಪಾಲಿಕೆಯು ತೆರವು ಕಾರ್ಯಾಚರಣೆಗೆ ಪೊಲೀಸ್ ಭದ್ರತೆ ಮತ್ತು ವಿವಿಧ ಇಲಾಖೆಗಳ ಸಹಕಾರ ಕೋರಿ ಬರೆದಿರುವ ಪತ್ರವನ್ನು ಓವೈಸಿ ಪೋಸ್ಟ್ ಮಾಡಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಇಡೀ ದೇಶದಲ್ಲಿ ಕಾಂಗ್ರೆಸ್ ನ್ನು ಜನರು ತಿರಸ್ಕಾರ ಮಾಡಿಯಾಗಿದೆ.

Wed Apr 20 , 2022
 ಕರ್ನಾಟಕದಲ್ಲಿ ಇನ್ನೂ ಕಾಂಗ್ರೆಸ್ ನ ಜೀವ ಉಳಿದುಕೊಂಡಿದೆ. ಹೀಗಿರುವಾಗ ಕೋಮುವಾದ, ಜಾತ್ಯತೀತವಾದವನ್ನು ಹೇಗೆ ನಿಲ್ಲಿಸುತ್ತಾರೆ. ಹುಬ್ಬಳ್ಳಿ ಪೊಲೀಸ್ ಠಾಣೆ ಮೇಲೆ ದಾಳಿ, ಡಿ ಜೆ ಹಳ್ಳಿ, ಕೆಜೆ ಹಳ್ಳಿ ಗಲಭೆಗಳಿಗೆ ಕಾಂಗ್ರೆಸ್ ಮುಖಂಡರೇ ಕಾರಣ ಎಂದು ಮಾಧ್ಯಮಗಳಲ್ಲಿ ಬರುತ್ತಿದೆ, ಇಂತಹ ಮನಸ್ಥಿತಿ ಇಟ್ಟುಕೊಂಡು ಸುಳ್ಳಿನ ರಾಮಯ್ಯನಾದ ಸಿದ್ದರಾಮಯ್ಯನವರಿರುವ ಕಾಂಗ್ರೆಸ್ ಪಕ್ಷ ಜಾತ್ಯತೀತತೆಯನ್ನು ಉಳಿಸುತ್ತಾರೆಯೇ ಎಂದು ಹೆಚ್ ಡಿ ಕುಮಾರಸ್ವಾಮಿ ಆಕ್ರೋಶದಿಂದ ಪ್ರಶ್ನಿಸಿದ್ದಾರೆ. ಇಂದು ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಎಂದಿನಂತೆ ಸಿದ್ದರಾಮಯ್ಯ […]

Advertisement

Wordpress Social Share Plugin powered by Ultimatelysocial