ಅಸಮರ್ಥ ಸಚಿವರ ವಿರುದ್ಧ ಸಿ.ಟಿ.ರವಿ ಅಸಮಾಧಾನ

 

ಬೆಂಗಳೂರು,ಮಾ.14- ತಾವು ನಿರ್ವಹಿಸುತ್ತಿರುವ ಖಾತೆಗೂ, ಪಕ್ಷಕ್ಕೂ ನ್ಯಾಯ ನೀಡದೆ ಹೊರೆ ಆಗಿರುವವರ ಬಗ್ಗೆ ಮುಖ್ಯಮಂತ್ರಿಗಳು ಗಮನಹರಿಸಬೇಕೆಂದು ಅಸಮರ್ಥ ಸಚಿವರ ವಿರುದ್ಧ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.ವಿಧಾನಸೌಧದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸ್ಥಾನ ನಿಭಾಯಿಸುತ್ತಿರುವ ಕೆಲವರು ತಾವು ನಿರ್ವಹಿಸುತ್ತಿರುವ ಖಾತೆಗೂ, ತಾವಿರುವ ಪಕ್ಷಕ್ಕೂ ನ್ಯಾಯ ಒದಗಿಸದೆ ಅನಗತ್ಯ ಹೊರೆ ಆಗಿರುವವರ ಬಗ್ಗೆ ಮುಖ್ಯಮಂತ್ರಿ ಬೊಮ್ಮಾಯಿ ಅವರು ಗಮನಹರಿಸಬೇಕಾದ ಅಗತ್ಯವಿದೆ ಎಂದು ಹೇಳಿದರು.

ನಿಗಮ ಮಂಡಳಿ ನೇಮಕ ವಿಳಂಬಕ್ಕೆ ಕಾರ್ಯಕರ್ತರಲ್ಲಿ ಅಸಮಾಧಾನವಿದೆ. ವಿಳಂಬದಿಂದ ಹಲವರು ಪರಿಸ್ಥಿತಿಯ ಲಾಭ ಪಡೆದು ಎಂಜಾಯ್ ಮಾಡುತ್ತಿದ್ದಾರೆ. ಪಕ್ಷಕ್ಕೆ ಯಾವುದೇ ಕೊಡುಗೆ ನೀಡದವರನ್ನು ಹುದ್ದೆಯಿಂದ ಕೈಬಿಡಬೇಕು ಎಂದು ಸಿ.ಟಿ.ರವಿ ಹೇಳಿದರು.

ನಿಗಮ ಮಂಡಳಿಗಳಿಗೆ ಈಗಾಗಲೇ ಅಧ್ಯಕ್ಷ, ಉಪಾಧ್ಯಕ್ಷರ ನೇಮಕ ಆಗಬೇಕಿತ್ತು. ಈವರೆಗೆ ಯಾಕೆ ಆಗಿಲ್ಲ ಎಂಬುದು ಗೊತ್ತಿಲ್ಲ ಎಂದರು.ಬಿ.ವೈ.ವಿಜಯೇಂದ್ರ ಅವರಿಗೆ ನೀಡಿರುವ ರಾಜ್ಯ ಬಿಜೆಪಿ ಉಪಾಧ್ಯಕ್ಷ ಹುದ್ದೆ ಸಣ್ಣದಲ್ಲ. ಅದನ್ನು ಸಣ್ಣ ಹುದ್ದೆ ಎಂದು ಪರಿಗಣಿಸಿದರೆ ನಾನು ಏನು ಹೇಳಬೇಕೋ ಗೊತ್ತಿಲ್ಲ ಎಂದು ವಿಜಯೇಂದ್ರ ಅವರಿಗೆ ಸ್ಥಾನಮಾನ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಈ ರೀತಿ ಪ್ರತಿಕ್ರಿಯಿಸಿದರು.

ಅವರಿಗೆ ಸೋಲಿನ ಮೇಲೆ ಸೋಲಾದರೂ, ಅವಮಾನವಾದರೂ ಸೋನಿಯಾ ಗಾಂಧಿಯವರು ಅಧ್ಯಕ್ಷರಾಗಬೇಕೆಂದಿದ್ದಾರೆ. ಕಾಂಗ್ರೆಸ್‍ನವರಿಗೆ ಹಳೆಗಂಡನ ಪಾದವೇ ಗತಿ ಎಂದು ಟೀಕಿಸಿದರು. ಬಿಜೆಪಿ ಸಂಸದೀಯ ಮಂಡಳಿ ಸಭೆಯ ನಂತರ ಗೋವಾ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ಹೋಳಿ ಹಬ್ಬದ ನಂತರ ಗೋವಾ ಸರ್ಕಾರ ರಚನೆಯಾಗಲಿದೆ ಎಂದು ಅವರು ಹೇಳಿದರು.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಫ್ಲೋಟ್ ಫೆಸ್ಟ್ನಲ್ಲಿ ಭಕ್ತರು ಸೇರುತ್ತಿದ್ದಂತೆ ತಿರುಪತಿಯು ಸಾಂಕ್ರಾಮಿಕ ಪೂರ್ವ ಸಹಜ ಸ್ಥಿತಿಗೆ ಮರಳುತ್ತದೆ!

Mon Mar 14 , 2022
ಎರಡು ವರ್ಷಗಳ ಅಂತರದ ನಂತರ, ಮಾರ್ಚ್ 13 ರ ಭಾನುವಾರದಂದು ತಿರುಮಲದಲ್ಲಿ ವಾರ್ಷಿಕ ಫ್ಲೋಟ್ ಉತ್ಸವವು ಅದ್ಭುತವಾದ ಧಾರ್ಮಿಕ ಟಿಪ್ಪಣಿಯಲ್ಲಿ ಪ್ರಾರಂಭವಾಯಿತು. ಕೋವಿಡ್ ನಿರ್ಬಂಧಗಳ ಕಾರಣ, ಈ ಐದು ದಿನಗಳ ವಾರ್ಷಿಕ ಹಬ್ಬವನ್ನು ಏಕಾಂತಮ್‌ನಲ್ಲಿ ಆಚರಿಸಲಾಯಿತು (ಸಾರ್ವಜನಿಕರಿಗೆ ಅವಕಾಶವಿಲ್ಲ, ದೇವಾಲಯದ ಸಿಬ್ಬಂದಿ ಮಾತ್ರ) ಸ್ವಾಮಿ ಪುಷ್ಕರಿಣಿಯಲ್ಲಿ ಕಳೆದ ಎರಡು ವರ್ಷ. ಭಾನುವಾರ ಸೀತಾ, ಲಕ್ಷ್ಮಣ ಮತ್ತು ಆಂಜನೇಯ ಸಮೇತ ಶ್ರೀರಾಮಚಂದ್ರ ಮೂರ್ತಿ ಸ್ವಾಮಿ ಪುಷ್ಕರಿಣಿಯಲ್ಲಿ ಮೂರು ಸುತ್ತು ಅಲಂಕೃತವಾದ ತೇರಿನ […]

Advertisement

Wordpress Social Share Plugin powered by Ultimatelysocial