Asha Workers Protest: ಮತ್ತೆ ಹೋರಾಟ ನಡೆಸಲು ಆಶಾ ಕಾರ್ಯಕರ್ತೆಯರು ಸಜ್ಜು – ನಾಳೆ ಫ್ರೀಡಂ ಪಾರ್ಕ್​ನಲ್ಲಿ ಪ್ರತಿಭಟನೆ

ಸಾವಿರಾರು ಆಶಾ ಕಾರ್ಯ ಕರ್ತರಿಗೆ (Asha Workers) ನೀಡಬೇಕಾದ ಗೌರವಧನವನ್ನೂ ಸರ್ಕಾರ (Government) ಈವರೆಗೆ ನೀಡಲು ಮುಂದಾಗಿಲ್ಲ. ಹೀಗಾಗಿ ಬಾಕಿ ಇರುವ ವೇತನ, ಗೌರವಧನ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ನಾಳೆ ಪ್ರತಿಭಟನೆ (Protest) ನಡೆಸಲು ಮುಂದಾಗಿದ್ದಾರೆ.

ಕಳೆದ ವರ್ಷವಷ್ಟೇ ಹಲವಾರು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದರೂ, ಇದೀಗ ಮತ್ತೆ ಫ್ರೀಡಂ ಪಾರ್ಕ್ನಲ್ಲಿ (Freedom Park) ಧರಣಿ ನಡೆಸಲು ಸಜ್ಜಾಗಿದ್ದು, ಹಲವು ವರ್ಷಗಳಿಂದ ಈಡೇರದ ಬೇಡಿಕೆಗಳನ್ನು ಈಡೇರಿಸುವಂತೆ ಕಾರ್ಯಕರ್ತೆಯರು ಆಗ್ರಹಿಸಲು ನಿರ್ಧರಿಸಿದ್ದಾರೆ.

ಕಳೆದ 15 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಹಲವಾರು ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹ ಧನ ಹೆಚ್ಚು ಮಾಡಿಲ್ಲ, ಕೊಒರನಾ ಸಮಯದಲ್ಲಿ ಸೋಂಕು ಹರಡುವುದನ್ನ ತಡೆಯಲು ಕೊರೊನಾ ವಾರಿಯರ್ಸ್ ಆಗಿ ದಿನದ 24 ಗಂಟೆ ಕೆಲಸ ಮಾಡಿದ್ದೇವೆ. ಆದರೆ ಅದಕ್ಕೆ ಸರಿಯಾದ ಸಂಬಳವನ್ನು ರಾಜ್ಯ ಸರ್ಕಾರ ಕೊಟ್ಟಿಲ್ಲ ಎಂದು ಕಾರ್ಯಕರ್ತೆಯರು ಪರವಾಗಿ ಎಐಯುಟಿಯುಸಿ ಆಗ್ರಹ ಮಾಡಿದೆ.

ಅಲ್ಲದೇ ಆಶಾ ಕಾರ್ಯಕರ್ತೆಯರಿಗೆ ರಾಜ್ಯ ಸರ್ಕಾರ 5 ಸಾವಿರ ಹಾಗೂ ಕೇಂದ್ರ ಸರ್ಕಾರ 3 ಪ್ರೋತ್ಸಾಹ ದನವನ್ನಿ ನಿಗಧಿ ಮಾಡಿದೆ. ಆದರೆ ಕೇಂದ್ರ ಸರ್ಕಾರದಿಂದ ನೀಡುವ ಹಣದಲ್ಲಿ ಕೇವಲ 650 ರೂಪಾಯಿ ಮಾತ್ರ ಸಿಗುತ್ತಿದೆ. ಇದು ಆಶಾ ಕಾರ್ಯಕರ್ತೆಯರಿಗೆ ಅವಮಾನ ಮಾಡಿದ್ದಂತೆ, ಹಾಗಾಗಿ ಪ್ರೋತ್ಸಾಹ ಧನ ಹಾಗೂ ಗೌರವ ಧನವಾಗಿ ಎರಡನ್ನು ಸೇರಿಸಿ ಮಾಸಿಕ ವೇತನ ನೀಡಬೇಕು. ಅಲ್ಲದೇ ಈಗಾಗಲೇ ಆರ್ಸಿಹೆಚ್ ಪೋರ್ಟಲ್ ಡೇಟಾ ಎಂಟ್ರಿಯಲ್ಲಿ ಸಮಸ್ಯೆಯಾಗುತ್ತಿದೆ. ಆ ಸಮಸ್ಯೆಯನ್ನು ಬಗೆಹರಿಸಿ, ಆಶಾ ಕಾರ್ಯಕರ್ತೆಯರಿಗೆ ಉಂಟಾಗಿರುವ ನಷ್ಟವನ್ನು ಸರ್ಕಾರವೇ ಕೊಡಬೇಕು ಎಂದು ಸಂಸ್ಥೆ ಒತ್ತಾಯಿಸಿದೆ.

ಇನ್ನು ಪತ್ರಿಕೋಷ್ಠಿಯಲ್ಲಿ ಮಾತನಾಡಿದ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷೆ ಗಿರಿಜಮ್ಮ, ಆಶಾ ಕಾರ್ಯಕರ್ತೆಯರು ಉತ್ತಮವಾಗಿ ಕೆಲಸ ಮಾಡುತ್ತಾ ಬಂದಿದ್ದಾರೆ. ಪ್ರಾಣದ ಹಂಗು ತೊರೆದು ತಮ್ಮ ಕರ್ತವ್ಯ ನಿರ್ವಹಿಸಿದ್ದಾರೆ. ಹಗಲಿರುಳು ದುಡಿದರೂ ಅವರಿಗೆ ಸಿಗಬೇಕಾದ ಗೌರ ಸಿಗದಿರುವುದು ಶೋಚನೀಯ ಎಂದಿದ್ದಾರೆ.

ಮೈಸೂರಿನ ವೈದ್ಯರೊಬ್ಬರ ಹತ್ಯೆ ಪ್ರಕರಣ – ಆರೋಪಿ ಬರೋಬ್ಬರಿ 350 ಕೋಟಿ ರೂ ಆಸ್ತಿ ಒಡೆಯನಂತೆ

ನಿತ್ಯ ಎರಡು ಗಂಟೆ ಮಾತ್ರ ಕೆಲಸ ಮಾಡುವಂತೆ ಆದೇಶದಲ್ಲಿದೆ. ಕೆಲಸದ ಹೊರೆ ಹೆಚ್ಚಾಗಿದ್ದು, ನಿತ್ಯ ಎಂಟು ಗಂಟೆ ಕೆಲಸ ಮಾಡುವುದು ಅನಿವಾರ್ಯ ಎನ್ನುವಂತಾಗಿದೆ. ಬಜೆಟ್ನಲ್ಲಿ 1 ಸಾವಿರ ಗೌರವ ಧನ ಹೆಚ್ಚು ಮಾಡಲಾಗಿದ್ದರೂ, ಅದು ತೋರಿಕೆಗೆ ಮಾಡಿದಂತಿದೆ. ಬೆಲೆ ಏರಿಕೆ, ಆಶಾ ಕಾರ್ಯಕರ್ತೆಯರಿಗೆ ನೀಡಿದ ಜವಾಬ್ದಾರಿಗೆ ಹೋಲಿಸಿದರೆ ಸರ್ಕಾರ ಆಶಾ ಕಾರ್ಯಕರ್ತೆಯರ ಬಗ್ಗೆ ನಿರ್ಲಕ್ಷ್ಯ ಮಾಡುತ್ತಿರುವುದು ಸರಿಯಾಗಿ ಕಾಣುತ್ತಿದೆ ಎಂದು ಆರೋಪಿಸಿದ್ದಾರೆ.

ಈ ಮೊದಲು ಕೊರೋನಾ ಮೊದಲ ಅಲೆ ರಾಜ್ಯದಲ್ಲಿ ವ್ಯಾಪಕವಾಗಿ ಹರಡಿದ್ದ ಸಂದರ್ಭದಲ್ಲಿ ಸರ್ಕಾರ ಆಶಾ ಕಾರ್ಯಕರ್ತರನ್ನೂ ಕೋವಿಡ್ ವಾರಿಯರ್ ಎಂದು ಘೋಷಿಸಿತ್ತು. ಕೊರೋನಾ ಕೆಲಸದ ವೇಳೆ ಮೃತಪಟ್ಟರೆ 50 ಲಕ್ಷ ಪರಿಹಾರ ಮತ್ತು ಕೂಡಲೇ ಎಲ್ಲರ ಬಾಕಿ ಹಣ ಬಿಡುಗಡೆ ಮಾಡುವುದಾಗಿ ಆಶ್ವಾಸನೆ ನೀಡಿತ್ತು. ಆದರೆ, ಕೊರೋನಾದಿಂದ ಈವರೆಗೆ 16 ಜನ ಆಶಾ ಕಾರ್ಯಕರ್ತರು ಮೃತಪಟ್ಟಿದ್ದು, ಒಬ್ಬರಿಗೆ ಮಾತ್ರ ಪರಿಹಾರ ನೀಡಲಾಗಿತ್ತು. ಸರ್ಕಾರದ ಈ ನಡೆಯನ್ನು ವಿರೋಧಿಸಿ ಕಳೆದ ವರ್ಷ ಪ್ರತಿಭಟನೆ ಮಾಡಿದ್ದರು.

ರಸ್ತೆಯಲ್ಲೇ ವಕೀಲೆ ಮೇಲೆ ಹಲ್ಲೆ – ಕೋರ್ಟ್ ಕಲಾಪ ಬಹಿಷ್ಕರಿಸಲು ಜಿಲ್ಲಾ ವಕೀಲರ ಸಂಘ ಕರೆ

ಆದರೆ, ರಾಜ್ಯ ಸರ್ಕಾರ ಮಾತ್ರ ಈ ಬಗ್ಗೆ ಪ್ರತಿಕ್ರಿಯಿಸುವ ಗೋಜಿಗೆ ಹೋಗಿಲ್ಲ. ಈ ನಡುವೆ ಆಶಾ ಕಾರ್ಯಕರ್ತರು ಮತ್ತೊಮ್ಮೆ ಸರ್ಕಾರದ ವಿರುದ್ಧ ಪ್ರತಿಭಟನೆಗೆ ಮುಂದಾಗಿದ್ದಾರೆ. ಆದರೆ, ಅಸುರಕ್ಷತೆ ಮಧ್ಯೆ ಕೆಲಸ ಮಾಡುತ್ತಿರುವ ಆಶಾ ಕಾರ್ಯಕರ್ತೆಯರ ಬೇಡಿಕೆಗಳನ್ನು ಸರ್ಕಾರ ಇನ್ನಾದರೂ ಪೂರೈಸುತ್ತದೆಯೇ ಎಂಬುದು ಯಕ್ಷ ಪ್ರಶ್ನೆಯಾಗಿದೆ.ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕಿಚ್ಚ ಸುದೀಪ್ ಅವರ 3D ಮಿಸ್ಟರಿ ಥ್ರಿಲ್ಲರ್ 'ವಿಕ್ರಾಂತ್ ರೋಣ' ಚಿತ್ರವನ್ನು ಉತ್ತರ ಭಾರತದಲ್ಲಿ ಸಲ್ಮಾನ್ ಖಾನ್ ಫಿಲ್ಮ್ಸ್ ಪ್ರಸ್ತುತಪಡಿಸಲಿದೆ.

Mon May 16 , 2022
  ಕಿಚ್ಚ ಸುದೀಪ್ ಅಭಿನಯದ ಬಹು ನಿರೀಕ್ಷಿತ ಚಿತ್ರ ‘ವಿಕ್ರಾಂತ್ ರೋಣ’ ಬಿಡುಗಡೆಗೂ ಮುನ್ನವೇ ಭಾರೀ ಸದ್ದು ಮಾಡುತ್ತಿದೆ. ಅದರ ರಿಲೀಸ್ ಡೇಟ್ ಟೀಸರ್ ಬಿಡುಗಡೆಯಾದ ನಂತರ, ಪ್ರೇಕ್ಷಕರು ಮತ್ತು ವಿಮರ್ಶಕರು ಜುಲೈ 28 ರಂದು ಪ್ರಪಂಚದಾದ್ಯಂತದ ರಿಲೀಸ್ ಆಗುವ ಬಗ್ಗೆ ಅದ್ಭುತ ಪ್ರತಿಕ್ರಿಯೆ ನೀಡಿದ್ದಾರೆ ಮತ್ತು ಸಿನಿಪ್ರಿಯರು ಉತ್ಸುಕರಾಗಿದ್ದರು. ಈ ವೈಭವವನ್ನು ಹೆಚ್ಚಿಸಲು, ‘ ವಿಕ್ರಾಂತ್ ರೋಣ ‘ ಚಿತ್ರವನ್ನು ಈಗ ಉತ್ತರ ಭಾರತದಲ್ಲಿ ಸಲ್ಮಾನ್ ಖಾನ್ ಅವರ […]

Advertisement

Wordpress Social Share Plugin powered by Ultimatelysocial