ಸಚಿವ ಆರ್. ಅಶೋಕ ಅವರಿಂದ ಅಧಿಕಾರಿಗಳ ಸಭೆ, ಪೂರ್ವಸಿದ್ಧತೆ ಪರಿಶೀಲನೆ

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇದೇ ಜನವರಿ 19ಕ್ಕೆ ತಾಂಡಾ ನಿವಾಸಿಗಳಿಗೆ ಹಕ್ಕು ಪತ್ರ ವಿತರಿಸಲು ಕಲಬುರಗಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಶುಕ್ರವಾರ ಕಂದಾಯ ಸಚಿವ ಆರ್.ಅಶೋಕ ಅವರು ಕಲಬುರಗಿ ನಗರದ ಐವಾನ್-ಎ-ಶಾಹಿತಿ ಅತಿಥಿಗೃಹದಲ್ಲಿ ಜಿಲ್ಲೆಯ ಜನಪ್ರತಿನಿಧಿಗಳು ಮತ್ತು ಹಿರಿಯ ಅಧಿಕಾರಿಗಳೊಂದಿಗೆ ಪೂರ್ವಸಿದ್ಧತೆ ಪರಿಶೀಲನಾ ಸಭೆ ನಡೆಸಿದರು.
ಪ್ರಧಾನಮಂತ್ರಿಗಳು ಅಂದು ಮಳಖೇಡ್‍ದಲ್ಲಿ ನಡೆಯಲಿರುವ ಬೃಹತ್ ಕಾರ್ಯಕ್ರಮದಲ್ಲಿ ಕಂದಾಯ ಇಲಾಖೆಯ ಇತಿಹಾಸದಲ್ಲಿಯೇ ಏಕಕಾಲದಲ್ಲಿ ಕಲಬುರಗಿ ಸೇರಿದಂತೆ ರಾಯಚೂರು, ಬೀದರ, ಯಾದಗಿರಿ ಹಾಗೂ ವಿಜಯಪುರ ಜಿಲ್ಲೆಗಳ 51,900 ತಾಂಡಾ ನಿವಾಸಿಗಳಿಗೆ ಹಕ್ಕು ಪತ್ರ ವಿತರಣೆ ಮಾಡಲಿದ್ದು, ಕಾರ್ಯಕ್ರಮ ಶಿಷ್ಠಾಚಾರದಂತೆ ಅಚ್ಚುಕಟ್ಟಾಗಿ ನೆರವೇರುವಂತೆ ಎಲ್ಲಾ ಪೂರ್ವಸಿದ್ಧತೆ ಮಾಡಿಕೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.
ಕಾರ್ಯಕ್ರಮಕ್ಕೆ ವಿವಿಧ ಜಿಲ್ಲೆಗಳ ಫಲಾನುಭವಿಗಳ ಜೊತೆಗೆ ಮೋದಿ ಅಭಿಮಾನಿಗಳ ಸಹ ಆಗಮಿಸುವುದರಿಂದ, ಬೃಹತ್ ಜರ್ಮನ್ ವೇದಿಕೆ ನಿರ್ಮಾಣ, ಹೆಲಿಪ್ಯಾಡ್ ನಿರ್ಮಾಣ, ಪಾರ್ಕಿಂಗ್ ವ್ಯವಸ್ಥೆ, ಸುಗಮ ಸಂಚಾರ, ಸಾರ್ವಜನಿಕರ ಮತ್ತು ಗಣ್ಯರ ಆಸನದ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ, ಊಟ, ಸ್ವಚ್ಛತೆ, ಭದ್ರತೆ ಹೀಗೆ ಎಲ್ಲವು ವ್ಯವಸ್ಥಿತವಾಗಿರಬೇಕು. ಅಂದು ಫಲಾನುಭವಿಗಳನ್ನು ಬೆಳಿಗ್ಗೆ ಊರಿನಿಂದ ಬಿಡುವಾಗಲೆ ಉಪಹಾರ ಮಾಡಿಕೊಂಡೇ ಕರೆತರಬೇಕು. ಮುನ್ನೆಚ್ಚರಿಕೆಯಾಗಿ ಕಾರ್ಯಕ್ರಮ ಸ್ಥಳದಲ್ಲಿ ಅಂಬುಲೆನ್ಸ್, ಅಗ್ನಿಶಾಮಕ ವಾಹನ ತೈನಾತಿಸಬೇಕು. ಬೇರೆ ಜಿಲ್ಲೆಗಳಿಂದ ಫಲಾನುಭವಿಗಳನ್ನು ಕರೆತರುವ ಅಧಿಕಾರಿಗಳೊಂದಿಗೆ ಹಿರಿಯ ಅಧಿಕಾರಿಗಳನ್ನು ಸಮನ್ವಯ ಅಧಿಕಾರಿಗಳನ್ನಾಗಿ ಸಾಧಿಸಬೇಕು ಎಂದು ಸೂಚಿಸಿದ ಸಚಿವರು, ಯಾವುದೇ ಲೋಪಕ್ಕೆ ಇಲ್ಲಿ ಅವಕಾಶ ನೀಡಕೂಡದು ಎಂದು ಎಚ್ಚರಿಕೆ ನೀಡಿದರು.
ರಾಜ್ಯ ಹೆದ್ದಾರಿ-10ರಲ್ಲಿ ಅಂದು 60 ಕಿ.ಮಿ. ಅಂತರದಲ್ಲಿ ಅಂಬುಲೆನ್ಸ್ ಸೇವೆ(108) ಒದಗಿಸಬೇಕು. ವಿವಿಧ ಜಿಲ್ಲೆಗಳಿಂದ ಬಸ್‍ಗಳಲ್ಲಿ ಫಲಾನುಭವಿಗಳು ಬರುವುದರಿಂದ ಬಸ್‍ಗಳು ಕೆಟ್ಟಲ್ಲಿ ಕೂಡಲೆ ದುರಸ್ತಿಗೂ ಏರ್ಪಾಡು ಮಾಡಬೇಕು ಎಂದು ಸಚಿವ ಆರ್.ಅಶೋಕ ಸಾರಿಗೆ ಅಧಿಕಾರಿಗಳಿಗೆ ಸೂಚಿಸಿದರು.
ಜನದಟ್ಟನೆಯಾಗದಂತೆ ನೋಡಿಕೊಳ್ಳಿ: ವಿಶೇಷವಾಗಿ ಕಾರ್ಯಕ್ರಮಕ್ಕೆ ಫಲಾನುಭವಿಗಳ ಹೊರತಾಗಿ ಸಾರ್ವಜನಿಕರು, ಮೋದಿ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬರುವುದರಿಂದ ಅಲ್ಲಲ್ಲಿ ಪ್ರವೇಶಕ್ಕೆ ಅವಕಾಶ ನೀಡಿ ಬ್ಯಾರಿಕೇಡ್ ಹಾಕಬೇಕು. ಇಡೀ ಪ್ರಾಂಗಣ ಸುತ್ತಾಕುವಂತಾಗಬಾರದು. ಪೊಲೀಸ್ ಇಲಾಖೆ ಈ ನಿಟ್ಟಿನಲ್ಲಿ ತುಂಬಾ ಎಚ್ಚರಿಕೆಯಿಂದ ಬ್ಯಾರಿಕೇಡ್ ವ್ಯವಸ್ಥೆ ಮಾಡಬೇಕು. ಯಾವುದೇ ರೀತಿಯಲ್ಲಿ ಕಾರ್ಯಕ್ರಮ ಸುತ್ತಮುತ್ತ ಮತ್ತು ರಾಜ್ಯ ಹೆದ್ದಾರಿಯಲ್ಲಿ ಜನದಟ್ಟನೆಯಾಗದಂತೆ ಸುಗಮ ಸಂಚಾರ ವ್ಯವಸ್ಥೆ ಮಾಡಬೇಕು ಎಂದು ಎಸ್.ಪಿ. ಇಶಾ ಪಂತ್ ಅವರಿಗೆ ನಿರ್ದೇಶನ ನೀಡಿದರು.
ಜಿಲ್ಲಾಧಿಕಾರಿ ಯಶವಂತ ವಿ. ಗುರುಕರ್ ಮಾತನಾಡಿ, ಕಾರ್ಯಕ್ರಮ ಸುಗಮ ನಿರ್ವಹಣೆ ಮತು ಯಶಸ್ಸಿಗೆ 11 ಸಮಿತಿಗಳನ್ನು ರಚಿಸಲಾಗಿದ್ದು, ಆಯಾ ಅಧಿಕಾರಿಗಳಿಗೆ ಜವಾಬ್ದಾರಿಯನ್ನು ನೀಡಲಾಗಿದೆ. ಊಟಕ್ಕೆ 200 ಕೌಂಟರ್ ಸ್ಥಾಪಿಸಲಾಗುತಿದ್ದು, 600 ಬಾಣಸಿಗರು ಇರಲಿದ್ದಾರೆ. ಜಿಲ್ಲೆಯ ವಿವಿಧ ಸ್ಥಳಗಳಿಂದ ಫಲಾನುಭವಿಗಳನ್ನು ಕರೆತರಲು 2,582 ಸಾರಿಗೆ ಬಸ್ ವ್ಯವಸ್ಥೆ ಮಾಡಲಾಗಿದ್ದು, ಪ್ರತಿ ಬಸ್‍ಗೆ ಮತ್ತು ಫಲಾನುಭವಿಗಳನ್ನು ನೋಡಿಕೊಳ್ಳಲು ಗ್ರಾಮ ಲೆಕ್ಕಿಗರನ್ನು ನಿಯೋಜಿಸಲಾಗಿದೆ. ಮುಖ್ಯ ವೇದಿಕೆ ಜರ್ಮನ್ ಟೆಂಟ್‍ನಿಂದ ಕೂಡಿರಲಿದ್ದು, ಐದು ಕಡೆ ವಾಹನಗಳ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ ಎಂದು ಇದೂವರೆಗಿನ ಪೂರ್ವಸಿದ್ಧತೆ ಮಾಡಿರುವ ಕುರಿತು ಸಚಿವರಿಗೆ ವಿವರಣೆ ನೀಡಿದರು.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮ್ಮ ಸಿನಿಮಾ 'ಕ್ರಾಂತಿ' ಬಿಡುಗಡೆ ಬ್ಯುಸಿಯಲ್ಲಿದ್ದಾರೆ.

Sat Jan 14 , 2023
ಚಾಲೆಂಜಿಂಗ್ತಮ್ಮ ಸಿನಿಮಾ ‘ಕ್ರಾಂತಿ’ ಬಿಡುಗಡೆ ಬ್ಯುಸಿಯಲ್ಲಿದ್ದಾರೆ. ಬ್ಯಾಕ್ ಟು ಬ್ಯಾಕ್ ‘ಕ್ರಾಂತಿ ಸಿನಿಮಾ ಬಗ್ಗೆ ಪ್ರಚಾರ ಮಾಡುತ್ತಿದ್ದಾರೆ. ಈ ಮಧ್ಯೆ ಹೊಸಪೇಟೆಯಲ್ಲಿ ನಡೆದ ಘಟನೆ ಬಗ್ಗೆ ಎಲ್ಲೂ ಮಾತಾಡಿರಲಿಲ್ಲ. ಈಗ ಸಂದರ್ಶನವೊಂದರಲ್ಲಿ ದರ್ಶನ್ ಹೊಸಪೇಟೆಯಲ್ಲಿ ನಡೆದ ಘಟನೆ ಬಗ್ಗೆ ಮಾತಾಡಿದ್ದಾರೆ. ಅಲ್ಲದೆ 25 ವರ್ಷ ಜರ್ನಿ, ಫ್ಯಾನ್ಸ್ ವಾರ್‌ ಬಗ್ಗೆನೂ ಮಾತಾಡಿದ್ದಾರೆ. ದರ್ಶನ್ ಜೊತೆಗಿನ ಸಂದರ್ಶನದ ಪ್ರೋಮೊವನ್ನು ನಿರೂಪಕ ಆರ್‌ಕೆ ಮಯೂರ್ ರಿಲೀಸ್ ಮಾಡಿದ್ದಾರೆ. ಅದರ ಹೈಲೈಟ್ಸ್ ಇಲ್ಲಿದೆ. ಆರ್ […]

Advertisement

Wordpress Social Share Plugin powered by Ultimatelysocial